ಮೇಘಾಲಯ: ಇಲ್ಲಿನ ಶಿಲ್ಲಾಂಗ್ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ, ಬಸ್ ಚಾಲಕ ಸೇರಿದಂತೆ 6 ಜನರು ಆ ಹೊತ್ತಿಗಾಗಲೇ ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ
ಘಟನೆಯ ಮಾಹಿತಿ ದೊರೆತ ಕೂಡಲೆ ರಾಂಗ್‌ಜೆಂಗ್ ಮತ್ತು ವಿಲಿಯಂನಗರದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ರಕ್ಷಣಾ ತಂಡವು ಸಂತ್ರಸ್ತರಿಗೆ ಸಹಾಯ ಮಾಡಲು ಅಪಘಾತ ಸ್ಥಳಕ್ಕೆ ಧಾವಿಸಿತು. ಆರು ಜನರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಗಾಯಾಳುಗಳನ್ನು ರೊಂಗ್‌ಜೆಂಗ್ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ “ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ. ಕಾಏಕಿ ಬಸ್ ನದಿಗೆ ಉರುಳಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.