ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ| ಅಧಿಕಾರಿಯ ಸಸ್ಪೆಂಡ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ
ಸಮಗ್ರ ನ್ಯೂಸ್: ವಿವಿಧ ವೃತ್ತಿಪರ ಕೋರ್ಸ್ಗಳಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರವು ಬುಧವಾರ ಹಾಗೂ ಗುರುವಾರ ಯುಜಿಸಿಇಟಿ-25 ಪರೀಕ್ಷೆಯನ್ನು ನಡೆಸಿದ್ದು, ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕತ್ತರಿ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಚಿವರು, ಶಾಸಕರಿಂದಲೂ ತೀವ್ರ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ










