ಉಡುಪಿ: ಸರಣಿ ಅಪಘಾತ
ಸಮಗ್ರ ನ್ಯೂಸ್: ಕರಾವಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಎರಡು ಕಾರುಗಳಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಾ.3ರ ಗುರುವಾರ ನಡೆದಿದೆ. ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರೊಂದು ಸಿಗ್ನಲ್ ಇಲ್ಲದೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಏಕಾಏಕಿ ನಿಧಾನವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕ ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ









