Editor

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ| ಸರ್ಕಾರದ ಸ್ಪಷ್ಟನೆ Read More »

16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ?

ಸಮಗ್ರ ನ್ಯೂಸ್: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು,  4.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು 16ನೇ ದಾಖಲೆ ಬಜೆಟ್ ಮಂಡಿಸಿದ್ದು, ಮಂಡಿ ನೋವಿನ ಕಾರಣ ಈ ಬಾರಿ ಸದನದಲ್ಲಿ ಕುಳಿತುಕೊಂಡೆ 3 ಗಂಟೆ 30 ನಿಮಿಷ ಬಜೆಟ್‌ ಮಂಡಿಸಿದ್ದಾರೆ. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು? ಈ ಬಾರಿಯ

16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ? Read More »

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ

ಸಮಗ್ರ ನ್ಯೂಸ್ : ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

ಎರಡು ಬೈಕ್ ಮುಖಾಮುಖಿ ಡಿಕ್ಕಿ.. ನಾಲ್ವರು ಯುವಕರು ದುರಂತ ಅಂತ್ಯ Read More »

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ

ಸಮಗ್ರ ನ್ಯೂಸ್‌: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಭಕ್ತರಿಗೆ ನೀಡುವ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲೆ ವಡೆಯನ್ನು ನೀಡುತ್ತಿದ್ದು, ಟಿಟಿಡಿ ಅಧ್ಯಕ್ಷ ಬಿ.ಆ‌ರ್. ನಾಯ್ಡು ಮತ್ತು ಇತರ ಅಧಿಕಾರಿಗಳು ತಿರುಮಲದ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದಂ ಭವನದಲ್ಲಿ ‘ಮಸಾಲಾ ವಡಾ’ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕೃತ ಪ್ರಕಟಣೆ ತಿಳಿಸಿದೆ. ಅನ್ನ ಪ್ರಸಾದ ಮೆನುವಿನಲ್ಲಿ ಹೆಚ್ಚುವರಿ ತಿಂಡಿಯನ್ನು ಸೇರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಕಳುಹಿಸಿ ಕೊಡಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ/ ಇನ್ಮುಂದೆ ಅನ್ನ ಪ್ರಸಾದದ ಜೊತೆ ಸಿಗಲಿದೆ ಮಸಾಲೆ ವಡೆ Read More »

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌

ಸಮಗ್ರ ನ್ಯೂಸ್‌: ಸದ್ಯದಲ್ಲೇ ಐಪಿಎಲ್ ಅಬ್ಬರ ಶುರುವಾಗಲಿದ್ದು, ಹೀಗಾಗಿ ಮಾರ್ಚ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಅನ್‌ಬಾಕ್ಸ್ ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಸೋಲ್ಡ್ ಔಟ್ ಆಗಿವೆ. ಪ್ರತಿ ವರ್ಷದಂತೆ ಇಂಡಿಯನ್ ಪ್ರೀಮಿಯರ್ ಲೀಗ್‌ಗೂ ಮುಂಚಿತವಾಗಿ ಐಕಾನಿಕ್ ಆರ್‌ಸಿಬಿ ಆನ್‌ಬಾಕ್ಸ್ ಈವೆಂಟ್‌ನ ಟಿಕೆಟ್‌ಗಳ ಆನ್‌ಲೈನ್ ಸೇಲ್ ಇಂದು ಆರಂಭವಾಗಿತ್ತು. ಆರಂಭವಾದ ಒಂದೇ ಗಂಟೆಯೊಳಗೆ ಟಿಕೆಟ್‌ಗಳು ಮಾರಾಟವಾಗಿವೆ. ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಆರ್‌ಸಿಬಿ

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌ Read More »

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ. 25ರಿಂದ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಗದ ಕಾರಣ, ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಪೊಲೀಸರಿಗೆ ತನಿಖೆ ನಡೆಸಿ ಮಾ.12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ. ವಿದ್ಯಾರ್ಥಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್

ನಾಪತ್ತೆಯಾಗಿ 10 ದಿನ ಕಳೆದರೂ ಪತ್ತೆಯಾಗದ ದಿಗಂತ್| ಕುಟುಂಬಸ್ಥರಿಂದ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ| ಮಾ 12ರ ಒಳಗಾಗಿ‌ ವರದಿ ಸಲ್ಲಿಸಲು ಕೋರ್ಟ್ ಆದೇಶ Read More »

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು , ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದಕೀಯ ಕಾಲೇಜ್ ಘೋಷಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ಧೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಾರ್ಥ್ಯದ ತಾಲೂಕು ಆಸ್ಫತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಬಜೆಟ್

ಪುತ್ತೂರಿಗೆ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ| ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬರ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ಧರ್ಮಸ್ಥಳ‌ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು ಹಿಡಿದು ಕೊಂಡೋಗಿ ಅವರಿಗೆ ಯಾವರೀತಿ ಹಿಂಸೆ ಮಾಡುತ್ತೀರಿ, ಯಾವ ಲೀಸ್ ,ನ್ಯಾಯಾಲಯದ ಎದುರು ನಿಲ್ಲಿಸುತ್ತೀರಿ ಅದಕ್ಕೆ ನಮ್ಮ ಬೆಂಬಲವಿದೆ, ಆದರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ವಿರುದ್ದ ಅವಹೇಳನ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಪುತ್ತೂರಿನಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್

ಪುತ್ತೂರು: ಯೂಟ್ಯೂಬರ್ ಸಮೀರ್ ವಿರುದ್ಧ ವಿಎಚ್ ಪಿ ಗರಂ Read More »

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ. ಸಮೀರ್ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿತ್ತು. “ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿಗಳ ಬಗ್ಗೆ ಧಾರ್ಮಿಕ

ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ತರಾಟೆ| ಪ್ರಕರಣ ವಜಾಗೊಳಿಸಿದ ಹೈಕೋರ್ಟ್ Read More »

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ… ಫಿಕ್ಸ್ ..!

ಸಮಗ್ರ ನ್ಯೂಸ್: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ಮೀಟರ್ ದರ ಏರಿಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಆಟೋ ಮೀಟರ್ ದರ ಹೆಚ್ವಳ ಮಾಡಿ ನಾಲ್ಕು ವರ್ಷ ಆಗಿದೆ. ಈಗ ಸಿಎನ್ಜಿ ಹಾಗೂ ಎಲ್ಪಿಜಿ ದರ ಹೆಚ್ಚಳವಾಗಿದೆ. ಹಾಗಾಗಿ ಬೆಂಗಳೂರು ಆಟೋ ಮೀಟರ್ ದರ ಹೆಚ್ಚಳಕ್ಕೆ ಚರ್ಚೆಗಳು ನಡೆದಿವೆ. ಕಳೆದ ವರ್ಷವೇ ಆಟೋ ಚಾಲಕ ಸಂಘಟನೆಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ದರ ಏರಿಕೆ ಮಾಡುವಂತೆ ಮನವಿ ಮಾಡಿದ್ದವು.

ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆ… ಫಿಕ್ಸ್ ..! Read More »