Editor

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ

ಸಮಗ್ರ ನ್ಯೂಸ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಐದು ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದ್ದು, ಮೊದಲನೇ ಪಂದ್ಯ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ತಂಡ ಸೋಲಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್‌ ತಂಡ ಮೂರನೇ ಸ್ಥಾನದಲ್ಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ Read More »

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ

ಸಮಗ್ರ ನ್ಯೂಸ್: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ Read More »

ಛತ್ತೀಸ್ ಘಡ್: ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ| 14 ಮಂದಿ ಮಾವೋವಾದಿಗಳು ಸಾವು

ಸಮಗ್ರ ನ್ಯೂಸ್: ಒಡಿಶಾದ ಗಡಿಯಲ್ಲಿರುವ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಅರಣ್ಯದಲ್ಲಿ ನಡೆದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಮಾವೋವಾದಿ ಕಮಾಂಡರ್ ಜೈ ರಾಮ್ ಸೇರಿ ಕನಿಷ್ಠ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಕಾರ್ಯಾಚರಣೆಯ ನಂತರ ವಶಪಡಿಸಿಕೊಂಡ ಮೃತದೇಹಗಳ ಆಧಾರದ ಮೇಲೆ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ

ಛತ್ತೀಸ್ ಘಡ್: ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ| 14 ಮಂದಿ ಮಾವೋವಾದಿಗಳು ಸಾವು Read More »

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ| ಮೂವರು ಆರೋಪಿಗಳು ಸೆರೆ

ಸಮಗ್ರ ನ್ಯೂಸ್: ಮಂಗಳೂರು ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ. ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು. ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗು ಇತರ ಸೊತ್ತುಗಳನ್ನು ಜಪ್ತಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ| ಮೂವರು ಆರೋಪಿಗಳು ಸೆರೆ Read More »

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದೆ. ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ‘ಕಾಂತಾರ -2’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಹೊಸೂರು ಗ್ರಾಮ ಪಂಚಾಯಿತಿಯ ಹೆರೂರು ಗ್ರಾಮದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಅರಣ್ಯಕ್ಕೆ ಹಾನಿ ಮಾಡಲಾಗಿದೆ. ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು Read More »

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ| ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್

ಸಮಗ್ರ ನ್ಯೂಸ್: ‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಈ ಸೀಸನ್‌ನ ಫಿನಾಲೆಯೇ ನನ್ನ ಬಿಗ್‌ಬಾಸ್‌ನ ಕೊನೆ ಹೆಜ್ಜೆ ಎಂದು ಹೇಳಿದ್ದಾರೆ.

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ| ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ Read More »

ಪ್ರಯಾಗ್ ರಾಜ್: ಕುಂಭಮೇಳದಲ್ಲಿ ಭಾರೀ ಅಗ್ನಿದುರಂತ| ಹಲವು ಡೇರೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಎಸ್ಡಿಆರ್‌ಎಫ್ ತಂಡವೂ ಸ್ಥಳದಲ್ಲಿತ್ತು. ತ್ವರಿತ ಪ್ರಯತ್ನಗಳ ನಂತರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ, ಅಧಿಕಾರಿಗಳ ಜಾಗರೂಕತೆಯು ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದ್ದರಿಂದ ದೊಡ್ಡ ಘಟನೆಯನ್ನು ತಪ್ಪಿಸಿದೆ ಮತ್ತು ಇಲ್ಲಿಯವರೆಗೆ ಯಾವುದೇ

ಪ್ರಯಾಗ್ ರಾಜ್: ಕುಂಭಮೇಳದಲ್ಲಿ ಭಾರೀ ಅಗ್ನಿದುರಂತ| ಹಲವು ಡೇರೆಗಳು ಬೆಂಕಿಗಾಹುತಿ Read More »

ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್| ಯಕ್ಷಗಾನದ ಚೌಕಟ್ಟು ಮೀರಿದ್ದಕ್ಕೆ ಯಕ್ಷಗಾನ ಪ್ರೀಯರ ಅಸಮಾಧಾನ

ಸಮಗ್ರ ನ್ಯೂಸ್: ಚಿತ್ರನಟಿ ಉಮಾಶ್ರೀ ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು ಹಾಗೂ ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಉಮಾಶ್ರೀ ಈಚೆಗೆ ಹೊನ್ನಾವರದಲ್ಲಿ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ನಿರ್ವಹಿಸಿದ ಮಂಥರೆಯ ಪಾತ್ರ ಚರ್ಚೆಗೆ ಗ್ರಾಸವಾಗಿದೆ. ಚಿತ್ರರಂಗ ಹಾಗೂ ನಾಟಕದಲ್ಲಿ ಉಮಾಶ್ರೀ ಅವರ ಕಲೆಯ ಬಗ್ಗೆ ಎಲ್ಲರೂ ಗೌರವ ವ್ಯಕ್ತಪಡಿಸಿದ್ದಾರೆ. ಆದರೆ, ಯಕ್ಷಗಾನದಲ್ಲಿ ಅವರನ್ನು ಕರೆತಂದು ಪಾತ್ರ ಮಾಡಿಸಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ. ಜತೆಗೆ

ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್| ಯಕ್ಷಗಾನದ ಚೌಕಟ್ಟು ಮೀರಿದ್ದಕ್ಕೆ ಯಕ್ಷಗಾನ ಪ್ರೀಯರ ಅಸಮಾಧಾನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ರಾಶಿಗಳ ಪ್ರಭಾವ ಮಹತ್ತರವಾದದ್ದು. ಪ್ರತಿಯೊಂದು ಜೀವಿಗಳ ಮೇಲೂ ರಾಶಿಗಳ ಚಲನೆ ಪ್ರಭಾವ ಬೀರುತ್ತವೆ. ಈ ವಾರ ಯಾವ ರಾಶಿಗೆ ಲಾಭ? ಯಾರಿಗೆ ಶುಭ ನೋಡೋಣ ಬನ್ನಿ… ಮೇಷ:ಮನುಷ್ಯನಿಗೆ ಧರ್ಮ-ಕರ್ಮದ ಪಾಠವನ್ನು ಕಲಿಸುವವರು ನವಗ್ರಹಗಳಲ್ಲಿ ಅತಿಮುಖ್ಯ ಗ್ರಹಗಳಾದ ಗುರು-ಶನಿಯೇ. ಶನಿಯು ತನ್ನ ಸ್ವಂತಮನೆ ಬಿಟ್ಟು ಗುರುವಿನ ಮನೆಗೆ ಬಂದು ಧರ್ಮನಿಷ್ಠರನ್ನು ಪುಣ್ಯ ಪುರುಷರನ್ನು ನ್ಯಾಯ ಮಾರ್ಗದಲ್ಲಿ ನಡೆಯುವವರನ್ನು ಕಾಪಾಡುತ್ತಾನೆ. ಉಪಕಾರ ಮಾಡುವವರಿಗೆ ಒಳ್ಳೆಯ ಫಲವನ್ನೇ ಕೊಡುತ್ತಾನೆ. ಬರಬೇಕಾದ ನಿರೀಕ್ಷೆ ಇರುವ ಹಣವು ಬಂದು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!?

ಸಮಗ್ರ ನ್ಯೂಸ್: ಮಂಗಳೂರು ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಬಗ್ಗೆ ಈಗ ಬ್ಯಾಂಕ್ ಸಿಬ್ಬಂದಿ ಮೇಲೆಯೇ ಅನುಮಾನ ಶುರುವಾಗಿದೆ. ಬ್ಯಾಂಕ್ ಅಧ್ಯಕ್ಷರು ಮತ್ತು ಇತರರ ಹೇಳಿಕೆಗಳು ಅನುಮಾನ ಮೂಡಿಸುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಕೈವಾಡ ಇದೆ ಎಂಬ ಗುಸುಗುಸು ಕೇಳಿಬರುತ್ತಿದೆ. ನಿನ್ನೆ(ಜ.17) ಮಧ್ಯಾಹ್ನ ಕೋಟೆಕಾರ್ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ನುಗ್ಗಿದ ಐವರು ದುಷ್ಕರ್ಮಿಗಳು ನೋಡ ನೋಡುತ್ತಿದ್ದಂತೇ ಕೋಟಿ ಕೋಟಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದೆ. ಇದೀಗ ಬ್ಯಾಂಕ್ ಸಿಬ್ಬಂದಿ

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ| ಘಟನೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ!? Read More »