Ad Widget .

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ” ಅಂತಾ ಹೇಳಿದ್ದರು.

Ad Widget . Ad Widget . Ad Widget .

ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, “ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್‌ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ. ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ಕೆಲಸ ನಿಮ್ಮದು ಎಂದು ತಿಳಿದುಕೊಳ್ಳಬಹುದೇ?” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ “ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತದೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ? ಸಿಎಂ ಅವರೇ ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗೆ ಇದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Leave a Comment

Your email address will not be published. Required fields are marked *