Editor

ವಿಟ್ಲ: ಅನ್ನಭಾಗ್ಯ ಅಕ್ಕಿಗೆ ಕನ್ನ| ಆರೋಪಿ ಮತ್ತು ವಾಹನ ವಶ

ಸಮಗ್ರ ನ್ಯೂಸ್: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ‌. ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು

ವಿಟ್ಲ: ಅನ್ನಭಾಗ್ಯ ಅಕ್ಕಿಗೆ ಕನ್ನ| ಆರೋಪಿ ಮತ್ತು ವಾಹನ ವಶ Read More »

ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು| ಮೂರು ಮತ್ತು ನಾಲ್ಕನೇ ತರಗತಿಯಲ್ಲಿ ಒಂದೇ ಪದ್ಯ

ಸಮಗ್ರ‌ ನ್ಯೂಸ್: ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣಾ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ನಡೆದಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಿದ್ದು, ದಿನಕ್ಕೊಂದು ಯಡವಟ್ಟು ಬಹಿರಂಗವಾಗುತ್ತಿವೆ. ಬಿ.ಎಂ ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ

ಪಠ್ಯಪುಸ್ತಕ ಪರಿಷ್ಕರಣೆ ಎಡವಟ್ಟು| ಮೂರು ಮತ್ತು ನಾಲ್ಕನೇ ತರಗತಿಯಲ್ಲಿ ಒಂದೇ ಪದ್ಯ Read More »

ರಾಜ್ಯ ರಾಜಕಾರಣಕ್ಕೆ ಬರ್ತಾರಾ ಶೋಭಾ ಕರಂದ್ಲಾಜೆ? ಕೇಂದ್ರ ಸಚಿವೆ ಹೇಳಿದ್ದೇನು?

ಸಮಗ್ರ ನ್ಯೂಸ್: ಶೋಭಾ ಕರಂದ್ಲಾಜೆ ಕೇಂದ್ರ ಸರ್ಕಾರದಲ್ಲಿ ಒಳ್ಳೆ ಹುದ್ದೆಯಲ್ಲಿ ನಿರತರಾಗಿದ್ದಾರೆ. ರಾಜ್ಯ ಬಿಟ್ಟು ಕೇಂದ್ರಕ್ಕೆ ಹೋದ ಮೇಲೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಎಂಬೆಲ್ಲಾ ಪ್ರಶ್ನೆಗಳು ಎದ್ದಿದ್ದವು. ಇದೀಗ ಈ ವಿಚಾರಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಮತ್ತೆ ಹಿಂತಿರುಗಿ ಬರುವುದಿಲ್ಲ ಎಂದಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಕೃಷಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಅಷ್ಟೇ ಅಲ್ಲ ಅನೇಕ ರಾಜ್ಯಗಳ ಚುನಾವಣಾ ಉಸ್ತುವಾರಿಯ ಜವಾಬ್ದಾರಿಯನ್ನು ನೀಡಿದ್ದಾರೆ. ಇದರಲ್ಲಿ ನಾನು ತುಂಬಾ ಖುಷಿಯಾಗಿದ್ದೇನೆ.

ರಾಜ್ಯ ರಾಜಕಾರಣಕ್ಕೆ ಬರ್ತಾರಾ ಶೋಭಾ ಕರಂದ್ಲಾಜೆ? ಕೇಂದ್ರ ಸಚಿವೆ ಹೇಳಿದ್ದೇನು? Read More »

ಬೆಳ್ತಂಗಡಿ: ಲವ್ ಜಿಹಾದ್ ಆತಂಕ| ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಅನ್ಯಕೋಮಿನ ವಾಹನಗಳಿಗೆ ನಿರ್ಬಂಧ|

ಸಮಗ್ರ ನ್ಯೂಸ್: ಕೋಮು ಸಾಮರಸ್ಯ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಹಲವು ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ರಾಷ್ಟ್ರಮಟ್ಟದಲ್ಲೂ ಸದ್ದು ಮಾಡಿದೆ. ಅದರಲ್ಲಿ ಹಿಂದೂಯೇತರರನ್ನು ಜಾತ್ರೆಗಳಲ್ಲಿ ನಿರ್ಬಂಧಿಸಿದ್ದು ಕೂಡ ಒಂದು. ಇದೀಗ ಅದೆಲ್ಲವೂ ತಣ್ಣಗಾಗಿರುವ ನಡುವೆ ಮತ್ತೆ ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯದಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ. ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಕಳೆದ ವಾರ ಇಲ್ಲಿನ ಮುಸ್ಲಿಂ ಯುವಕನೋರ್ವ ಹಿಂದೂ ಭಕ್ತೆಯನ್ನು ವಿವಾಹವಾಗಿದ್ದು, ಈ ಕಾರಣದಿಂದ ದೇವಸ್ಥಾನಕ್ಕೆ ಹಿಂದೂಯೇತರ ವಾಹನಗಳಿಗೆ ಸಂಘಟನೆಗಳು

ಬೆಳ್ತಂಗಡಿ: ಲವ್ ಜಿಹಾದ್ ಆತಂಕ| ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಅನ್ಯಕೋಮಿನ ವಾಹನಗಳಿಗೆ ನಿರ್ಬಂಧ| Read More »

ಪತ್ರಕರ್ತರ ಮೇಲೆ ವಿದ್ಯಾರ್ಥಿನಿಯಿಂದ ಪ್ರತಿದೂರು| ಜಾಮೀನು ರಹಿತ ಕೇಸ್ ಜಡಿದ ಉಪ್ಪಿನಂಗಡಿ ಪೊಲೀಸರ ನಡೆಗೆ ಆಕ್ರೋಶ

ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳಿಂದ ಸರಕಾರಿ ಕಾಲೇಜು ಬಹಳಷ್ಟು ಸದ್ದು ಮಾಡುತ್ತಿದ್ದು ಇದೀಗ ಇನ್ನೊಂದು ಬೆಳವಣಿಗೆಯಿಂದ ಸುದ್ದಿಯಾಗಿದೆ. ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನಂತೆ ವರದಿಗಾರರಾದ ಅಜಿತ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ಸಿದ್ದೀಕ್ ನೀರಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೂನ್ 2ರಂದು 9.30 ರ ಸುಮಾರಿಗೆ ಅಜಿತ್ ಕುಮಾರ್ ಎಂಬಾತ ವಿದ್ಯಾರ್ಥಿನಿಯ ಶಾಲನ್ನು ಎಳೆಯಲು ಪ್ರಯತ್ನಿಸಿದ್ದು, ಆಕೆ ತಪ್ಪಿಸಿಕೊಂಡಾಗ ಪ್ರವೀಣ್ ಕುಮಾರ್ ಎಂಬಾತ ಪ್ರಚೋದನೆ ನೀಡಿದ್ದಾನೆ. ಈ ವೇಳೆ ಅಜಿತ್ ಕುಮಾರ್ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದು, ಇದನ್ನು

ಪತ್ರಕರ್ತರ ಮೇಲೆ ವಿದ್ಯಾರ್ಥಿನಿಯಿಂದ ಪ್ರತಿದೂರು| ಜಾಮೀನು ರಹಿತ ಕೇಸ್ ಜಡಿದ ಉಪ್ಪಿನಂಗಡಿ ಪೊಲೀಸರ ನಡೆಗೆ ಆಕ್ರೋಶ Read More »

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ-ಮಾದರಿ ಉತ್ತರಗಳು ಪ್ರಕಟ

ಸಮಗ್ರ ನ್ಯೂಸ್: ಕಳೆದ ಮೇ ತಿಂಗಳ 21ಮತ್ತು 22 ದಿನಾಂಕಗಳಂದು ನಡೆದ ರಾಜ್ಯ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯ ಮಾದರಿ ಉತ್ತರಗಳು ಇಲಾಖಾ ಜಾಲತಾಣದಲ್ಲಿ ಪ್ರಕಟಗೊಂಡಿವೆ. ಈ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದರೆ ಅದನ್ನು ಸಲ್ಲಿಸಲು ದಿನಾಂಕ 03-06-2022 ರಿಂದ 10-06-2022ರ ವರೆಗೆ ಇಲಾಖೆ ಕಾಲಾವಕಾಶ ಕಲ್ಪಿಸಿದೆ. ಅಭ್ಯರ್ಥಿಗಳು ಜಾಲತಾಣದಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನನ ದಿನಾಂಕ ನಮೂದಿಸಿ ಲಾಗಿನ್‌ ಆಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಇದಕ್ಕಾಗಿ ಸಂಸ್ಕರಣಾ ಶುಲ್ಕ ರೂ. 50/- ಪಾವತಿಸಬೇಕಿದೆ.

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ-ಮಾದರಿ ಉತ್ತರಗಳು ಪ್ರಕಟ Read More »

ಕಾರವಾರ: ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ ಚಾಲಕ

ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಾವಿನಲ್ಲೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಮಲ್ಲಪ್ಪ ಸೋಮಪ್ಪನವರ (56) ಬಸ್​ ಚಲಾಯಿಸುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಆಗ ಚಾಲಕ ಮಲ್ಲಪ್ಪ ಕೂಡಲೇ ಬಸ್​ನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾರೆ. ತಕ್ಷಣ ಬಸ್​ನಲ್ಲಿದ 38 ಪ್ರಯಾಣಿಕರು ಕೆಳಗಿಳಿದಿದ್ದಾರೆ. ನಂತರ ಪ್ರಯಾಣಿಕರು ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಾಲಕ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಸಾವನ್ನಪ್ಪಿದ್ದನು ಎಂದು ವೈದ್ಯರು ಹೇಳಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಕಾರವಾರ: ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ ಚಾಲಕ Read More »

ಉಪಚು‌ನಾವಣೆ; ಪಿಣರಾಯಿಗೆ ಮುಖಭಂಗ| ಸ್ಥಾನ ಉಳಿಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ಜಿಲ್ಲೆಯ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ತನ್ನ ಸಮೀಪದ ಪ್ರತಿಸ್ಪರ್ಧಿ ಎಲ್ ಡಿಎಫ್ ಅಭ್ಯರ್ಥಿ ಡಾ.ಜೋ ಜೋಸೆಫ್ ಅವರನ್ನು 25,000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದರು. ಕಾಂಗ್ರೆಸ್ ಶಾಸಕ ಪಿ.ಟಿ. ಥಾಮಸ್ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ದಿವಂಗತ ಶಾಸಕರ ಪತ್ನಿ ಉಮಾ ಥಾಮಸ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತು. ಆಡಳಿತಾರೂಢ

ಉಪಚು‌ನಾವಣೆ; ಪಿಣರಾಯಿಗೆ ಮುಖಭಂಗ| ಸ್ಥಾನ ಉಳಿಸಿಕೊಂಡ ಕಾಂಗ್ರೆಸ್ Read More »

ಹಿಂಪಡೆಯದ ನಾಮಪತ್ರ| ಆರು ಮಂದಿ ರಾಜ್ಯಸಭಾ ಚುನಾವಣೆ ಕಣದಲ್ಲಿ| ಸಿದ್ದು ರಾಜಕೀಯ ದಾಳಕ್ಕೆ ಬಲಿಯಾಗೋರು ಯಾರು?

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಗಾಗಿ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಆದರೆ ಯಾವುದೇ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಹಿಂಪಡೆಯದ ಕಾರಣ, ಅಂತಿಮವಾಗಿ ಕಣದಲ್ಲಿ 6 ಅಭ್ಯರ್ಥಿಗಳು ಇದ್ದಾರೆ. ಜೂನ್ 10ರಂದು ನಡೆಯಲಿರುವಂತ ರಾಜ್ಯಸಭೆಯ ಚುನಾವಣೆಗೆ ಇಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆಯೊಂದಿಗೆ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಯು ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ಧರಾಮಯ್ಯ ಮಾತ್ರ ನಾವು ಯಾವುದೇ ಕಾರಣಕ್ಕೂ ನಾಮಪತ್ರ

ಹಿಂಪಡೆಯದ ನಾಮಪತ್ರ| ಆರು ಮಂದಿ ರಾಜ್ಯಸಭಾ ಚುನಾವಣೆ ಕಣದಲ್ಲಿ| ಸಿದ್ದು ರಾಜಕೀಯ ದಾಳಕ್ಕೆ ಬಲಿಯಾಗೋರು ಯಾರು? Read More »

ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ಅರಣ್ಯ ಪ್ರದೇಶದ ಚಿತ್ರ ಹಂಚಿಕೊಂಡ ಆನಂದ್‌ ಮಹೀಂದ್ರ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ನಡುವೆ ಸಾಗುವ ಅರಣ್ಯ ಪ್ರದೇಶದ ಚಿತ್ರವೊಂದನ್ನು ಮಹೀಂದ್ರ ಗ್ರೂಪ್‌ನ ಚೇರ್‌ರ್ಮೆನ್‌ ಆಗಿರುವ ಆನಂದ್‌ ಮಹೀಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಸುದ್ದಿ ವೈರಲ್‌ ಆಗಿದೆ. ಕೆಲವು ದಿನಗಳ ಹಿಂದೆ ವಿಸಿಟ್‌ ಉಡುಪಿ ಎಂಬ ಟ್ವಿಟರ್‌ ಖಾತೆಯವರು ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಅರಣ್ಯ ಪ್ರದೇಶ ಮಧ್ಯೆ ಸಾಗುವ ಗುಂಡ್ಯ ಬಳಿಯ ಹೆದ್ದಾರಿಯ ಚಿತ್ರವನ್ನು ಜಗತ್ತಿನ ಅತ್ಯಂತ ಸುಂದರ ಕಾಡಿನ ಪ್ರಯಾಣ ಎಂಬ ಶೀರ್ಷಿಕೆಯಡಿ ಅಪ್‌ಲೋಡ್‌ ಮಾಡಿದ್ದರು. ಇದೀಗ

ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ಅರಣ್ಯ ಪ್ರದೇಶದ ಚಿತ್ರ ಹಂಚಿಕೊಂಡ ಆನಂದ್‌ ಮಹೀಂದ್ರ Read More »