Ad Widget .

ಈದ್ ಸಾಮೂಹಿಕ ‌ಮೆರವಣಿಗೆಗೆ‌ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ‌ ಸರ್ಕಾರ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು- ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ.

Ad Widget . Ad Widget . Ad Widget .

ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್‍ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಖಗವಸು ಧರಿಸಬೇಕು, ಧ್ವನಿವರ್ಧಕಗಳ ಬಳಕೆಯನ್ನು ನಿಷೇಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು.

ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚು ಜನರು ಆಗಮಿಸುವಂತಿಲ್ಲ. ಸ್ಯಾನಿಟೈಜರ್ ಬಳಸಬೇಕು. ಮಸೀದಿಗಳಲ್ಲಿ ಕನಿಷ್ಟ ಆರು ಅಡಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು. ಹಬ್ಬದ ಸಂದರ್ಭದಲ್ಲಿ ಶಾಂತಿ-ಸೌಹಾರ್ದತೆಗೆ ಪೂರಕವಾಗಿ ಆಚರಣೆ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕಾಪಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮಸೀದಿ ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Leave a Comment

Your email address will not be published. Required fields are marked *