ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಪ್ರತಿ ವರ್ಷ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆಯೊಂದಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಕೊರೊನಾದಿಂದಾಗಿ ಈ ಬಾರಿಯೂ ಮಂಗಳೂರು ದಸರಾ ಮರೆವಣಿಗೆ ಇಲ್ಲದೆ ಶಾರದಾ ಮೂರ್ತಿಯ ವಿಸರ್ಜನೆಯನ್ನು ಕಳೆದ ವರ್ಷದಂತೆ ಈ ವರ್ಷವೂ, ಕ್ಷೇತ್ರದ ಆವರಣದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ. ಅದೇ ರೀತಿ ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ ವಾಕ್ಯದಡಿ ದಸರಾ ಕಾರ್ಯಕ್ರಮ ನಡೆಯಲಿದೆ.
ಇನ್ನು ದಸರಾ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕೋವಿಡ್–19 ಲಸಿಕೆಯನ್ನು ವ್ಯವಸ್ಥೆಯನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ಮಾಡಲಾಗುತ್ತದೆ. 18 ವರ್ಷ ದಾಟಿದವರು ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆಯುವವರು ಆಧಾರ್ ಕಾರ್ಡ್ ತರುವುದು ಕಡ್ಡಾಯ. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆತನಕ ಲಸಿಕೆ ಲಭ್ಯವಿರುತ್ತದೆ. ಅಲ್ಲದೆ ದೇವಾಲಯ ಮತ್ತು ದರ್ಬಾರ್ ಮಂಟಪದಲ್ಲಿ ಕಡ್ಡಾಯವಾಗಿ ಫೋಟೊ ನಿಷೇಧಿಸಲಾಗಿದೆ’ ಎಂದು ತಿಳಿಸಿದರು.
ಪಾಲಿಕೆಯಿಂದ ರಾಜಬೀದಿ ವಿದ್ಯುದ್ದೀಪಾಲಂಕಾರ’ ‘ಮಂಗಳೂರು ದಸರಾ’ ಮಹೋತ್ಸವದ ಅಂಗವಾಗಿ ನಗರದ ಸುಮಾರು 6–7 ಕಿ.ಮೀ. ರಾಜಬೀದಿಯಲ್ಲಿ ವಿದ್ಯುದ್ದೀಪಾಲಂಕಾರಕ್ಕೆ ಮಂಗಳೂರು ಮಹಾನಗರ ಪಾಲಿಕೆಯಿಂದ ವ್ಯವಸ್ಥೆಗೆ ಪಾಲಿಕೆ ಸಮ್ಮತಿಸಿರುವುದು ಹಾಗೂ ಇದಕ್ಕೆ ಸಹಕರಿಸಿರುವ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ ತಿಳಿಸಿದರು.