Editor

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ

ನವದೆಹಲಿ: ರೈತರನ್ನು ‘ಖಲಿಸ್ತಾನಿಗಳು’ ಎಂದು ಕರೆದಿದ್ದಕ್ಕಾಗಿ ಬಾಲಿವುಡ್ ನಟಿ, ಪದ್ಮಶ್ರೀ ಪುರಸ್ಕೃತೆ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ರೈತರ ಪ್ರತಿಭಟನೆಯನ್ನು ಖಲಿಸ್ತಾನಿ ಚಳುವಳಿ ಎಂದು ಚಿತ್ರಿಸಿದ್ದಾರೆ.ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಖಲಿಸ್ತಾನಿಗಳು’ ಎಂದು ಕರೆದಿದ್ದಾರೆ ಎಂದು ಮುಂಬೈನಲ್ಲಿ ನಟ ಕಂಗನಾ ರನೌತ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ರೈತರು ಖಲಿಸ್ತಾನಿಗಳಂತೆ..!, ವಿವಾದಕ್ಕೀಡಾದ ಕಂಗಾನಾ ಹೇಳಿಕೆ Read More »

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು

ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಆಸ್ಪತ್ರೆಗೆ ದಾಖಲು Read More »

ಭೀಕರ ರಸ್ತೆ ದುರಂತ| ಹೊತ್ತಿ ಉರಿದ ಪ್ರವಾಸಿ ಬಸ್| 12 ಮಕ್ಕಳು ಸೇರಿ 45 ಮಂದಿ ದುರ್ಮರಣ

ಸೋಫಿಯಾ: ಬಲ್ಗೇರಿಯಾದ ಹೆದ್ದಾರಿಯಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತವಾಗಿ ಬೆಂಕಿ ಹೊತ್ತಿಕೊಂಡಿದ್ದು, 12 ಮಕ್ಕಳು ಸೇರಿದಂತೆ ಕನಿಷ್ಠ 45 ಜನರು ಮಂಗಳವಾರ ಸಾವನ್ನಪ್ಪಿದ್ದಾರೆ. ಬಲ್ಗೇರಿಯನ್ ಅಧಿಕಾರಿಗಳು ಇದನ್ನು ಬಾಲ್ಕನ್ ದೇಶದ ಇತಿಹಾಸದಲ್ಲಿ ಅತ್ಯಂತ ಮಾರಣಾಂತಿಕ ಬಸ್ ಅಪಘಾತ ಎಂದು ಕರೆದಿದ್ದಾರೆ. ಅಪಘಾತದ ಕಾರಣ ಅಸ್ಪಷ್ಟವಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳುವ ಮೊದಲು ಅಥವಾ ನಂತರ ಬಸ್ ಹೆದ್ದಾರಿ ತಡೆಗೋಡೆಗೆ ಅಪ್ಪಳಿಸಿದೆ ಎಂದು ಬಲ್ಗೇರಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಉರಿಯುತ್ತಿರುವ ಬಸ್‌ನಿಂದ ಜಿಗಿದ ಏಳು ಜನರನ್ನು ಸೋಫಿಯಾದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ

ಭೀಕರ ರಸ್ತೆ ದುರಂತ| ಹೊತ್ತಿ ಉರಿದ ಪ್ರವಾಸಿ ಬಸ್| 12 ಮಕ್ಕಳು ಸೇರಿ 45 ಮಂದಿ ದುರ್ಮರಣ Read More »

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಅವರು ‘ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದರು. ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ

ಮೇಲ್ಮನೆ ಚುನಾವಣೆ: ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ Read More »

ಉಡುಪಿ: ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಟೀಚರ್|

ಉಡುಪಿ: ಕೆಲಸದ ಒತ್ತಡದಿಂದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21ರಂದು ರಾತ್ರಿ ಅಲೆವೂರಿನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಅಲೆವೂರು ನಿವಾಸಿ ಅಮೃತ (32) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅಮೃತಾ ಉಡುಪಿಯ ಖಾಸಗಿ ಶಾಲೆಯಲ್ಲಿ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಹಲವು ದಿನಗಳಿಂದ ಶಾಲೆಯ ಕೆಲಸದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಆಕೆಯ ಕುಟುಂಬ ಸದಸ್ಯರು ಮಲಗಿದ್ದಾಗ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ

ಉಡುಪಿ: ಕೆಲಸದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಟೀಚರ್| Read More »

ಶಾಲೆ ಬಸ್ಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದು 9 ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ 14 ವರ್ಷದ ಬಾಲಕ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ತಪ್ಪದೇ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದ ಹಾಗೂ ವಿದ್ಯಾಭ್ಯಾಸದಲ್ಲಿ

ಶಾಲೆ ಬಸ್ಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read More »

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ,

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಖಾಸಗಿ ಟಿವಿ ವರದಿಗಾರನಿಗೆ ಹಲ್ಲೆ, ಕೊಲೆಯತ್ನ| ಆರೋಪಿಯ ಬಂಧನ Read More »

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..?

ಕಾರವಾರ: ಇತಿಹಾಸ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇನ್ನು ಇದು ಉಗ್ರ ಸಂಘಟನೆ ದಾಳಿಯ ಪಿತೂರಿ ಎಂಬ ಅನುಮಾನ ಮೂಡಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಶಿವನ ವಿಗ್ರಹದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ಐಸಿಸ್ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಸಧ್ಯ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಾದ್ಯಮ

ವಿಶ್ವಪ್ರಸಿದ್ದ ಮುರುಡೇಶ್ವರದ ಶಿವನ ಮೂರ್ತಿಗೆ ಬಂತೇ ಸಂಚಕಾರ..?, ಐಸಿಸ್ ಪತ್ರಿಕೆಯಲ್ಲಿ ವಿರೂಪಗೊಂಡ ಪ್ರತಿಮೆ| ಏನಿದು ಮಹಾದೇವಾ..? Read More »

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ. ನವೆಂಬರ್ ನಲ್ಲಿ ಇಷ್ಟೊಂದು ಮಳೆಯಾಗಿರುವುದು ಹೊಸ ದಾಖಲೆಯನ್ನೇ ನಿರ್ಮಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು. ಹವಾಮಾನ ಮುನ್ಸೂಚನೆ

ನ.26 ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ Read More »