‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ
ಮೈಸೂರು, ಜೂನ್ 7: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಒಳಗಾಗಿತ್ತು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದೆ.ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ರೋಹಿಣಿ […]