Editor

ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ

ಸಮಗ್ರ ನ್ಯೂಸ್: 119ನೇ ಮನ್‌ ಕಿ ಬಾತ್‌ ಕಾರ್ಯಕ್ರಮ ಫೆ. 23ರಂದು ಪ್ರಸಾರವಾಯಿತು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಹುಲಿ ವೇಷದ ಕುರಿತು ಪ್ರಸ್ತಾಪಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಕರ್ನಾಟಕದ ಹಲವು ವೈಶಿಷ್ಟ್ಯಗಳ ಬಗ್ಗೆ ಮಾತನಾಡುತ್ತಾ ಅವರು ರಾಜ್ಯದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸುವುದರ ಜೊತೆಗೆ ಹುಲಿ ವೇಷ ಹಾಕುವವರನ್ನೂ ಹಾಡಿ ಹೊಗಳಿದರು. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ

ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ Read More »

ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ

ಸಮಗ್ರ ನ್ಯೂಸ್: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಫೆ. 5ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ವೇಳೆ ಸ್ಕ್ಯಾನಿಂಗ್‌ಗೆ

ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ Read More »

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ‌ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ‌ಮಳೆ‌ ಮುನ್ಸೂಚನೆ Read More »

ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್

ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. 43ನೇ ಓವರ್​ನ ಮೂರನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಶತಕವನ್ನು ಪೂರೈಸಿದರು. ಜೊತೆಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು.

ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಇದು ಫೆಬ್ರವರಿ ತಿಂಗಳ ಕೊನೆಯ ವಾರವಾಗಿದೆ. ೨೩-೦೨-೨೦೨೫ರಿಂದ ೦೧-೦೩-೨೦೨೫ರವರೆಗೆ ಇರಲಿದೆ. ಬುಧನು ಮೀನ ರಾಶಿಯನ್ನು ಪ್ರವೇಶಿಸುವನು. ಇದು ಇವನ ನೀಚಸ್ಥಾನವಾದ ಕಾರಣ ಅವನಿಂದ ಸಿಗುವ ತಿಳಿವಳಿಕೆ, ಬಾಂಧವ್ಯ, ಭೂಮಿಯ ವ್ಯವಹಾರ ಎಲ್ಲವೂ ಅಸ್ತವ್ಯಸ್ತ. ಆಪ್ತರೇ ಶತ್ರುಗಳಂತೆ ಕಾಣಿಸುವುದು. ಇದೆಲ್ಲ ಈ ವಾರದ ಭವಿಷ್ಯ. ಯಾವ ರಾಶಿಗೆ ಲಾಭ? ಯಾರಿಗೆ ಶುಭ? ನೋಡೋಣ ಬನ್ನಿ… ಮೇಷ ರಾಶಿ:ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣವಾಗಲಿದೆ, ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ

ಸಮಗ್ರ ನ್ಯೂಸ್: ಇಂದು ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈನಲ್ಲಿ ನಡೆಯುತ್ತಿದೆ.ಈ ಪಂದ್ಯ ಪಾಕಿಸ್ತಾನದ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಪ್ರಾರಂಭಿಸಿದ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್ ಗಳಿಂದ ಸೋತು ಟೂರ್ನಯಿಂದ ಬಹುತೇಕ ಹೊರಬಿದ್ದಿದೆ. ಪಾಕಿಸ್ತಾನ ನಾಕೌಟ್ ಹಂತ ಪ್ರವೇಶಿಸಬೇಕಾದರೆ ಈ ಪಂದ್ಯದಲ್ಲಿ ಗೆದ್ದು , ರನ್ ಸರಾಸರಿಯಲ್ಲಿ ಮೇಲುಗೈ ಸಾಧಿಸಬೇಕಾಗಿದೆ. ಭಾರತವು

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ Read More »

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದು ಪಾದಯತ್ರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರು ಸುರೇಶ್ (60) ಮತ್ತು ಕುಮಾರ್ (55) ಎಂದು ತಿಳಿದುಬಂದಿದೆ. ಅಲ್ಲದೇ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದವರು,ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಖಾಸಗಿ ಬಸ್ ಹರಿದು ಸ್ಥಳದಲ್ಲೇ ಇಬ್ಬರು ಸಾವು Read More »

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..!

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. ( ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನಲ್ಲಿ ಇತ್ತೀಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌ ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನು ಓಡಿಸಲು ಹೋಗಿದ್ದ ಇ.ಟಿ.ಎಫ್. ಸಿಬ್ಬಂದಿ ಮೇಲೆಯೇ ಆನೆಯೊಂದು ಅಟ್ಯಾಕ್

ಸಾವಿನಿಂದ ಜಸ್ಟ್ ಮಿಸ್| ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇ.ಟಿ.ಎಫ್. ಸಿಬ್ಬಂದಿ..! Read More »

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ

ಸಮಗ್ರ ನ್ಯೂಸ್: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ. ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ಸಹಾಯ ಮಾಡುವುದಕ್ಕಾಗಿ ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಿತ್ತು ಮತ್ತು ಗ್ರೇಸ್

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ Read More »

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ Read More »