Editor

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕುಂಭಮೇಳ ಮುಗಿಸಿ

ಪ್ರಯಾಗ್ ರಾಜ್: ಭೀಕರ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ 6 ಮಂದಿ‌ ಸಾವು Read More »

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಉದ್ಯೋಗ ವಿವರಗಳುಇಲಾಖೆ ಹೆಸರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)ಹುದ್ದೆಗಳ ಹೆಸರು ಓಂಬುಡ್ಸ್‌ಮನ್ (Ombudsman)ಒಟ್ಟು ಹುದ್ದೆಗಳು ತಿಳಿಸಿಲ್ಲಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)ಉದ್ಯೋಗ ಸ್ಥಳ – ಕರ್ನಾಟಕ ವಿದ್ಯಾರ್ಹತೆಆರ್‌ಡಿಪಿಆರ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ

ಸಮಗ್ರ ನ್ಯೂಸ್: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ Read More »

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ನಂತರ ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಚಿರತೆಗೆ ಅಗತ್ಯವಾದ ರಕ್ಷಣೆಯನ್ನು ನೀಡಲು ಶ್ರಮಿಸುತ್ತಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲು ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಲಾಗುತ್ತಿದೆ. ಅರಣ್ಯಾಧಿಕಾರಿಗಳು ಚಿರತೆಗೆ ಅರವಳಿಕೆ ನೀಡಿ ಅದನ್ನು ಸುರಕ್ಷಿತ ಸ್ಥಳಕ್ಕೆ

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ Read More »

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ

ಸಮಗ್ರ ನ್ಯೂಸ್: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣ ಮಾಡುತ್ತಿದ್ದ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದಕ್ಕೆ ತೆರಳಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಅದೃಷವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯಲ್ಲಿ ಗಂಗೂಲಿ ಬೆಂಗಾವಲು ಪಡೆಯ 2 ವಾಹನಗಳಿಗೆ ಹಾನಿಯಾಗಿದೆ. ಬರ್ಧಮಾನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗಂಗೂಲಿ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ದುರ್ಗಾಪುರ ಹೆದ್ದಾರಿಯ ದಂತನ್‌ಪುರ ಎಂಬಲ್ಲಿ ಗಂಗೂಲಿ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಬೆಂಗಾವಲು ಪಡೆಯ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ Read More »

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಪರೀಕ್ಷೆ ಗೌಪ್ಯತೆ, ಪರೀಕ್ಷೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ Read More »

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು

ಸಮಗ್ರ ನ್ಯೂಸ್: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು ರಾಹುಲ್ (18) ಬಿಕೇಶ್ (20) ಲಲನ್ (24) ಎಂದು ಗುರುತಿಸಲಾಗಿದೆ.ಉತ್ತರ ಪ್ರದೇಶ ಮೂಲದ ಮೂವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರ ಆಗಿ ಬಿದ್ದಿದೆ. ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು ಸಾವು Read More »

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು Read More »

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ

ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಾಳೆ (ಫೆ.20) ಪ್ರಮಾಣವಚನ ಕಾರ್ಯಕ್ರಮ

ದೆಹಲಿ ಸಿಎಂ ಆಗಿ ರೇಖಾ ಗುಪ್ತ ಆಯ್ಕೆ Read More »

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ವೈದೇಹಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಥನವ್

ಜೆಸಿಬಿ‌ ಹರಿದು ಎರಡು ವರ್ಷದ ಮಗು ಸಾವು Read More »