2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಸುದೀಪ್ ಅತ್ಯುತ್ತಮ ನಟ; ಅನುಪಮಾ ಗೌಡ ಅತ್ಯುತ್ತಮ ನಟಿ
ಸಮಗ್ರ ನ್ಯೂಸ್: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೈಲ್ವಾನ್’ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ ‘ಮೋಹನದಾಸ’ ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ










