ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ
ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕನಿಗೆ ಕೊಟ್ಟು 5 ಪವನ್‍ನ ಚಿನ್ನಾಭರಣವನ್ನು ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ವಂಚನೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಅನುಮಾನ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ. ಬೆಳ್ಳಿ, ಬಂಗಾರದ ಆಭರಣಗಳು ಸೇರಿದಂತೆ ಮನೆಯ ಶೋಕೇಸ್, ಟಿವಿ ಹಾಗೂ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ […]








