ಕಗ್ಗೋಡ್ಲುವಿನಲ್ಲಿ ಗೋವನ್ನು ಗುಂಡಿಕ್ಕಿ ಕೊಂದ ಕಟುಕರು | ಕೊಡಗಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಗೋಮಾಂಸ ದಂದೆ
ಮಡಿಕೇರಿ: ತಾಲೂಕಿನ ಕಗ್ಗೋಡ್ಲುವಿನಲ್ಲಿ ಹಸುವೊಂದನ್ನು ಕಟುಕರು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಘಟನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗುಂಡಿಕ್ಕಿ ಗೋಹತ್ಯೆ ಮಾಡಿದ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ದುಷ್ಕರ್ಮಿಯೊಬ್ಬ ಹಿಂದು ಸಂಘಟನೆ ಕಾರ್ಯಕರ್ತನೊಬ್ಬನಿಗೆ ಕೋವಿ ತೋರಿಸಿ ಬೆದರಿಸಿದ್ದಾನೆ. ನಂತರ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಜಮಾಯಿಸುವುದನ್ನು ಕಂಡು ಎಲ್ಲರೂ ಕಾಡಿನೊಳಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು […]