Editor

ಮಂಗಳೂರು: ”ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ?” ಇಂದು ಸುಳ್ಯ ಕೋರ್ಟ್ ಗೆ ಡಿಕೆಶಿ!

ಮಂಗಳೂರು: ಸುಳ್ಯದ ವ್ಯಕ್ತಿಯೊಡನೆ ಫೋನ್ ಸಂಭಾಷಣೆ ಮೂಲಕ ಮಾತಿನ ಚಕಮಕಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಹಿನ್ನಲೆ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಡಿಕೆಶಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಇಂಧನ ಸಚಿವನಾಗಿದ್ದಾಗ ಯಾರೋ ಓರ್ವ ತಲೆಹರಟೆ ಮಾಡಿ ಫೋನ್ ಮಾಡಿದ್ದು ನನ್ನೊಂದಿಗೆ ಬೇಕಾಬಿಟ್ಟಿ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ಧ ದೂರು

ಮಂಗಳೂರು: ”ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ?” ಇಂದು ಸುಳ್ಯ ಕೋರ್ಟ್ ಗೆ ಡಿಕೆಶಿ! Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ| ಅನೇಕ ಕಡೆ ಕೃಷಿ ಹಾನಿ, ಜನಜೀವನ ಅಸ್ತವ್ಯಸ್ತ|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಗೂ ಜಿಲ್ಲೆಯ ಕೆಲವೆಡೆಗಳಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಹಿತ ಹಲವು ರಸ್ತೆಯಲ್ಲಿ ಪ್ರವಾಹೋಪಾದಿಯಲ್ಲಿ ನೀರು ಹರಿದು, ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಸುಳ್ಯ ತಾಲೂಕಿನ ಮಡಪ್ಪಾಡಿ, ಮರ್ಕಂಜ ಭಾಗದಲ್ಲಿ ಒಂದು ಗಂಟೆ ಅವಧಿಯಲ್ಲಿ 184 ಮಿ.ಮೀ. ಮಳೆ ದಾಖಲಾಗಿದೆ. ಪುತ್ತೂರು ತಾಲೂಕಿನ ಅಲ್ಲಲ್ಲಿ ಮಳೆಯಾಗಿದ್ದರೆ, ಕಡಬ ಭಾಗದಲ್ಲಿ ಗುಡುಗು ಮಳೆ ಅಬ್ಬರ ಜೋರಾಗಿತ್ತು. ಬಂಟ್ವಾಳ, ಮಂಗಳೂರು,

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ| ಅನೇಕ ಕಡೆ ಕೃಷಿ ಹಾನಿ, ಜನಜೀವನ ಅಸ್ತವ್ಯಸ್ತ| Read More »

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ

ಮೈಸೂರು : ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದಿನಿಂದ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ

ಮೈಸೂರು: ಇಂದಿನಿಂದ ಎರಡು ದಿನ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ Read More »

ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ?

ಬೆಂಗಳೂರು: ಡಿಜಿಟಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಭಾಗವನ್ನೇ ಹೊಂದಿರುವ ಫೇಸ್​ಬುಕ್​, ವಾಟ್ಸ್​ ಆ್ಯಪ್​ ಹಾಗೂ ಇನ್​ಸ್ಟಾಗ್ರಾಮ್​ ಸರ್ವರ್​ ಇದ್ದಕ್ಕಿದ್ದಂತೆ ಕೈಕೊಟ್ಟಿರುವುದರಿಂದ ಬರೀ ಸಂವಹನದಲ್ಲಷ್ಟೇ ವ್ಯತ್ಯಯವಾಗಿರುವುದಲ್ಲ. ಜತೆಗೆ ಜಾಗತಿಕ ಆರ್ಥಿಕತೆಯಲ್ಲೂ ಭಾರಿ ನಷ್ಟ ಉಂಟಾಗಿದೆ. ಸದ್ಯ ಒಂದು ಗಂಟೆಗೂ ಹೆಚ್ಚು ಕಾಲದಿಂದ ಈ ಮೂರೂ ಸಾಮಾಜಿಕ ತಾಣಗಳಿಗೆ ಸಂಬಂಧಿಸಿದಂತೆ ಸರ್ವರ್​ ಡೌನ್​ ಆಗಿದ್ದು, ಪರ್ಸನಲ್​ ಮೆಸೇಜಿಂಗ್ ಹಾಗೂ ಸೋಷಿಯಲ್ ಕಮ್ಯುನಿಕೇಷನ್​ ಎರಡೂ ಸಾಧ್ಯವಾಗಿರಲಿಲ್ಲ. ಇದ್ದಕ್ಕಿದ್ದಂತೆ ಕೈಕೊಟ್ಟ ಇವುಗಳ ಹೊಡೆತ ತಾಳಲಾರದೆ ಪರ್ಯಾಯವಾಗಿ ಡಿಜಿಟಲ್​ ಬಳಕೆದಾರರು ಟ್ವಿಟರ್​, ಟೆಲಿಗ್ರಾಂ ಹಾಗೂ

ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ದೋಷ| ಆ ಒಂದು ಗಂಟೆಯ ಆರ್ಥಿಕ ಹೊಡೆತ ಎಷ್ಟು ಗೊತ್ತೇ? Read More »

ಪೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ಸ್ಥಗಿತ| ಬಳಕೆದಾರರು ಕಂಗಾಲು

ನವದೆಹಲಿ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಗಳು ಇಂದು ಸಂಜೆಯಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ಯಾವುದೇ ರೀತಿಯ ಮಸೇಜ್ ಗಳನ್ನು ಕಳುಹಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವೆಬ್‌ಸೈಟ್‌ಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ ಮಾಹಿತಿ ಒದಿಗಿಸುವ ವೆಬ್‌ಸೈಟ್‌ ‘ಡೌನ್‌ ಡಿಟೆಕ್ಟರ್‌’ ಪ್ರಕಾರ ಫೇಸ್‌ಬುಕ್‌ ಒಡೆತನದ ಸಾಮಾಜಿಕ ಮಾಧ್ಯಮಗಳಲ್ಲಿ ಸಂಜೆ ಐದು ಗಂಟೆಯಿಂದಲೇ ಸಮಸ್ಯೆ ಎದುರಾಗಿದೆ. ನಂತರ ಸಮಸ್ಯೆಯು ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಸೇವೆಯಲ್ಲಿನ ವ್ಯತ್ಯಯದ ಕುರಿತು ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಮಸ್ಯೆ ಅರಿವಿಗೆ ಬಂದಿದ್ದು,

ಪೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ಸ್ಥಗಿತ| ಬಳಕೆದಾರರು ಕಂಗಾಲು Read More »

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ

ಯಾದಗಿರಿ: ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆರೋಪಿ ಗಂಗಪ್ಪ ನಾಪತ್ತೆಯಾಗಿದ್ದಾನೆ. ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ Read More »

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು

ಚೆನ್ನೈ: ಹಣ್ಣಿನ ಜೂಸ್ ಎಂದು ತಪ್ಪಾಗಿ ತಿಳಿದು ಆಲ್ಕೊಹಾಲ್ ಸೇವಿಸಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಅಣ್ಣಾನಗರದಲ್ಲಿ ನಡೆದಿದೆ. ರಾಕೇಶ್(5) ಮೃತಪಟ್ಟ ಬಾಲಕ. ಆತನ ತಾತ ಚಿನ್ನಸ್ವಾಮಿ ಅವರಿಗೆ ಕುಡಿತದ ಚಟವಿತ್ತು. ಹೀಗಾಗಿ ಮನೆಯಲ್ಲಿಯೇ ಮದ್ಯದ ಬಾಟಲಿಯನ್ನು ತಂದು ಇಟ್ಟುಕೊಂಡಿದ್ದರು. ಇದನ್ನು ನೋಡಿದ ಬಾಲಕ ಜ್ಯೂಸ್ ಎಂದು ಕುಡಿದು ಸಾವನ್ನಪ್ಪಿದ್ದಾನೆ. ಆತ ಕುಡಿದ ಸಂಗತಿ ಯಾರಿಗೂ ತಿಳಿದಿರಲಿಲ್ಲ. ನಂತರ ರಾಕೇಶ್ ಏಕಾಏಕಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಅದನ್ನು ಕಂಡು ರಾಕೇಶ್ ತಾತ ಚಿನ್ನಸ್ವಾಮಿ ಕೂಡಾ ಅನಾರೋಗ್ಯಕ್ಕೀಡಾದರು.

ಜ್ಯೂಸ್ ಎಂದು ಆಲ್ಕೊಹಾಲ್ ಕುಡಿದ 5 ಪೋರ ಮೃತ್ಯು Read More »

ಸುಳ್ಯ: ಅ. 5 ರಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಡಿಕೆಶಿ

ಸುಳ್ಯ: ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸಮಸ್ಯೆ ಬಗ್ಗೆ ಕರೆ ಮಾಡಿದ ವ್ಯಕ್ತಿಯನ್ನು ಬಂಧನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸುಳ್ಯದ ನ್ಯಾಯಾಲಯ ಪದೇ ಪದೇ ನೋಟಿಸ್ ನೀಡಿದ್ದರು ಆಗಮಿಸದಿದ್ದ ಡಿ.ಕೆ ಶಿವಕುಮಾರ್ ಇದೀಗ ಅಕ್ಟೋಬರ್ 5ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ಅವರಿಗೆ ನ್ಯಾಯಾಲಯವು ಮೂರು ಬಾರಿ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದ ಅವರಿಗೆ ಸೆಪ್ಟೆಂಬರ್ 29 ರಂದು ವಾರಂಟ್ ಜಾರಿಗೊಳಿಸಿ ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸ್ ಇಲಾಖೆಯ ಉನ್ನತ

ಸುಳ್ಯ: ಅ. 5 ರಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಡಿಕೆಶಿ Read More »

ಮಂಗಳೂರು ನಗರದಲ್ಲಿ ಚಿರತೆಯ ಓಡಾಟ! ಬೆಚ್ಚಿಬಿದ್ದ ಕುಡ್ಲ ಜನತೆ

ಮಂಗಳೂರು: ಮಂಗಳೂರು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಕಂಡುಬಂದಿದ್ದು, ಮಂಗಳೂರಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದೆ. ಈ ಹಿನ್ನಲೆ ಮಂಗಳೂರು ಅರಣ್ಯ ವಲಯಾಧಿಕಾಧಿಕಾರಿ ಪ್ರಶಾಂತ್ ಪೈ ನೇತೃತ್ವದಲ್ಲಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದದೆ. ಇನ್ನೂ ಇದು ಜನವಸತಿ ಇರುವ ಪ್ರದೇಶವಾಗಿರುವ ಕಾರಣ ಚಿರತೆಯ ಓಡಾಟ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಂಗಳೂರು ನಗರದಲ್ಲಿ ಚಿರತೆಯ ಓಡಾಟ! ಬೆಚ್ಚಿಬಿದ್ದ ಕುಡ್ಲ ಜನತೆ Read More »

ಪುತ್ರನ ಕುರಿತು ಶಾರೂಕ್ ಹೇಳಿದ ಆ ಮಾತು ವೈರಲ್| ‘ನಮ್ಮ ಮಗ ಬೇಕಾದ್ದು ಮಾಡಲಿ’ ಎಂದು ಹೇಳಿದ್ದ ಖಾನ್ ದಂಪತಿ

ಮುಂಬೈ: ‘ತಮ್ಮ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಸೇವಿಸಲಿ, ಮನಬಂದಷ್ಟು ಸಿಗರೇಟ್​ ಸೇದಲಿ, ಬೇಕಾದರೆ ಹುಡುಗಿಯರ ಹಿಂದೆಯೂ ಹೋಗಲಿ’ ಎಂದು ಶಾರುಖ್​ ಖಾನ್​ ಹೇಳಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ.ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಅ.2ರ ರಾತ್ರಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು.ಅದರಲ್ಲಿ ಬಾಲಿವುಡ್​ನ ಸ್ಟಾರ್​ ನಟ ಶಾರುಖ್​ ಖಾನ್ ಪುತ್ರ ಆರ್ಯನ್​ ಖಾನ್​ ಕೂಡ ಭಾಗಿ ಆಗಿದ್ದರು. ಹಾಗಾಗಿ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆಯಿಂದಾಗಿ

ಪುತ್ರನ ಕುರಿತು ಶಾರೂಕ್ ಹೇಳಿದ ಆ ಮಾತು ವೈರಲ್| ‘ನಮ್ಮ ಮಗ ಬೇಕಾದ್ದು ಮಾಡಲಿ’ ಎಂದು ಹೇಳಿದ್ದ ಖಾನ್ ದಂಪತಿ Read More »