Editor

ಸುಳ್ಯ/ಪುತ್ತೂರು: ‘ದಿ ಕಾಶ್ಮೀರ ಪೈಲ್ಸ್’ ಸಿನಿಮಾ ಉಚಿತ ಪ್ರದರ್ಶನಕ್ಕೆ ಶಾಸಕರಿಂದ ವ್ಯವಸ್ಥೆ

ಸಮಗ್ರ ನ್ಯೂಸ್: ದೇಶದಲ್ಲಿ ಭಾರೀ ಸಂಚಲನ ಮೂಡಿಸಿರುವ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರಿ ಫೈಲ್ಸ್’ ಚಲನಚಿತ್ರವನ್ನು ಸುಳ್ಯದ ಸಂತೋಷ್ ಚಿತ್ರ ಮಂದಿರ ಹಾಗೂ ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಉಚಿತ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಳ್ಯದಲ್ಲಿ ಸಚಿವ ಅಂಗಾರ ಹಾಗೂ ಪುತ್ತೂರಿನಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿಸಿನಿಮಾ ತೋರಿಸಲು ವ್ಯವಸ್ಥೆ ಮಾಡಲಾಗಿದೆ. ಸಚಿವ ಎಸ್. ಅಂಗಾರ ನೇತೃತ್ವದಲ್ಲಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ಮಾ.19 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ 4

ಸುಳ್ಯ/ಪುತ್ತೂರು: ‘ದಿ ಕಾಶ್ಮೀರ ಪೈಲ್ಸ್’ ಸಿನಿಮಾ ಉಚಿತ ಪ್ರದರ್ಶನಕ್ಕೆ ಶಾಸಕರಿಂದ ವ್ಯವಸ್ಥೆ Read More »

ಕಡಬ: ಸೀಬೆ ಮರದಿಂದ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಸೀಬೆ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ಮಾ.17ರ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ ಪುತ್ರ ಉಲ್ಲಾಸ್ ಡಿ.ಎಂ (8 ವ.) ಮೃತ ಬಾಲಕ. ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ಉಲ್ಲಾಸ್, ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಮನೆ

ಕಡಬ: ಸೀಬೆ ಮರದಿಂದ ಬಿದ್ದು ಬಾಲಕ ಸಾವು Read More »

ಹಿಜಾಬ್ ಕುರಿತು ಕೋರ್ಟ್ ಮೆಟ್ಟಿಲೇರಿದವರು ಭಯೋತ್ಪಾದಕರಂತೆ! – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಮುಖಂಡ

ಸಮಗ್ರ ನ್ಯೂಸ್: ಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಆರೋಪಿಸಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಿದ ಆರು ವಿದ್ಯಾರ್ಥಿನಿಯರು ದೇಶ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಶ್ಪಾಲ್ ಸುವರ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಜಾಬ್ ಕುರಿತು ಕೋರ್ಟ್ ಮೆಟ್ಟಿಲೇರಿದವರು ಭಯೋತ್ಪಾದಕರಂತೆ! – ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಮುಖಂಡ Read More »

ಪಿಎಫ್ ಮೇಲೆ ತೆರಿಗೆ ಹೊರೆ| ಎ.1ರಿಂದಲೇ ನಿಯಮ ಜಾರಿ

ಸಮಗ್ರ ನ್ಯೂಸ್: ನೌಕರರ ಭವಿಷ್ಯ ನಿಧಿ(ಇಪಿಎಫ್) ದೇಣಿಗೆ ಮೇಲೆ 2.5 ಲಕ್ಷ ರೂ. ಮೇಲ್ಪಟ್ಟು ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್ 1 ರಿಂದ ನಿಯಮ ಜಾರಿಗೆ ಬರಲಿದೆ. ಪಿಎಫ್ ಖಾತೆಗಳನ್ನು ತೆರಿಗೆ ಖಾತೆ ಮತ್ತು ತೆರಿಗೆ ರಹಿತ ದೇಣಿಗೆ ಖಾತೆಗಳೆಂದು ವರ್ಗೀಕರಣ ಮಾಡಲಾಗುತ್ತದೆ. ಖಾಸಗಿ ಉದ್ಯೋಗಿಗಳು 5 ಲಕ್ಷ ರೂ. ಪಿಎಫ್ ಖಾತೆಗೆ ಜಮಾ ಮಾಡಿದರೆ, 2.5 ಲಕ್ಷ ರೂಪಾಯಿ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಸರ್ಕಾರಿ ಉದ್ಯೋಗಿಗಳು ಪಿಎಫ್ ಖಾತೆ ಜನರಲ್ ಪಿಎಫ್ ಆಗಿದ್ದು,

ಪಿಎಫ್ ಮೇಲೆ ತೆರಿಗೆ ಹೊರೆ| ಎ.1ರಿಂದಲೇ ನಿಯಮ ಜಾರಿ Read More »

“ಬಣ್ಣಗಳಲ್ಲವೇ ಬದುಕನ್ನು ತುಂಬುವುದು” | ಪ್ರಕೃತಿಯ ರಂಗಿಗೆ ಹೋಳಿಯೇ ಬರಬೇಕು|

ಸಮಗ್ರ ವಿಶೇಷ: ರಸ್ತೆಯ ತುಂಬೆಲ್ಲಾ ಮರದಿಂದ ಉದುರಿದ ಹೂಗಳ ರಾಶಿ. ಪಕಳೆ ಕಳಚಿ ಬಿದ್ದ ಒಂದೊಂದು ಹೂವು ಕೂಡಾ ಪ್ರಕೃತಿಯ ರಂಗನ್ನು ಹೆಚ್ಚಿಸಿದೆ. ಮರಗಳು ಎಲೆಗಳ ಉದುರಿಸಿ ಬಣ್ಣದ ಹೂಗಳ ಗೊಂಚಲ ಸುರಿಸುತ್ತಿವೆ. ಇನ್ನೇನು ಕೆಲ ದಿನಗಳಲ್ಲಿ ಬರುವ ನವಯುಗಾದಿಯ ಸ್ವಾಗತಿಸಲು ರೆಡಿಯಾದಂತೆ ಕಾಣುತ್ತಿವೆ. ಅರೆ! ಇದೇನಿದು? ಎನಿಸುತ್ತಿರುವಾಗ ನೆನಪಾದದ್ದು ರಂಗಿನ ಹಬ್ಬ ‘ಹೋಳಿ’. ಕಾಮದಹನ, ಹೋಳಿ ಹುಣ್ಣಿಮೆ, ಮುಂತಾಗಿ ಕರೆಯುವ ಈ ಹಬ್ಬ ಭಾರತದ ಉದ್ದಗಲಕ್ಕೂ ಆಚರಿಸುವ ಬಣ್ಣದ ಓಕುಳಿಯ ಜಾತ್ರೆ. ಹಿರಿ ಕಿರಿದೆನ್ನದೆ ಪ್ರತೀ

“ಬಣ್ಣಗಳಲ್ಲವೇ ಬದುಕನ್ನು ತುಂಬುವುದು” | ಪ್ರಕೃತಿಯ ರಂಗಿಗೆ ಹೋಳಿಯೇ ಬರಬೇಕು| Read More »

ಹಿಜಾಬ್ ವಿವಾದದಲ್ಲಿ ‌ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಬರೆಯಲು ಅವಕಾಶವಿಲ್ಲ – ಸಚಿವ ಮಾಧುಸ್ವಾಮಿ

ಸಮಗ್ರ ನ್ಯೂಸ್: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಕೋರ್ಟ್ ತೀರ್ಪು ಬಂದ ಬಳಿಕವೂ ಕೆಲ ಕಾಲೇಜಿನಲ್ಲಿ ವಿವಾದ ಮುಂದುವರೆದಿದೆ. ಅನಗತ್ಯ ವಿವಾದ

ಹಿಜಾಬ್ ವಿವಾದದಲ್ಲಿ ‌ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಬರೆಯಲು ಅವಕಾಶವಿಲ್ಲ – ಸಚಿವ ಮಾಧುಸ್ವಾಮಿ Read More »

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜಪಾನ್| ಸೂರ್ಯೋದಯದ ನಾಡಲ್ಲಿ ಜನಜೀವನ ದುಸ್ಥರ

ಸಮಗ್ರ ನ್ಯೂಸ್: ಬುಧವಾರ ರಾತ್ರಿ ಉತ್ತರ ಜಪಾನ್‌ ನ ಫುಕುಶಿಮಾ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪ್ರಬಲ ಭೂಕಂಪದಿಂದ ಹಲವು ನಗರಗಳಲ್ಲಿ ವಿದ್ಯುತ್ ವ್ಯವಸ್ಥೆ ಕಡಿತಗೊಂಡಿದೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಅಕ್ಷಾಂಶ 37.7 ಮತ್ತು ಪೂರ್ವ ರೇಖಾಂಶ 141.7ರ 60 ಕಿಮೀ ಆಳದಲ್ಲಿ, ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11.36ರ ಸುಮಾರಿಗೆ ಕಂಪನ ಸಂಭವಿಸಿದೆ.

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜಪಾನ್| ಸೂರ್ಯೋದಯದ ನಾಡಲ್ಲಿ ಜನಜೀವನ ದುಸ್ಥರ Read More »

ಸುಳ್ಯ: ಸಂಪಾಜೆ ಬಳಿ ಹೊಳೆಗೆ ಉರುಳಿದ ಸರ್ಕಾರಿ ಬಸ್ – ನಾಲ್ವರು ಗಂಭೀರ; ಹಲವರು ಜಖಂ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಜಖಂಗೊಂಡಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನ ಟಯರ್ ಸ್ಪೋಟಗೊಂಡಿದ್ದೇ ಘಟನೆಗೆ ಕಾರಣ

ಸುಳ್ಯ: ಸಂಪಾಜೆ ಬಳಿ ಹೊಳೆಗೆ ಉರುಳಿದ ಸರ್ಕಾರಿ ಬಸ್ – ನಾಲ್ವರು ಗಂಭೀರ; ಹಲವರು ಜಖಂ Read More »

ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿಗಿಲ್ಲ ಮನ್ನಣೆ| ಹಿಜಾಬ್ ತೆಗೆಯದೇ ತರಗತಿ ಬಹಿಷ್ಕರಿಸಿದ ಮುಸ್ಲಿಂ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಹಿಜಾಬ್ ತೆಗೆದು ತರಗತಿಗೆ ಹಾಜರಾಗಲ್ಲ ಎಂದು ತರಗತಿಯಿಂದ ವಿದ್ಯಾರ್ಥಿಗಳು ಹೊರನಡೆದ ಪ್ರಸಂಗ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿನ್ನೆ ನಡೆದಿದೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪಾಲಿಸಿ ತರಗತಿಯೊಳಗಡೆ ಹಿಜಾಬ್ ಗೆ ಅವಕಾಶವಿಲ್ಲ ಎಂದು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ತಿಳಿಸಿದ್ದು ಹಿಜಾಬ್ ತೆಗೆದು ತರಗತಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ತರಗತಿಯಿಂದ ಹೊರಬರುತ್ತಿದ್ದಂತೆ ಹಿಜಾಬ್ ಇವರನ್ನು ಬೆಂಬಲಿಸಿ ಹಲವಾರು ವಿದ್ಯಾರ್ಥಿಗಳು ಇವರ ಹೋರಾಟಕ್ಕೆ ಬೆಂಬಲ ಸೂಚಿಸಿ ತರಗತಿ ಬಹಿಷ್ಕರಿಸಿದ್ದಾರೆ.

ಉಪ್ಪಿನಂಗಡಿ: ಹೈಕೋರ್ಟ್ ತೀರ್ಪಿಗಿಲ್ಲ ಮನ್ನಣೆ| ಹಿಜಾಬ್ ತೆಗೆಯದೇ ತರಗತಿ ಬಹಿಷ್ಕರಿಸಿದ ಮುಸ್ಲಿಂ ವಿದ್ಯಾರ್ಥಿಗಳು Read More »

ವಂಶ ಪಾರಂಪರ್ಯ ರಾಜಕಾರಣಕ್ಕೆ ಬ್ರೇಕ್ ಹಾಕಿದ ಪ್ರಧಾನಿ‌ ಮೋದಿ| ರಾಜ್ಯ ಬಿಜೆಪಿಯಲ್ಲಿ ತಣ್ಣನೆಯ ಕಂಪನ| “ನಮ್ಗೆ ಟಿಕೆಟ್ ತಪ್ಪುತ್ತಾ ಗುರೂ?”

ಸಮಗ್ರ ನ್ಯೂಸ್: ರಾಷ್ಟ್ರೀಯ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಹೇಳಿಕೆ ಬೆನ್ನಲ್ಲೆ ರಾಜ್ಯ ಕೇಸರಿ ಪಡೆಯಲ್ಲಿ ತಣ್ಣನೆಯ ನಡುಕ ಶುರುವಾಗಿದೆ. ಪಕ್ಷದಲ್ಲಿ ವಂಶ ರಾಜಕಾರಣಕ್ಕೆ ಅವಕಾಶವಿಲ್ಲವೆಂದು ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ಮೋದಿ, ಸಂಸದೀಯ ಪಕ್ಷದ ಸಭೆಯಲ್ಲಿ ಕಠಿಣ ಸಂದೇಶ ರವಾನಿಸಿದ್ದಾರೆ. ಹೀಗಾಗಿ ರಾಜ್ಯ ಕೇಸರಿ ಪಡೆಯಲ್ಲಿ ಆತಂಕ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದಲ್ಲಿ ವಂಶವಾದಕ್ಕೆ ಅವಕಾಶವಿಲ್ಲವೆಂದು

ವಂಶ ಪಾರಂಪರ್ಯ ರಾಜಕಾರಣಕ್ಕೆ ಬ್ರೇಕ್ ಹಾಕಿದ ಪ್ರಧಾನಿ‌ ಮೋದಿ| ರಾಜ್ಯ ಬಿಜೆಪಿಯಲ್ಲಿ ತಣ್ಣನೆಯ ಕಂಪನ| “ನಮ್ಗೆ ಟಿಕೆಟ್ ತಪ್ಪುತ್ತಾ ಗುರೂ?” Read More »