ಬೆಳ್ತಂಗಡಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ವ್ಯಕ್ತಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿದ್ದ ಗಿರಿರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಇವರು ಮೇಲಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚೀಟಿಯಲ್ಲಿ ಬರೆದಿಟ್ಟು ಸೆ.28 ರಂದು ನಾಪತ್ತೆಯಾಗಿದ್ದರು. ಚೀಟಿ ನೋಡಿ ಆಘಾತಗೊಂಡಿದ್ದ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಒಂದು ವಾರದಿಂದ ನಾಪತ್ತೆಯಾಗಿದ್ದರಿಂದ ಗಿರಿರಾಜ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ಇದೀಗ 10 ದಿನಗಳ ಬಳಿಕ ಗಿರಿರಾಜ್ ಅಸ್ವಸ್ಥ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ಪರಿಚಯ ಕೇಳಿದಾಗ, ಗಿರಿರಾಜ್ ಎಂದು ಹೇಳಿದ್ದು ಸಂಶಯಗೊAಡು ಪೊಲೀಸರಿಗೆ ಮಾಹಿತಿ ನೀಡಿದ್ದರು
ಈ ಬಗ್ಗೆ ಶಿವಮೊಗ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಡೆತ್ ನೋಟ್ ಬರೆದಿಟ್ಟಿದ್ದ ಬಗ್ಗೆ ತನಿಖೆ ನಡೆಸಲಿದ್ದಾರೆ.