ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಇಂದು ಗಂಡು ಮಗು ಜನನವಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ಈ ಹಿನ್ನಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

Ad Widget ... ..

ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.

Ad Widget

ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

Leave a Comment

Your email address will not be published. Required fields are marked *