Ad Widget .

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget . Ad Widget . Ad Widget .

ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಅರಮನೆಗೆ ತೆರಳಿದ ಅವರು, ಪ್ರಮೋದಾಮೋದಿ ಅವರಿಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಿದರು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಇನ್ನು ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಸಾಂಪ್ರದಾಯಿಕ ಮತ್ತು ಸರಳವಾಗಿ ನಡೆಯುತ್ತಿದ್ದು, ಜನ ಜಾತ್ರೆಗೆ ಅವಕಾಶ ಮಾಡಿಕೊಡದೆ ಕೋವಿಡ್ ಹರಡುವಿಕೆ ತಡೆಯಲು ಕೋವಿಡ್ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದರಂತೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಮತ್ತು ಜಂಬೂಸವಾರಿಗೆ ಕೆಲವೇ ಸೀಮಿತ ಜನರಿಗೆ ಅವಕಾಶ ಮಾಡಿಕೊಡಲಾಗಿದೆ.

ಅದರಂತೆ ಅ.7ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಅ.15ರಂದು ಅರಮನೆ ಆವರಣದಲ್ಲಿ ನಡೆಯುವ ಜಂಬೂ ಸವಾರಿಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನಂತೆ ಪ್ರತ್ಯೇಕ ಷರತ್ತುಗಳನ್ನೊಳಗೊಂಡ ಮಾರ್ಗಸೂಚಿ ರೂಪಿಸಿದ್ದು, ಅದರಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕಡ್ಡಾಯವಾಗಿ ದಸರಾ ಉದ್ಘಾಟನೆಗೆ ನಾನೂರು ಜನರಿಗೆ ಹಾಗೂ ಜಂಬೂಸವಾರಿಗೆ ಐನೂರು ಮಂದಿಗೆ ಅವಕಾಶ ನೀಡಲಾಗಿದೆ.

ಅರಮನೆ ಆವರಣದಲ್ಲಿ ಅ.7ರಿಂದ 13ರವರೆಗೆ ನಡೆಯಲಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳೀಯ ಪ್ರತಿದಿನ ಎರಡು ಗಂಟೆಗಳು ಗರಿಷ್ಠ ಐನೂರು ಜನರಿಗೆ ಮೀರದಂತೆ ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ. ನಗರದಲ್ಲಿ ಅ.7ರಿಂದ ಸಂಜೆ 7ಗಂಟೆಯಿಂದ 9ಗಂಟೆವರೆಗೆ ಹತ್ತು ದಿನಗಳ ಕಾಲ ಆಯ್ದ ಸ್ಥಳಗಳಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಲು ಮಾತ್ರ ಅನುಮತಿ ನೀಡಲಾಗಿದೆ. ಪೊಲೀಸ್ ಸಿಬ್ಬಂದಿ ಆಯಕಟ್ಟಿನ ಸ್ಥಳಗಳಲ್ಲಿ ಜನದಟ್ಟಣೆಯಾಗುವುದನ್ನು ತಡೆಯುವುದು ಮತ್ತು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಪರಿಶೀಲಿಸುವುದು. ಅ.15ರಂದು ಜಂಬೂಸವಾರಿಗೆ ಕೋವಿಡ್-19 ಮುಂಜಾಗ್ರತಾ ಕ್ರಮಗಳೊಂದಿಗೆ ಕಡ್ಡಾಯವಾಗಿ 500 ಜನರಿಗೆ ಮಾತ್ರ ಪ್ರವೇಶ ಕಲ್ಪಿಸುವಂತೆ ಆದೇಶ ನೀಡಲಾಗಿದೆ.

ಅರಮನೆಯ ಆವರಣದಲ್ಲಿ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವ ಷರತ್ತು ವಿಧಿಸಲಾಗಿದೆ. ಕಾರ್ಯಕ್ರಮಗಳನ್ನು ಮೈಸೂರಿನಲ್ಲಿ ದೃಶ್ಯ ಸಂವಹನ(ವರ್ಚ್ಯುಯಲ್) ಮೂಲಕ ಸಾರ್ವಜನಿಕರು ವೀಕ್ಷಿಸಲು ಅವಕಾಶ ಮಾಡಿಕೊಡುವ ಮೂಲಕ ಕಾರ್ಯಕ್ರಮಗಳಿಗೆ ಜನರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೆಲ್ಲದರ ನಡುವೆ ದಸರಾ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕರ್ತವ್ಯನಿರತ ಅಧಿಕಾರಿಗಳು, ಸಿಬ್ಬಂದಿಗಳು, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಮತ್ತು ಮಾಧ್ಯಮದವರು ಒಳಗೊಂಡಂತೆ ಅ.4ರ ನಂತರ ಕೋವಿಡ್-19 ಆರ್ಟಿಪಿಸಿಆರ್ ತಪಾಸಣೆ ನಡೆಸಿ ಸೋಂಕು ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ ಮತ್ತು ಕನಿಷ್ಠ ಒಂದು ಡೋಸ್ ಕೋವಿಡ್-19 ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ.

Leave a Comment

Your email address will not be published. Required fields are marked *