ಪುತ್ತೂರು ಬಸ್ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು| ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ದ.ಕ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣ|
ಸಮಗ್ರ ನ್ಯೂಸ್: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದೆ. ಕೆ.ಎಸ್.ಆರ್.ಟಿ.ಸಿ ಯು ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ನಿರ್ಣಯ ಕೈಗೊಂಡಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದ್ದು, ಬಹುತೇಕ ಮುಂದಿನ ತಿಂಗಳು ನಾಮಕರಣ








