Editor

ಸಹಕಾರ ಸಚಿವರ ಗುಡುಗಿದ ಬೆದರಿದರಾ ಡಾ. ಎಂ.ಎನ್ ರಾಜೇಂದ್ರ ಕುಮಾರ್| ಎಂಎಲ್ಸಿ ಚುನಾವಣೆಯಿಂದ ದಿಢೀರ್ ಹಿಂದಕ್ಕೆ ಸರಿದ ಎಸ್ಸಿಡಿಸಿಸಿ‌ ಬ್ಯಾಂಕ್ ಅಧ್ಯಕ್ಷ

ಮಂಗಳೂರು : ದಕ್ಷಿಣ ಕನ್ನಡ ದ್ವಿ ಸದಸ್ಯ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿದ್ದ ಸಹಕಾರಿ ಧುರೀಣ ಎಸ್‌ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್‌ ಚುನಾವಣಾ ಕಣದಿಂದ ದೂರ ಉಳಿಯುವ ಅಚ್ಚರಿಯ ನಿರ್ಧಾರ ಮಾಡಿದ್ದಾರೆ. ದ.ಕ, ಉಡುಪಿ ಉಭಯ ಜಿಲ್ಲೆಗಳ ಸಹಕಾರಿಗಳು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡಿದ ಹಿನ್ನಲೆಯಲ್ಲಿ ಡಾ.ಎಂ.ಎನ್.‌ ರಾಜೇಂದ್ರ ಕುಮಾರ್‌ ಚುನಾವಣೆಗೆ ಸ್ಪರ್ಧಿಸುವ ಮನ ಮಾಡಿದ್ದರು . ಅ. 23 ರಂದು ಈ ಬಗ್ಗೆ ನಾಮಪತ್ರ ಸಲ್ಲಿಸುವುದಾಗಿಯೂ

ಸಹಕಾರ ಸಚಿವರ ಗುಡುಗಿದ ಬೆದರಿದರಾ ಡಾ. ಎಂ.ಎನ್ ರಾಜೇಂದ್ರ ಕುಮಾರ್| ಎಂಎಲ್ಸಿ ಚುನಾವಣೆಯಿಂದ ದಿಢೀರ್ ಹಿಂದಕ್ಕೆ ಸರಿದ ಎಸ್ಸಿಡಿಸಿಸಿ‌ ಬ್ಯಾಂಕ್ ಅಧ್ಯಕ್ಷ Read More »

ಪೆಟ್ರೋಲ್ ಬಳಿಕ ಶತಕ ಬಾರಿಸಿದ ಟೊಮ್ಯಾಟೊ| ಗ್ರಾಹಕರ ಕೈ ಸುಡುತ್ತಿದ್ದಾಳೆ ಕೆಂಪು ಸುಂದರಿ|

ಬೆಂಗಳೂರು :ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು ಪೆಟ್ರೋಲ್ ಬಳಿಕ ಟೊಮೊಟೊ ಬೆಲೆ ಶತಕ ದಾಟಿದೆ. ಬೆಂಗಳೂರಿನಲ್ಲಿ 1 ಕೆಜಿ ಟೊಮೊಟೊ ಬೆಲೆ 100 ರೂ. ಗಡಿ ದಾಟಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 100 ರೂ.ಗಡಿ ದಾಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 1 ಕೆ.ಜಿ ಬೆಲೆ 98-100 ರೂ. ಮತ್ತು ಹಾಪ್‌ಕಾಮ್ಸ್ ಮಳಿಗೆಗಳಲ್ಲಿ 93 ರೂ. ಗೆ ಏರಿಕೆಯಾಗಿದೆ. ಭಾರೀ ಮಳೆಯಿಂದಾಗಿ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ

ಪೆಟ್ರೋಲ್ ಬಳಿಕ ಶತಕ ಬಾರಿಸಿದ ಟೊಮ್ಯಾಟೊ| ಗ್ರಾಹಕರ ಕೈ ಸುಡುತ್ತಿದ್ದಾಳೆ ಕೆಂಪು ಸುಂದರಿ| Read More »

ಗೆಳತಿಯನ್ನು ಆಕೆಯ‌ ಮನೆಯಲ್ಲಿ ಇರಿದು ಕೊಂದು ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿ

ಬೆಂಗಳೂರು: 21ರ ಹರೆಯದ ಯುವಕನೊಬ್ಬ ತನ್ನ 19 ವರ್ಷದ ಪ್ರಿಯತಮೆಯನ್ನು ಆಕೆಯ ಮನೆಯಲ್ಲಿ ಚಾಕುವಿನಿಂದ ಇರಿದು ಕೊಂದು ಹಾಕಿದ ಘಟನೆ ಗುರುವಾರ ಸಂಜೆ ಅದೇ ಮನೆಯ ಸೀಲಿಂಗ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಜಿಗಣಿಯ ನಿಸರ್ಗ ಲೇಔಟ್‌ನ ಸಿಂಚನಾ(19) ಹತ್ಯೆಗೊಳಗಾದ ಯುವತಿ. ಏಕೈಕ ಪುತ್ರಿಯಾಗಿರುವ ಈಕೆಯ ತಂದೆ ಆನೇಕಲ್‌ನ ಹರಪನಹಳ್ಳಿಯಲ್ಲಿ ಹಾರ್ಡ್‌ವೇರ್ ಅಂಗಡಿ ಹೊಂದಿದ್ದಾರೆ. ಆರೋಪಿ ಕಿಶೋರ್ ಕುಮಾರ್, ಆನೇಕಲ್‌ನ ಗೋಡೌನ್ ಚಾಲಕ. ಸಿಂಚನಾ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಗೆಳತಿಯನ್ನು ಆಕೆಯ‌ ಮನೆಯಲ್ಲಿ ಇರಿದು ಕೊಂದು ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿ Read More »

ಸಂಪಾಜೆ: ಮೇಯಲು ಬಿಟ್ಟ ದನಗಳು ನಿಗೂಢ ಕಣ್ಮರೆ| ಭಯ ಮತ್ತು ಅನುಮಾನದಲ್ಲಿ ಮಾಲೀಕರು|

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಮೇಯಲು ಬಿಟ್ಟ ಕೆಲವು ಹಸುಗಳು ನಿಗೂಢವಾಗಿ ಕಣ್ಮರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಬೆಳಿಗ್ಗೆ ಮೇಯಲು ಬಿಟ್ಟ ಹಸುಗಳು ಇದ್ದಕ್ಕಿದ್ದಂತೆ ಕಾಣೆಯಾಗುತ್ತಿರುವ ಪ್ರಕರಣ ‌ಮಾಲಿಕರಿಗೆ ಭಯ ಮತ್ತು ಅನುಮಾನಗಳನ್ನು ಹುಟ್ಟುಹಾಕಿದೆ. ಕೆಲವು ಮಾಲೀಕರು ತಮ್ಮ ಅದಾಯದ ಮೂಲಗಳಾದ ಹಸುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ ಎನ್ನಲಾಗಿದೆ. ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಯಥೇಚ್ಛವಾಗಿ ನಡೆಯುತ್ತಿದ್ದು, ಖದೀಮರು ಗೋವುಗಳನ್ನು ಕದ್ದು ಸಾಗಿಸುತ್ತಿರುವ ಬಗ್ಗೆ ಶಂಕೆ

ಸಂಪಾಜೆ: ಮೇಯಲು ಬಿಟ್ಟ ದನಗಳು ನಿಗೂಢ ಕಣ್ಮರೆ| ಭಯ ಮತ್ತು ಅನುಮಾನದಲ್ಲಿ ಮಾಲೀಕರು| Read More »

ನ.29ರಿಂದ ಡಿ.4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ| ಧರ್ಮನೆಲೆಯಲ್ಲಿ ಸಕಲ ಸಿದ್ದತೆಗಳು ಪೂರ್ಣ|

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನ.29ರಿಂದ ಡಿ.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ಡಿ.3ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಡಿ.2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ನ.3ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿ.ವಿ.ಯ ವಿಶ್ರಾಂತ ಕುಲಪತಿ

ನ.29ರಿಂದ ಡಿ.4ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ| ಧರ್ಮನೆಲೆಯಲ್ಲಿ ಸಕಲ ಸಿದ್ದತೆಗಳು ಪೂರ್ಣ| Read More »

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಆರೋಪಿಯ ಬಂಧನ

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ, ಆರೋಪಿಯ ಬಂಧನ Read More »

ಟಿ.20 ಸರಣಿ: ನ್ಯೂಜಿಲೆಂಡ್ ಮಣಿಸಿದ ಭಾರತ

ಇಂದು ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್​​ ಭರ್ಜರಿ ಗೆಲವು ಸಾಧಿಸಿದೆ. ನ್ಯೂಜಿಲೆಂಡ್​​ ನೀಡಿದ ಟಾರ್ಗೆಟ್​​ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್​​ ರಾಹುಲ್​​ ಮತ್ತು ನಾಯಕ ರೋಹಿತ್​​ ಶರ್ಮಾ ಅವರ ಅರ್ಧಶತಕದ ನೆರವಿನಿಂದ 17.1 ಓವರ್​​ನಲ್ಲಿ 154 ರನ್​​ ಗಳಿಸಿ ಗೆದ್ದು ಬೀಗಿದೆ. ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ನ್ಯೂಜಿಲೆಂಡ್​​ ತಂಡ ನಿಗದಿತ 20 ಓವರ್​​ನಲ್ಲಿ 6 ವಿಕೆಟ್​ ನಷ್ಟಕ್ಕೆ 153

ಟಿ.20 ಸರಣಿ: ನ್ಯೂಜಿಲೆಂಡ್ ಮಣಿಸಿದ ಭಾರತ Read More »

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್|

ಬೆಂಗಳೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 20 ಅಭ್ಯರ್ಥಿಗಳಿವರು. ಬೆಳಗಾವಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ, ಧಾರವಾಡದಿಂದ ಪ್ರದೀಪ ಶೆಟ್ಟರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದಿಂದ ಡಿ.ಎಸ್. ಅರುಣ್, ಕೊಡಗಿನಿಂದ ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು ಎಂ.ಕೆ.ಪ್ರಾಣೇಶ ಹೆಸರಿದೆ. ಉತ್ತರ ಕನ್ನಡ ಗಣಪತಿ ಉಳ್ವೇಕರ್, ಮೈಸೂರು ರಘು ಕೌಟಿಲ್ಯ,

ವಿಧಾನ ಪರಿಷತ್ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ‌ ಮೊದಲ ಪಟ್ಟಿ ರಿಲೀಸ್| Read More »

ಮಂಡ್ಯ: ಭೀಕರ ಅಪಘಾತದಲ್ಲಿ ಐವರ ಪ್ರಾಣ ತೆಗೆದ ಜವರಾಯ

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೆಂಕಟೇಶ(25), ಮುತ್ತಮ್ಮ(45), ಬಸಮ್ಮಣ್ಣಿ(30) ಹಾಗೂ ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಘಟಿಸಿದೆ. ಅಪಘಾತದ ತೀವ್ರತೆಗೆ ಆಟೋ ನಜ್ಜು ಗುಜ್ಜಾಗಿದೆ. ಎದುರಿನಿಂದ ಬಂದ ಲಾರಿ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ

ಮಂಡ್ಯ: ಭೀಕರ ಅಪಘಾತದಲ್ಲಿ ಐವರ ಪ್ರಾಣ ತೆಗೆದ ಜವರಾಯ Read More »

ಎಂಎಲ್ಸಿ ಚುನಾವಣೆ| ಡಾ. ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ದ ಆರೋಪಗಳ ಸುರಿಮಳೆಗೈದ ಸಚಿವ ಎಸ್.ಟಿ‌ ಸೋಮಶೇಖರ್|

ಮಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ದಿನೇದಿನೆ ಕಾವು ಪಡೆದುಕೊಳ್ಳುತ್ತಿದೆ. ದ.ಕ ಕ್ಷೇತ್ರದಿಂದ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಎಂ.ಎನ್. ರಾಜೇಂದ್ರ ಕುಮಾರ್ ವಿರುದ್ಧ ಮೊದಲ ಬಾರಿಗೆ ದನಿ ಎತ್ತಿದ್ದಾರೆ. ಮಂಗಳೂರು ಹೊರವಲಯದ ಅಡ್ಯಾರಿನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ಧ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ನೇರ ವಾಗ್ದಾಳಿ ನಡೆಸಿದ್ದಾರೆ. ಎಸ್ ಸಿ ಡಿ ಸಿ ಸಿ ಬ್ಯಾಂಕ್

ಎಂಎಲ್ಸಿ ಚುನಾವಣೆ| ಡಾ. ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ದ ಆರೋಪಗಳ ಸುರಿಮಳೆಗೈದ ಸಚಿವ ಎಸ್.ಟಿ‌ ಸೋಮಶೇಖರ್| Read More »