ರಾಜ್ಯದ ಜನತೆಗೆ ಮತ್ತೊಂದು ಶಾಕ್.. ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ..!
ಸಮಗ್ರ ನ್ಯೂಸ್: ಇತ್ತೀಚೆಗೆ ಎಲ್ಲದರಲ್ಲೂ ಬೆಲೆ ಏರಿಕೆ ಬಿಸಿ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ ಏರಿಕೆ ಆಗಲಿದೆ ಎಂಬ ಚರ್ಚೆ ಈಗಾಗಲೇ ಕೇಳಿ ಬರುತ್ತಿದೆ. ಅದರಂತೆ ವಿಧಾನ ಪರಿಷತ್ತಿನಲ್ಲಿ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪವಾಗಿದೆ. ಹಾಲು ಉತ್ಪಾದಕರಿಗೆ ಸರ್ಕಾರ 656.07 ಕೋಟಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ವಿಚಾರವಾಗಿ ಸದನದಲ್ಲಿ ಆಕ್ಷೇಪ ಶುರುವಾಯಿತು.
ರಾಜ್ಯದ ಜನತೆಗೆ ಮತ್ತೊಂದು ಶಾಕ್.. ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ..! Read More »










