Ad Widget .

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹೆಸರಿನಲ್ಲಿ ಯೋಜನೆ ಮುಂದುವರೆಯಲಿದೆ.

Ad Widget . Ad Widget . Ad Widget .

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟ ವಿಸ್ತರಿಸಲಾಗಿದೆ. ವಿಶೇಷ ದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಂದಲೂ ಊಟ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಪೌಷ್ಟಿಕ ತರಕಾರಿ, ಹಣ್ಣು ಬೆಳೆಯಲು ಕೈತೋಟ ನಿರ್ಮಾಣಕ್ಕೆ ಉತ್ತೇಜನ ನೀಡಲಾಗುತ್ತದೆ.

ರೈತರು ಮತ್ತು ಸ್ವಸಹಾಯ ಗುಂಪುಗಳ ನೆರವು ಪಡೆಯಲಾಗುವುದು. ಸಾಂಪ್ರದಾಯಕ ತಿನಿಸುಗಳ ಬಳಕೆಗೆ ಉತ್ತೇಜನ ನೀಡಲಾಗುವುದು. ಯೋಜನೆಯ ಹೆಸರು ಬದಲಾವಣೆಯೊಂದಿಗೆ ಹೊಸರೂಪ ಕೊಡಲಾಗಿದೆ. ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆ ಮಕ್ಕಳಿಗೂ ಯೋಜನೆ ವಿಸ್ತರಿಸಲಾಗಿದೆ.

Leave a Comment

Your email address will not be published. Required fields are marked *