ಬೆಳಗಾವಿ: ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸೆ.17ರಂದೇ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ತೋಟದ ಕೆಲಸಕ್ಕೆಂದು ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿ, ಆರೋಪಿ ಮಾಲೀಕನ ತೋಟದಲ್ಲಿ ಶೆಡ್ ನಿರ್ಮಿಸಿಕೊಂಡು ಕೆಲಸ ಮಾಡುತ್ತಿದ್ದರು. ಸೆ.17ರಂದು ಸಂಜೆ ಮಹಿಳೆಯ ಪತಿ ಹೊರಗಡೆ ಹೋಗಿದ್ದಾಗ ತೋಟಕ್ಕೆ ಬಂದ ಮಾಲೀಕ ಶೆಡ್ ಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ್ ಪೊಲೀಸರು ಇದೀಗ ಆರೋಪಿ ಮಾಲೀಕನನ್ನು ಬಂಧಿಸಿದ್ದಾರೆ.