Editor

ವರ್ಷ ಹಲವಾದರೂ ಮದುವೆಯಾಗದ ಸಂಸದೆ ಕುರಿತು ಚೈತ್ರಾ ಕುಂದಾಪುರ ಯಾಕೆ ಪ್ರಶ್ನೆ ಕೇಳಲ್ಲ – ಮಾಜಿ ಶಾಸಕ ಶಕುಂತಳಾ ಶೆಟ್ಟಿ

ಮಂಗಳೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಹುಡುಗಿಯ ಬಗ್ಗೆ ಮಾತನಾಡುವ ಚೈತ್ರಾ ಕುಂದಾಪುರ ನಿಮ್ಮದೇ ಕ್ಷೇತ್ರದ ಸಂಸದೆ ಜೊತೆಗೆ ನನ್ನ ಊರಿನ ಹೆಣ್ಣು ಮಗಳು ಶೋಭಾ ಕರಂದ್ಲಾಜೆಗೆ 55 ವರ್ಷ ಪ್ರಾಯ ಆದ್ರೂ ಮದುವೆ ಆಗದ ಕುರಿತು ನೀವು ಯಾಕೆ ಪ್ರಶ್ನೆ ಎತ್ತಿಲ್ಲ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ ಸಮುದಾಯದವರು ಪಕ್ಷದ ರಾಜ್ಯಾಧ್ಯಕ್ಷರಾಗಿರುವಾಗ, ಆಕೆ ಭಾಷಣ ಮಾಡಿದ ಜಾಗದಲ್ಲಿ ಬಂಟ ಸಮುದಾಯ ಪ್ರತಿನಿಧಿ ಶಾಸಕರಾಗಿರುವಾಗ, ಬಂಟ ಸಮುದಾಯದ ಹೆಣ್ಣು

ವರ್ಷ ಹಲವಾದರೂ ಮದುವೆಯಾಗದ ಸಂಸದೆ ಕುರಿತು ಚೈತ್ರಾ ಕುಂದಾಪುರ ಯಾಕೆ ಪ್ರಶ್ನೆ ಕೇಳಲ್ಲ – ಮಾಜಿ ಶಾಸಕ ಶಕುಂತಳಾ ಶೆಟ್ಟಿ Read More »

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ.

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ Read More »

ಡೀಸೆಲ್‌ ಬೆಲೆ ಇಳಿಸದಿದ್ದರೆ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ| ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಾರಿ ಮಾಲೀಕರು|

ಬೆಂಗಳೂರು: ಡೀಸೆಲ್‌ ಮೇಲೆ ವಿಧಿಸಿರುವ ವ್ಯಾಟ್‌ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಡಿಸೇಲ್ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ 26 ರೂಪಾಯಿಯಷ್ಟು ಹೆಚ್ಚಾಗಿದೆ.‌ ರಾಜ್ಯದಲ್ಲಿರುವ ಆರು ಲಕ್ಷ ಲಾರಿಗಳಲ್ಲಿ ಶೇ. 30 ರಷ್ಟು ಲಾರಿಗಳು ಶೆಡ್ ಸೇರಿವೆ. ದಿನದಿಂದ‌

ಡೀಸೆಲ್‌ ಬೆಲೆ ಇಳಿಸದಿದ್ದರೆ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ| ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಾರಿ ಮಾಲೀಕರು| Read More »

ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟರ್ – ವಿವಾದಾತ್ಮಕ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್

ಹುಬ್ಬಳ್ಳಿ: ‘ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್. ಡ್ರಗ್ ಪೆಡ್ಲರ್’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್ ಕುಮಾರ್, ‘ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್ , ಡ್ರಗ್ ಪೆಡ್ಲರ್ ಅಂತ ವರದಿಯಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೂ ಜೈಲಿಗೆ ಹೋಗಿದ್ದರು. ಇತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಜೈಲಿಗೆ ಹೋಗಿ ಬಂದಿದ್ದಾರೆ. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ

ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟರ್ – ವಿವಾದಾತ್ಮಕ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್ Read More »

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ|

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯೊಂದಿಗೆ ಚರ್ಚಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿಯಿಂದ ನೈನಿತಾಲ್ ಮತ್ತು ಕೌಶಾನಿಯಿಂದ ಮುನ್ಸಿವರೆಗೆ ಹೋಗುವ ದಾರಿಯಲ್ಲಿ ಹಲವಾರು ಭೂಕುಸಿತಗಳು ಸಂಭವಿಸಿವೆ. ಕೌಶನಿಯ ವಿವಿಧ ಸ್ಥಳಗಳಲ್ಲಿ ಸುಮಾರು 500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಲ್ಮೋರಾ ಜಿಲ್ಲೆಯಲ್ಲಿ ಭಾರೀ

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ| Read More »

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

45ರ ವರ, 25ರ ವಧು..! ವೈರಲ್ ಆಗ್ತಾ‌ ಇದೆ ಈ ಜೋಡಿಯ ಫೋಟೋ|

ತುಮಕೂರು: ಮದುವೆಯನ್ನ ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡುತ್ತಾನೆ ಅನ್ನೊ ಮಾತಿದೆ. ಋಣ ಸಂಬಂಧ ಇದ್ದರೆ ಎಲ್ಲೇ ಇದ್ದರೂ, ಹೇಗಾದರೂ ಒಂದಾಗುತ್ತಾರೆ ಅನ್ನೋ ಮಾತುಗಳು ಕೂಡ ಇವೆ. ಅದೇ ರೀತಿ ಈ ಮಾತುಗಳು ನಿಜವೆಂಬಂತೆ 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ

45ರ ವರ, 25ರ ವಧು..! ವೈರಲ್ ಆಗ್ತಾ‌ ಇದೆ ಈ ಜೋಡಿಯ ಫೋಟೋ| Read More »

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು|

ಬಂಟ್ವಾಳ: ಇಲ್ಲಿನ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಅ.18ರಂದು ತಡರಾತ್ರಿ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು , ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ , ಭಗವಾಧ್ವಜ ಅಳವಡಿಸಿ ನವೀಕರಣಗೊಳಿಸಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ

ಬಂಟ್ವಾಳ: ಭಗವಧ್ವಜ ಕಟ್ಟೆಗೆ ಕಿಡಿಗೇಡಿಗಳಿಂದ ಹಾನಿ| ಸಿಸಿ ಟಿವಿಯಲ್ಲಿ ಕೃತ್ಯ ದಾಖಲು| Read More »

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ|

ಮಂಗಳೂರು: ಬೈಕಲ್ಲಿ ಹೊಂಚು ಹಾಕಿ ಕುಳಿತಿದ್ದ ಮೂವರು ಅಪರಿಚಿತರು ಬಿಜೆಪಿ ಪ್ರಮುಖನ ಮೇಲೆ ತಲವಾರು ದಾಳಿ ನಡೆಸಿ, ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ನಡೆದಿದೆ. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿಜೆಪಿ ಪ್ರಮುಖರಾದ ಪ್ರಕಾಶ್ ಶೆಟ್ಟಿ(41) ಎಂಬವರ ಮೇಲೆ ತಲವಾರು ದಾಳಿ ನಡೆದಿದೆ. ಸಮಯ ಪ್ರಜ್ಞೆ ಮೆರೆದ ಪ್ರಕಾಶ್ ಅವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕೊಣಾಜೆ ವಿವಿ ಆವರಣದ ಹಾಸ್ಟೆಲ್ ಬಳಿಯ ದುರ್ಗಾ ಫ್ಯಾನ್ಸಿ &

ತಡರಾತ್ರಿ ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಿಂದೂ ಕಾರ್ಯಕರ್ತನ ಹತ್ಯೆಗೆ ವಿಫಲ ಯತ್ನ| Read More »

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲು ಸಮೀಪದ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೊರಟಿದ್ದ ಬೈಕ್ ಮತ್ತು ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »