ಉಡುಪಿ: ನಿಮ್ಮ ವರ್ತನೆ ಸರಿಪಡಿಸಿಕೊಳ್ಳಿ, ಆಮೇಲೆ ಸೌಹಾರ್ದದ ಮಾತಾಡೋಣ- ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು
ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಪ್ರಾರಂಭಗೊಂಡು ಮುಸ್ಲಿಮರೊಂದಿಗಿನ ವ್ಯಾಪಾರಗಳನ್ನು ನಿರ್ಬಂಧಿಸುವವರೆಗೆ ಸಮಾಜದಲ್ಲಿ ಉಂಟಾಗಿರುವ ಕಂದಕಕ್ಕೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕೆಂದು ಮುಸ್ಲಿಂ ನಿಯೋಗ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿ ಮನವಿ ಮಾಡಿತು. ನಿಯೋಗವನ್ನು ಭೇಟಿ ಮಾಡಿದ ಶ್ರೀಗಳು, ಈಗ ಉಂಟಾಗಿರುವ ಪರಿಸ್ಥಿತಿಗೆ ಮೂಲ ಕಾರಣ ಯಾರು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ. ಅದಕ್ಕೆ ಕಾರಣ ಯಾರು? ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ, ಸಮಾಜದಲ್ಲಿ ಕಾನೂನು










