Editor

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಟಿ ದೋಷದಿಂದ ಬಳಲುತ್ತಿದ್ದ ಈಕೆ ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಅಲ್ಲಿ ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಕುಡಿದಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್‌

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು Read More »

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ,

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್

ಬೆಂಗಳೂರು: 40 ವರ್ಷ ಮೇಲ್ಪಟ್ಟ ಪುರುಷರು ಹಾಗೂ 45 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ವರ್ಷ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಬದಲು ಮೆಡಿಕಲ್ ಚೆಕಪ್ ವಾರ್ಷಿಕೋತ್ಸವ ಆಚರಿಸಿಕೊಂಡರೆ ಹೃದಯಾಘಾತ ಆಗುವುದರಿಂದ ಬಚಾವ್ ಆಗಬಹುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದಿಲ್ಲಿ ಹೇಳಿದರು. ಬಿಬಿಎಂಪಿ ಮತ್ತು ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಬಾಬು ಜಗಜೀವನರಾಮ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದೇ ಜಾಗದಲ್ಲಿ

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್ Read More »

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು|

ಕಾಬೂಲ್, ಸೆ.29- ಆಫ್ಘಾನಿಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊದಲ ಬಾರಿಗೆ ತಾಲಿಬಾನಿಗಳು ಭಾರತ ಸರ್ಕಾರದೊಂದಿಗೆ ಸಂಪರ್ಕ ಸಾಸಿದ್ದು, ಎರಡೂ ದೇಶಗಳ ನಡುವೆ ವಿಮಾನ ಸಂಚಾರ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಆಫ್ಘಾನಿಸ್ಥಾನದ ವಿಮಾನಯಾನ ಹಂಗಾಮಿ ಸಚಿವ ಹಮೀದುಲ್ಲಾ ಅಕುಂದಾ ಅವರು ಭಾರತದ ವಿಮಾನಯಾನದ ಮಹಾ ನಿರ್ದೇಶಕ ಅರುಣ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ದೇಶಗಳ ನಡುವೆ ಈ ಮೊದಲಿನಂತೆ ವಿಮಾನ ಸಂಚಾರ ಆರಂಭಿಸಬೇಕು ಎಂದು ಅಕುಂದಾ ಪತ್ರದಲ್ಲಿ ಸಲಹೆ ನೀಡಿದ್ದಾರೆ. ಕಾಬುಲ್ ವಿಮಾನ ನಿಲ್ದಾಣವನ್ನು ತಾಲಿಬಾನಿಗಳು ವಶಪಡಿಸಿಕೊಂಡ

ಭಾರತಕ್ಕೆ ಪತ್ರ ಬರೆದ ತಾಲಿಬಾನಿಗಳು| Read More »

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಹೋಟೆಲ್​ನಲ್ಲಿ ತಂಗಿದ್ದ ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಿದ ತಂಡದ ನೇತೃತ್ವವನ್ನು ಮಂಗಳೂರಿನ ಯುವತಿ ಸುಮಲ್ ಸಂದೀಪ್ ಕೋಟ್ಯಾನ್ ವಹಿಸಿಕೊಂಡಿದ್ದರು. ನರೇಂದ್ರ ಮೋದಿ ಅವರ ಜೊತೆಗಿನ ಮೂರು ದಿನಗಳ ಅನುಭವವನ್ನು ಮನೆಯವರ ಮುಂದೆ ಸುಮಲ್ ತೆರೆದಿಟ್ಟಿದ್ದು ನರೇಂದ್ರ ಮೋದಿ ಅವರಿಗೆ ಎರಡನೇ ಬಾರಿ ಆತಿಥ್ಯ ನೀಡಿದ ಖುಷಿಯನ್ನು ಹಂಚಿಕೊಂಡಿದ್ದಾರೆ. ಸುಮಲ್ ಸಂದೀಪ್ ಕೋಟ್ಯಾನ್

ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ‌ ನೀಡಿದ ತಂಡದಲ್ಲಿ ಸುಮಲ್ ಸಂದೀಪ್ Read More »

ಸುಳ್ಯ| ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ವ್ಯಕ್ತಿಯೊಬ್ಬರು ರಾತ್ರಿ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರಾಮದ ಪೆರುಂಬಾರು ನಿವಾಸಿ ಜಯರಾಮ ಗೌಡ(52) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಜಯರಾಮ ಗೌಡರಿಗೆ ಓಡಾಡುವ ಅಭ್ಯಾಸವಿದ್ದು, ನಿನ್ನೆ ತಡರಾತ್ರಿಯೂ ಮನೆಯಿಂದ ಹೊರಟು ಹೋಗಿದ್ದರೆನ್ನಲಾಗಿದೆ. ಬಳಿಕ ಮನೆಗೆ ಬಾರದಿದ್ದ ಅವರನ್ನು ಇಂದು ಮುಂಜಾನೆ ಹುಡುಕಾಟ ನಡೆಸಿದ್ದು, ಗೌಡರ ಮೃತದೇಹ ಮನೆಯಿಂದ 1 ಕಿ.ಮೀ ದೂರದ ಕಾರಿಂಜ ಸಿಆರ್ ಸಿ‌ ಕಾಲೊನಿ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ರಾತ್ರಿವೇಳೆ

ಸುಳ್ಯ| ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?

ಜಾರ್ಖಂಡ್: ಮದುವೆಯಾದರೂ ಅನ್ಯವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಇಬ್ಬರ ಪ್ರಕರಣ ನೋಡಲಾರದೆ ಗ್ರಾಮಸ್ಥರು ಈ ಕೃತ್ಯ ಎಸಗಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು 50-60 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಊರು ತುಂಬಾ ಮೆರವಣಿಗೆ

ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ? Read More »

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹೆಸರಿನಲ್ಲಿ ಯೋಜನೆ ಮುಂದುವರೆಯಲಿದೆ. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟ ವಿಸ್ತರಿಸಲಾಗಿದೆ. ವಿಶೇಷ ದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಂದಲೂ ಊಟ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಪೌಷ್ಟಿಕ ತರಕಾರಿ, ಹಣ್ಣು ಬೆಳೆಯಲು ಕೈತೋಟ

ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ Read More »

ಅನ್ಯಮತೀಯನ ಮನೆಯಲ್ಲಿ ಹಿಂದೂ ಯುವತಿ…!, ಯುವಕ ಪೊಲೀಸ್ ವಶ

ಪುತ್ತೂರು: ಅನ್ಯಮತೀಯ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇರುವ ಮಾಹಿತಿ ದೊರೆತು ಸಾರ್ವಜನಿಕರು ಮನೆಯ ಮುಂಭಾಗ ಸೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ಸೆ.29 ರಂದು ನಡೆದಿದೆ. ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿಯೊಬ್ಬಳು ತಂಗಿದ್ದಾಳೆ ಎನ್ನುವ ಬಗ್ಗೆ ಮಾಹಿತಿ ದೊರೆತ ಸ್ಥಳೀಯರು ಮನೆ ಬಳಿ ತೆರಳಿ ನೋಡಿದಾಗ ಅಲ್ಲಿ ಯುವತಿ ಇರುವ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿಯುತ್ತಿದಂತೆ ಯುವಕನ ಮನೆಗೆ ಸಾರ್ವಜನಿಕರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಅನ್ಯಮತೀಯನ ಮನೆಯಲ್ಲಿ ಹಿಂದೂ ಯುವತಿ…!, ಯುವಕ ಪೊಲೀಸ್ ವಶ Read More »

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ| ಹಲವು ಮಹಿಳೆಯರ ಬಾಳಲ್ಲಿ ಆಟವಾಡಿದ್ದವನ ಶಿಕ್ಷೆ ಮಾರ್ಪಾಡು ಅರ್ಜಿ ತಿರಸ್ಕರಿಸಿದ ಹೈಕೋರ್ಟ್|

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಸೆಷನ್ಸ್​ ಕೋರ್ಟ್​ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸುವಂತೆ ಹೈಕೋರ್ಟ್​​​ಗೆ ಉಮೇಶ್ ರೆಡ್ಡಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳಿಂದ ಒಂಟಿಯಾಗಿಯೇ ಸೆರೆಯಲ್ಲಿಡಲಾಗಿದೆ. ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿದ್ದು, ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದೇನೆ ಎಂದು ಉಮೇಶ್ ರೆಡ್ಡಿ ವಕೀಲರ ಮೂಲಕ ವಾದ ಮಂಡಿಸಿದ್ದನು. ಕ್ಷಮಾದಾನ ಅರ್ಜಿ ವಿಳಂಬ ವಾದ ತಳ್ಳಿ ಹಾಕಿದ ಕೋರ್ಟ್​ ಆದರೆ ಕೋರ್ಟ್ ಉಮೇಶ್ ರೆಡ್ಡಿಯ

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ| ಹಲವು ಮಹಿಳೆಯರ ಬಾಳಲ್ಲಿ ಆಟವಾಡಿದ್ದವನ ಶಿಕ್ಷೆ ಮಾರ್ಪಾಡು ಅರ್ಜಿ ತಿರಸ್ಕರಿಸಿದ ಹೈಕೋರ್ಟ್| Read More »