ದೆಹಲಿ: ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈ ಹಿಂದೆ ಅಂದ್ರೆ, 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004 ರಲ್ಲಿ ಸ್ಟೆಂಟ್ ಕೂಡ ಅಳವಡಿಸಲಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನಮೋಹನ್ ಸಿಂಗ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಅಂತ ಸಿಂಗ್ ಕುಟುಂಬದ ಮೂಲಗಳು ತಿಳಿಸಿವೆ. ಇನ್ನು ಸಿಂಗ್ ಕಳೆದ ತಿಂಗಳ 26ರಂದು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.