Editor

ಸೆಕ್ಸೀ ಸಾಂಪ್ರದಾಯಿಕ ಉಡುಗೆ ಧರಿಸಿದ ಬಾಲಿವುಡ್ ಬೆಡಗಿ| ನೋರಾ ಫತೇಹಿ ಡ್ರೆಸ್ ನೋಡಿ ನೆಟ್ಟಿಗರು ಕಿಡಿ

ಮುಂಬೈ: ಬಾಲಿವುಡ್‌ನ ಹಲವು ಹಿಟ್ ಹಾಡುಗಳಲ್ಲಿ ಬಳಕುವ ಬಳ್ಳಿಯಂತೆ ಸೊಂಟ ಬಳುಕಿಸಿರುವ ಚೆಲುವೆ ನೋರಾ ಫತೇಹಿ ಆಗಾಗ ಸ್ಟೈಲಿಶ್ ಉಡುಪುಗಳನ್ನು ತೊಟ್ಟು ಕ್ಯಾಮರಾ ಕಣ್ಣುಗಳ ಮುಂದೆ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೇ ಬೋಲ್ಡ್ ಔಟ್‌ಫಿಟ್ ತೊಟ್ಟು ಕ್ಯಾಮರಾ ಮುಂದೆ ಬಂದಿದ್ದ ನಟಿ ನೋರಾ ಫತೇಹಿಯನ್ನ ಕಂಡು ನೆಟ್ಟಿಗರು ಛೀಮಾರಿ ಹಾಕಿದ್ದರು. ಇದೀಗ ಮತ್ತೊಮ್ಮೆ ನಟಿ ನೋರಾ ಫತೇಹಿ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಎದೆಸೀಳು ಕಾಣುವ ಸಾಂಪ್ರದಾಯಿಕ ಉಡುಗೆಯನ್ನು ನಟಿ ನೋರಾ ಫತೇಹಿ ತೊಟ್ಟಿದ್ದಾರೆ. ಮೊನ್ನೆಮೊನ್ನೆಯಷ್ಟೇ ಫೋಟೋಶೂಟ್‌ವೊಂದರಲ್ಲಿ ನಟಿ ನೋರಾ

ಸೆಕ್ಸೀ ಸಾಂಪ್ರದಾಯಿಕ ಉಡುಗೆ ಧರಿಸಿದ ಬಾಲಿವುಡ್ ಬೆಡಗಿ| ನೋರಾ ಫತೇಹಿ ಡ್ರೆಸ್ ನೋಡಿ ನೆಟ್ಟಿಗರು ಕಿಡಿ Read More »

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು|

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು| Read More »

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ : ದ. ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28ರಂದು ನಡೆದಿದೆ. ಹುಣಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿಯಾದ ದೀಕ್ಷಿತ ಶೆಟ್ಟಿ(23.ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಯುವಶಕ್ತಿ ಬಂಟ್ವಾಳ ವತಿಯಿಂದ ‘ನಂದಕಿಶೋರ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಬಂಟ್ವಾಳ: ಟೀಂ ವೈಎಸ್ ಕೆ ವತಿಯಿಂದ ಆಯೋಜಿಸಲಾದ ‘ನಂದಕಿಶೋರ’ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ ಬಹುಮಾನವನ್ನು ಸಂಘದ ಪದಾಧಿಕಾರಿಗಳು ವಿತರಿಸಿದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮಂಗಳೂರಿನ ರಕ್ಷಣ್, ದ್ವಿತೀಯ ಬಹುಮಾನವನ್ನು ಮಂಗಳೂರಿನ ಬ್ರಹ್ಮೀ, ತೃತೀಯ ಬಹುಮಾನವನ್ನು ಮಂಗಳೂರಿನಲ್ಲಿ ನೆಲೆಸಿರುವ ಶೌರ್ಯ ಕೊಲ್ಯ‌ರವರಿಗೆ ವಿಜೇತರ ಮನೆಗಳಿಗೆ ಸಂಘದ ಸದಸ್ಯರು ತೆರಳಿ ವಿತರಿಸಿದರು

ಯುವಶಕ್ತಿ ಬಂಟ್ವಾಳ ವತಿಯಿಂದ ‘ನಂದಕಿಶೋರ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ Read More »

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು ಈ ಬಾರಿಯ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್‍.ಎಂ ಕೃಷ್ಣ ಉದ್ಘಾಟಿಸಲಿದ್ದಾರೆ. ಮಂಗಳವಾರ (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ Read More »

ಮತ್ತೊಂದು ಹೆಣ್ಣುಮಗು ಹುಟ್ಟಿತೆಂದು ಹೆಂಡತಿಯ ಕತ್ತು ಹಿಸುಕಿ ಕೊಲೆಗೈದ ಗಂಡ

ತೆಲಂಗಾಣ: ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ. ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್​​ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್​​ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ. 2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ.

ಮತ್ತೊಂದು ಹೆಣ್ಣುಮಗು ಹುಟ್ಟಿತೆಂದು ಹೆಂಡತಿಯ ಕತ್ತು ಹಿಸುಕಿ ಕೊಲೆಗೈದ ಗಂಡ Read More »

ಪಂಜಾಬ್ ಕಾಂಗ್ರೇಸ್ ನಲ್ಲಿ ಕ್ಷಿಪ್ರ ಬೆಳವಣಿಗೆ| ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ

ಪಂಜಾಬ್: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೆಲ ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ನವಜೋತ್‌ ಸಿಂಗ್‌ ಸಿಧು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಮುಖ್ಯಮಂತ್ರಿಗಳಾಗಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ವಿರೋಧದ ನಡುವೆಯೂ ನವಜೋತ್‌ ಸಿಂಗ್‌ ಸಿಧು, ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದಾದ ಕೆಲ ದಿನಗಳ ಬಳಿಕ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಅಮರಿಂದರ್‌ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ

ಪಂಜಾಬ್ ಕಾಂಗ್ರೇಸ್ ನಲ್ಲಿ ಕ್ಷಿಪ್ರ ಬೆಳವಣಿಗೆ| ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜೀನಾಮೆ Read More »

ನವ ಮಂಗಳೂರು ಬಂದರಿನಲ್ಲಿ ಸಹಾಯಕ ‌ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ನವ ಮಂಗಳೂರು ಬಂದರು ಮಂಡಳಿ (NMPT)ಯಲ್ಲಿ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೇರೆ ಇಲಾಖೆಗಳಲ್ಲಿ ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್​ 16 ಕಡೆಯ ದಿನವಾಗಿದೆ. ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ವಿವರ:ಸಹಾಯಕ ಕಾರ್ಯದರ್ಶಿ ಗ್ರೇಡ್​ 2 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಿ ಸಂಸ್ಥೆಯಲ್ಲಿ ಮೂರು ವರ್ಷದ ಸೇವಾ ಅನುಭವವನ್ನು

ನವ ಮಂಗಳೂರು ಬಂದರಿನಲ್ಲಿ ಸಹಾಯಕ ‌ಕಾರ್ಯದರ್ಶಿ ಹುದ್ದೆಗೆ ಅರ್ಜಿ ಆಹ್ವಾನ Read More »

ಮೊದಲ ಬಾರಿ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್| – ಆ ಸಿನಿಮಾ ಯಾವುದು ಗೊತ್ತಾ?

ಚೆನ್ನೈ: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಸಿನಿಮಾಗೆ ಅಮೆರಿಕನ್ ಮಾಜಿ ಬಾಕ್ಸರ್ ಮೈಕ್ ಟೈಸನ್ ಅಭಿನಯಿಸುವುದರ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಐರನ್ ಮೈಕ್ ಅಥವಾ ಕಿಡ್ ಡೈನಮೈಟ್ ಎಂದೇ ಪ್ರಸಿದ್ಧಿ ಹೊಂದಿರುವ ಮೈಕ್ ಟೈಸನ್ ಟಾಲಿವುಡ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರಲ್ಲಿಯೂ ವಿಜಯ್ ದೇವರಕೊಂಡ ಅವರ ‘ಲೈಗರ್’ ಸಿನಿಮಾದಲ್ಲಿ ಎಂಬುದು ವಿಶೇಷವಾಗಿದೆ. ಈ ಕುರಿತು ವಿಜಯ್ ತಮ್ಮ ಟ್ವಿಟ್ಟರ್ ನಲ್ಲಿ, ನಿಮಗೆ ಭರವಸೆಯನ್ನು ನೀಡಿದ್ದೆವು. ಅದರಂತೆ ಇಂದು ನಾವು ಪ್ರಾರಂಭಿಸಿದ್ದೇವೆ. ಭಾರತೀಯ

ಮೊದಲ ಬಾರಿ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್| – ಆ ಸಿನಿಮಾ ಯಾವುದು ಗೊತ್ತಾ? Read More »

ಮಂಗಳೂರು: ಮೇಲಧಿಕಾರಿ ಕಿರುಕುಳದಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ? ಮೃತ ದೇಹದೊಂದಿಗೆ ಠಾಣೆಗೆ ಆಗಮಿಸಿದ ಕುಟುಂಬಸ್ಥರು

ಮಂಗಳೂರು: ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ಬಾಗಲಕೋಟೆಯ ಹುನಗುಂದದ ನಿಂಗಪ್ಪ ಇಮರಾಪುರ ಸೆ. 26 ರ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ಮೇಲಧಿಕಾರಿಗಳ ಕಿರುಕುಳ ಕಾರಣ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ಮೂಲದ ರಾಮವಡಗಿ ಗ್ರಾಮದವರಾದ ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಮೂರನೇ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು. ಕಳೆದ 6 ತಿಂಗಳ ಹಿಂದೆ ಕರ್ತವ್ಯಲೋಪದ ಅಡಿಯಲ್ಲಿ ಅವರನ್ನು

ಮಂಗಳೂರು: ಮೇಲಧಿಕಾರಿ ಕಿರುಕುಳದಿಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ? ಮೃತ ದೇಹದೊಂದಿಗೆ ಠಾಣೆಗೆ ಆಗಮಿಸಿದ ಕುಟುಂಬಸ್ಥರು Read More »