Editor

ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ

ಸಮಗ್ರ ನ್ಯೂಸ್: ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಗೊಂದಲ ಮತ್ತು ಹೈಡ್ರಾಮ ನಡೆದಿದೆ. ಈ ಪ್ರತಿಭಟನೆಯ ನೂಕುನುಗ್ಗಲಿನ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಚಿನ್ನದ ಸರ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೋಟೆ ಪೊಲೀಸ್ ಠಾಣೆಯ ಎಎಸ್‌ಐ ಅಮೃತಾಬಾಯಿ ಅವರು ಕರ್ತವ್ಯದಲ್ಲಿದ್ದ ವೇಳೆ ಸುಮಾರು 60 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಇತ್ತೀಚಿಗಷ್ಟೇ ಹೊಸದಾಗಿ ಚಿನ್ನದ ಸರ ಖರೀದಿಸಿದ್ದ ಅಮೃತಾಬಾಯಿ, ಸರ ನಾಪತ್ತೆಯಾದ ನಂತರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. […]

ಶಿವಮೊಗ್ಗ: ಕಾಂಗ್ರೆಸ್ ಪ್ರತಿಭಟನೆ ವೇಳೆ ಮಹಿಳಾ ಎಎಸ್ಐ ನ ಚಿನ್ನದ ಸರ ನಾಪತ್ತೆ Read More »

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ್ಯವಿಲ್ಲದೆ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದರಿಂದ ಮಂಕಾಗಿದ್ದ ಚಿನ್ನಯ್ಯ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಚಿನ್ನಯ್ಯ ರಿಲೀಸ್ ಆಗಿದ್ದಾನೆ. ನಿನ್ನೆ ಚಿನ್ನಯ್ಯ ಪತ್ನಿ ಮಲ್ಲಿಕಾ ಒಂದು ಲಕ್ಷ ಬಾಂಡ್ ಕೊಟ್ಟಿದ್ದು, ಜೊತೆಗೆ ಇಬ್ಬರು ಜಾಮೀನುದಾರರು ಮತ್ತು ಒಬ್ಬರ ಶ್ಯೂರಿಟಿ ಕೊಡಿಸಿದ್ದಾರೆ. ಬಳಿಕ ಕೋರ್ಟ್, ಡಿಸೆಂಬರ್ 17 ರಂದು

ಧರ್ಮಸ್ಥಳ ಬುರುಡೆ ಪ್ರಕರಣ| ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ Read More »

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ

ಸಮಗ್ರ ನ್ಯೂಸ್: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹಲಕ್ಷ್ಮಿ ಯೋಜನೆಗೆ

ಗೃಹಲಕ್ಷ್ಮಿ‌ಹಣ ಲೆಕ್ಕದಲ್ಲಿ ಎಡವಿದ ಸಚಿವೆ| ಆರ್ಥಿಕ ಇಲಾಖೆಯನ್ನು ಹೊಣೆ ಮಾಡಿದ ಡಿಸಿಎಂ Read More »

IPL ಹರಾಜು ಪ್ರಕ್ರಿಯೆ| ಬರೋಬ್ಬರಿ 25.2 ಕೋಟಿಗೆ ಗ್ರೀನ್ ಖರೀದಿಸಿದ KKR

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ

IPL ಹರಾಜು ಪ್ರಕ್ರಿಯೆ| ಬರೋಬ್ಬರಿ 25.2 ಕೋಟಿಗೆ ಗ್ರೀನ್ ಖರೀದಿಸಿದ KKR Read More »

ಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ| ಆರೋಪಿ ಮನೆ, ದನದ ಕೊಟ್ಟಿಗೆ ಸೀಜ್

ಸಮಗ್ರ ನ್ಯೂಸ್: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಕುರಿತಂತೆ ಇದೀಗ ದಕ್ಷಿಣಕನ್ನಡ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಆರೋಪಿಯ ಮನೆ ಮತ್ತು ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ದಿನಾಂಕ 13-12-2025 ರಂದು ಸಂಜೆ, ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಸದ್ರಿ ಗೂಡ್ಸ್

ಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ| ಆರೋಪಿ ಮನೆ, ದನದ ಕೊಟ್ಟಿಗೆ ಸೀಜ್ Read More »

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಸಮಗ್ರ ನ್ಯೂಸ್: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ Read More »

ಡಿಜಿಟಲ್ ಅರೆಸ್ಟ್| ಬೆಂಗಳೂರಿನಲ್ಲಿ 1.38 ಕೋಟಿ ಕಳೆದುಕೊಂಡ ವೃದ್ಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ನಿಂದ ವೃದ್ಧರೊಬ್ಬರು ಬರೋಬ್ಬರಿ 1.32 ಕೋಟಿ ರೂ. ಕಳೆದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ವರದರಾಜನ್ (83) ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು 1.32 ಕೋಟಿ ರೂ. ವಂಚಿಸಿದ್ದಾರೆ. ಆರ್ ಬಿಐ, ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿದ್ದಾರೆ. ಮನಿಲಾಂಡರಿಂಗ್ ಆಗಿದೆ ಎಂದು ಹೆದರಿಸಿ 1.32 ಕೋಟಿ ರೂ. ಪಡೆದು ವೃದ್ಧರಿಗೆ ವಂಚಿಸಿದ್ದಾರೆ. ನವೆಂಬರ್ 19ರಿಂದ ಡಿಸೆಂಬರ್ 6ರವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ

ಡಿಜಿಟಲ್ ಅರೆಸ್ಟ್| ಬೆಂಗಳೂರಿನಲ್ಲಿ 1.38 ಕೋಟಿ ಕಳೆದುಕೊಂಡ ವೃದ್ಧ Read More »

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಇದೀಗ ಆಯೋಜಕರು ದಫ್ ಪ್ರದರ್ಶನವನ್ನು ಕೈ ಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ

ಸುಳ್ಯ: ದೇವಸ್ಥಾನದ ಮುಂದೆ ದಫ್ ಪ್ರದರ್ಶನಕ್ಕೆ ಅವಕಾಶ| ಮಸೀದಿ ಮುಂದೆ ಹನುಮಾನ್ ಚಾಲೀಸಾ ಪಠಣ ಎಚ್ಚರಿಕೆ Read More »

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »