Editor

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಭಾನುವಾರ ನಡೆದಿದೆ. ಸಿಟ್ರೀನ್ ಪಾಯಸ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ ಎಂದು ತಿಳಿದು ಬಂದಿದೆ. ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ಇನ್ನು ತಕ್ಷಣ

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು Read More »

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ. ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು Read More »

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ| ಧರ್ಮಸ್ಥಳಕ್ಕೆ ಹೊರಟಿದ್ದ ಇಬ್ಬರು ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ನಡೆದಿದೆ. ಬೀರೂರಿನ ಕಾರೇಹಳ್ಳಿ ಮೂಲದ ಆನಂದ್(35 ) ಹಾಗೂ ಲಕ್ಷ್ಮೀ(33) ಮೃತ ದುರ್ದೈವಿಗಳು.ಮೃತರು ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದು, ದಂಟರಮಕ್ಕಿ ಬಳಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್​ ಕಂದಕಕ್ಕೆ ಬಿದ್ದು ಹೊತ್ತಿ ಉರಿದಿದೆ. ಘಟನೆಯಲ್ಲಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ| ಧರ್ಮಸ್ಥಳಕ್ಕೆ ಹೊರಟಿದ್ದ ಇಬ್ಬರು ಸಾವು Read More »

ಮೈಸೂರು ವಿ.ವಿ ಯಿಂದ ನಟ ದಿ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ದಿವಂಗತ ನಟ ಪುನೀತ್ ರಾಜಕುಮಾರ್ ರವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದಾಗಿ ಎಂದು ಘೋಷಣೆ ಮಾಡಲಾಗಿದೆ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಮೈಸೂರು ವಿವಿಯಿಂದ ಈ ಮುಖೇನ ಉಡುಗೊರೆ ನೀಡಲಾಗುತ್ತಿದೆ. ಪುನೀತ್ ರಾಜಕುಮಾರ್ ಕುಟುಂಬದವರನ್ನು ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿಯವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ ಹೇಮಂತ್ ಕುಮಾರ್ ಘೋಷಣೆ ಮಾಡಿದರು. ಮಾರ್ಚ್ 22 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.

ಮೈಸೂರು ವಿ.ವಿ ಯಿಂದ ನಟ ದಿ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ Read More »

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು

ನೆಲ್ಯಾಡಿ: ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗೋಳಿತ್ತೊಟ್ಟು ಮಾಜಿ ಗ್ರಾ.ಪಂ. ಸದಸ್ಯೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52) ಎಂದು ಗುರುತಿಸಲಾಗಿದೆ. ಮಾ.11ರಂದು ರೋಸಮ್ಮರವರು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದ್ದು, ತಕ್ಷಣ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ಇನ್ನು ತಕ್ಷಣ ಅವರನ್ನು ನೆಲ್ಯಾಡಿಯ

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು Read More »

ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ…!! ಯುವಕನನ್ನು ನೂರು ಮೀಟರ್ ಎಳೆದೊಯ್ದಿದ ಆನೆ|ಯುವಕನಿಗೆ ಗಂಭೀರ

ಸಮಗ್ರ ನ್ಯೂಸ್: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.‌ ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ಯುವಕನನ್ನು ಕೋನಡ್ಕ‌ ನಿವಾಸಿ ಗುರುಪ್ರಸಾದ್ (21) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಗುರುಪ್ರಸಾದ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಯುವಕನ ಮೇಲೆ ದಾಳಿಗೈದ ಆನೆ ಆತನನ್ನು ನೂರು ಮೀಟರ್ ಗಳವರೆಗೆ

ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ…!! ಯುವಕನನ್ನು ನೂರು ಮೀಟರ್ ಎಳೆದೊಯ್ದಿದ ಆನೆ|ಯುವಕನಿಗೆ ಗಂಭೀರ Read More »

ತಾಯಿಯ ಶವದೊಂದಿಗೆ ನಾಲ್ಕು ದಿನ ಕಳೆದ ಬಾಲಕ|

ಸಮಗ್ರ ನ್ಯೂಸ್: ಹತ್ತು ವರ್ಷದ ಬಾಲಕನೋರ್ವ ತನ್ನ ತಾಯಿ ನಿದ್ರೆ ಮಾಡುತ್ತಿದ್ದಾಳೆ ಎಂದು ಭಾವಿಸಿ ಮೃತ ದೇಹದೊಂದಿಗೆ ನಾಲ್ಕು ದಿನ ಕಳೆದಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯ ತಿರುಪತಿ ಸಮೀಪದ ವಿದ್ಯಾನಗರದಲ್ಲಿ ನಡೆದಿದೆ. ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದ ರಾಜ್ಯಲಕ್ಷ್ಮಿ ಎಂಬುವರು ಮೃತ ಮಹಿಳೆ. ಎರಡು ವರ್ಷಗಳ ಹಿಂದೆ ಪತಿಯೊಂದಿಗೆ ಜಗಳವಾಗಿ ತಿರುಪತಿಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು. ಆಕೆಯೊಂದಿಗೆ ಪುತ್ರ ಶ್ಯಾಮ್ ಕಿಶೋರ್ ಕೂಡ ಇದ್ದು, 5ನೇ ತರಗತಿಯಲ್ಲಿ ಓದುತ್ತಿದ್ದ. ಶುಕ್ರವಾರದಂದು ಶ್ಯಾಮ್ ಕಿಶೋರ್​ ತನ್ನ ಚಿಕ್ಕಪ್ಪ ದುರ್ಗಾಪ್ರಸಾದ್​ಗೆ ಮನೆಯಿಂದ

ತಾಯಿಯ ಶವದೊಂದಿಗೆ ನಾಲ್ಕು ದಿನ ಕಳೆದ ಬಾಲಕ| Read More »

ನಡುರಸ್ತೆಯಲ್ಲೇ ಹೊತ್ತಿ‌ಉರಿದ ಕಾರು| ಚಾಲಕ ಸಜೀವ ದಹನ

ಸಮಗ್ರ ನ್ಯೂಸ್ : ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘೋರ ದುರಂತ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನೈಸ್ ರಸ್ತೆಯ ಚನ್ನಸಂದ್ರದ ಬಳಿ ನಡು ರಸ್ತೆಯಲ್ಲಿ ಕಾರೊಂದು ಧಗಧಗ ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರು ನೈಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ನೈಸ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿದ್ದ ದರ್ಶನ್ (40) ಸುಟ್ಟು ಕರಕಲಾಗಿದ್ದು, ಆರ್. ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲೇ ಹೊತ್ತಿ‌ಉರಿದ ಕಾರು| ಚಾಲಕ ಸಜೀವ ದಹನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿಗಳು ನಮ್ಮ ದಿನನಿತ್ಯದ ಆಗುಹೋಗುಗಳ ಮೇಲೆ ಪ್ರಭಾವ ಬೀರುತ್ತವೆ. ನಮ್ಮ ದೈನಂದಿನ ಚಲನೆಗಳಿಗೆ ರಾಶಿ ಹಾಗೂ ನಕ್ಷತ್ರಗಳ‌ ಪ್ರಭಾವವೇ ಕಾರಣವಾಗಿವೆ. ಇವುಗಳ ಪೂರ್ವನಿರ್ಧರಿತ ಭವಿಷ್ಯದಿಂದ ನಾವು ನಿತ್ಯಕರ್ಮಗಳನ್ನು ಪೂರೈಸಬೇಕಿದೆ. ರಾಶಿಗಳ ಪ್ರಭಾವದಿಂದ ಒಳಿತು ಹಾಗೂ ಕೆಡುಕುಗಳು ಉಂಟಾಗುವುದರಿಂದ ನಾವು ಇದರ ಭವಿಷ್ಯ ತಿಳಿದುಕೊಳ್ಳುವುದು ಅವಶ್ಯಕ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಈ ವಾರದ ಭವಿಷ್ಯ ಇಲ್ಲಿ ನೀಡಲಾಗಿದ್ದು, ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಲಾಗಿದೆ. ನಿಮ್ಮ ರಾಶಿಗಳ ಭವಿಷ್ಯ ತಿಳಿದುಕೊಳ್ಳಿ. ಮೇಷ ರಾಶಿ: ಕೌಟುಂಬಿಕ ಸಮಸ್ಯೆಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಉಗ್ರಕೃತ್ಯದಲ್ಲಿ ತೊಡಗಿದ್ದ 81 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಭಯೋತ್ಪಾದನೆ ಸಂಬಂಧಿಸಿದ ವಿವಿಧ ಅಪರಾಧಗಳ ಮೇಲೆ ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. ಇದು 2021 ರಲ್ಲಿ ಜಾರಿಗೆ ತಂದಿದ್ದ ಮರಣದಂಡನೆಗಳ ಲೆಕ್ಕಾಚಾರದಲ್ಲಿ ಹೆಚ್ಚಿನದು ಎಂದು ಸೌದಿ ಸರ್ಕಾರ ತಿಳಿಸಿದೆ. ಶಿಕ್ಷೆಗೊಳಗಾದವರು ಇಸ್ಲಾಮಿಕ್ ಸ್ಟೇಟ್, ಅಲ್-ಖೈದಾ, ಹೌತಿ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದವರಾಗಿದ್ದರು ಎಂದು ಸೌದಿಯ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಹೇಳಿದೆ. ಮರಣದಂಡನೆಗೆ ಒಳಗಾದವರೆಲ್ಲರೂ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ದೇಶದೊಳಗೆ

ಉಗ್ರಕೃತ್ಯದಲ್ಲಿ ತೊಡಗಿದ್ದ 81 ಮಂದಿಗೆ ಗಲ್ಲು Read More »