ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಸಮನ್ಸ್
ಸಮಗ್ರ ನ್ಯೂಸ್: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅವರಿಬ್ಬರೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕರಾಗಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ನ ಪ್ರವರ್ತಕರು ಮತ್ತು ಷೇರುದಾರರಲ್ಲಿ ಸೇರಿದ್ದಾರೆ . ಮೂಲಗಳ ಪ್ರಕಾರ , ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಜೂನ್ 2 ಮತ್ತು 8 ರಂದು ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಳಲಾಗಿದೆ .
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಸಮನ್ಸ್ Read More »










