ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್
ಮುಂಬೈ: ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ […]