ಮಂಗಳೂರು: ಜ.ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿ ವಿಕೃತಿ| ಆರೋಪಗಳ ವಿರುದ್ಧ ಕ್ರಮ ಕೈಗೊಳ್ಳಲು ಗೃಹಸಚಿವರ ಸೂಚನೆ|
ಮಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಾವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿದ ಆರೋಪದಲ್ಲಿ ಮೂರು ಫೇಸ್‌ಬುಕ್ ಖಾತೆಗಳು ಹಾಗೂ ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಗಳ ಮೇಲೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಸ್ಥಳೀಯ ನಿವಾಸಿ ಸುಶಾಂತ್ ಪೂಜಾರಿ ಎಂಬುವರು ನೀಡಿದ ದೂರಿನ ಮೇಲೆ ಬೆಂಗಳೂರು ಮೂಲದ ವಸಂತ ಕುಮಾರ್ ಟಿ.ಕೆ ಹಾಗೂ ಶ್ರೀನಿವಾಸ ಕಾರ್ಕಳ ಎಂಬುವರ ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದು ಖಾತೆ ಅಪರಿಚಿತ ವ್ಯಕ್ತಿಗೆ ಸೇರಿದ್ದಾಗಿದೆ









