ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.
ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಈ ವಿಷಯ ತಿಳಿಸಿದ್ದಾರೆ. ದ.ಕನ್ನಡ ಸೇರಿದಂತೆ ಕೊರೊನಾ ಪ್ರಕರಣ ಹೆಚ್ಚಾಗಿರುವ 8 […]