ಹವಾಮಾನ ವರದಿ| ಮಾ.30, 31ರಂದು ಕರಾವಳಿಯಲ್ಲಿ ಮಳೆ ಸಾಧ್ಯತೆ| ದ.ಕ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ಮಾರ್ಚ್ ತಿಂಗಳ ಕೊನೆಯ ಎರಡು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಾ.31 ಮತ್ತು ಎ.1 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ “ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಈ ವೇಳೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ. ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, […]










