ಮೈಸೂರು : ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇಂದಿನಿಂದ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ನೆರವೇರಲಿದೆ. ಆದ್ದರಿಂದ ಇಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದರೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.