‘ಮೋದಿ ಕೊಟ್ಟಿರೋ 5.5 ಲಕ್ಷ ಹಣವದು, ನಾನು ವಾಪಾಸ್ ಕೊಡಲ್ಲ’- ಹಠ ಹಿಡಿದು ಕುಳಿತುಕೊಂಡ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ಯಾಕೆ ಗೊತ್ತಾ?
ಪಾಟ್ನಾ: ಬಿಹಾರದ ಖಗರಿಯಾ ಜಿಲ್ಲೆಯ ವ್ಯಕ್ತಿಯೊಬ್ಬ ಬ್ಯಾಂಕ್ ದೋಷದಿಂದ ತನ್ನ ಖಾತೆಗೆ ಜಮೆಯಾದ ₹5.5 ಲಕ್ಷ ಹಣವನ್ನು ಹಿಂದಿರುಗಿಸದೆ ‘ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ’ ಎಂದು ಪಟ್ಟು ಹಿಡಿದಿದ್ದಾನೆ. ಖಗರಿಯಾದ ಗ್ರಾಮೀಣ ಬ್ಯಾಂಕ್‌ನಿಂದ ಹಣವನ್ನು ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ತಿಯಾರ್‌ಪುರ್ ಗ್ರಾಮದ ರಂಜಿತ್ ದಾಸ್ ಎಂಬವರಿಗೆ ತಪ್ಪಾಗಿ ವರ್ಗಾವಣೆ ಮಾಡಲಾಗಿದೆ. ಹಲವು ನೋಟಿಸ್‌ಗಳ ಹೊರತಾಗಿಯೂ ಹಣವನ್ನು ಹಿಂದಿರುಗಿಸದ ದಾಸ್, ಹಣವನ್ನು ಖರ್ಚು ಮಾಡಿದ್ದೇನೆ ಎಂದು ಹೇಳುತ್ತಿದ್ದಾನೆ. ‘ಈ ವರ್ಷದ ಮಾರ್ಚ್‌ನಲ್ಲಿ ನಾನು ಹಣವನ್ನು ಸ್ವೀಕರಿಸಿದಾಗ ನನಗೆ










