Editor

ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್‌ನಲ್ಲಿ‌ ತಪ್ಪಾಗಿ ಗೀಚಿದ ‘ಬಂಡೆ’

ಬೆಂಗಳೂರು: ಸ್ವಾತಂತ್ರ್ಯದ ಮಹತ್ವದ ಬಗ್ಗೆ ಹೇಳಲು ಹೋಗಿ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಫೇಸ್​ಬುಕ್​ ಪೇಜ್​ನಲ್ಲಿ ಪೋಸ್ಟ್​ ಹಾಕುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. 1866 ರಲ್ಲಿ ಮಹಾತ್ಮ ಗಾಂಧಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ರು ಎಂದು ಬರೆದುಕೊಂಡಿದ್ದಾರೆ. 1915, 1920, 1927, 1934, 1936 ರಲ್ಲಿ ಗಾಂಧೀಜಿ ಬೆಂಗಳೂರಿಗೆ ಭೇಟಿ ನೀಡಿದ್ದರು ಎಂದು ತಪ್ಪು ಮಾಹಿತಿ ಕೊಡಲಾಗಿದೆ. ಗಾಂಧೀಜಿಯವರು ಹುಟ್ಟಿದ್ದೇ 1869ರ ಅಕ್ಟೋಬರ್​ 2ರಂದು. ಹೀಗಿರುವಾಗ, 1866 ರ ಹೋರಾಟದಲ್ಲಿ ಗಾಂಧಿ ಪಾಲ್ಗೊಳ್ಳಲು ಹೇಗೆ […]

ಮತ್ತೆ ಎಡವಟ್ಟು ಮಾಡಿಕೊಂಡ ಡಿಕೆಶಿ – ಪೇಸ್ ಬುಕ್‌ನಲ್ಲಿ‌ ತಪ್ಪಾಗಿ ಗೀಚಿದ ‘ಬಂಡೆ’ Read More »

ಕುಕ್ಕೆಯಲ್ಲಿ ಆ.30ರವರೆಗೆ ಎಲ್ಲಾ ಸೇವೆಗಳೂ ರದ್ದು| ದರ್ಶನಕ್ಕೆ ಮಾತ್ರ ಅವಕಾಶ

ಕೇರಳಕ್ಕೆ ಹೊಂದಿಕೊಂಡಿರುವ ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ದ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ದೇವಳದಲ್ಲಿ ಶ್ರೀ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ

ಕುಕ್ಕೆಯಲ್ಲಿ ಆ.30ರವರೆಗೆ ಎಲ್ಲಾ ಸೇವೆಗಳೂ ರದ್ದು| ದರ್ಶನಕ್ಕೆ ಮಾತ್ರ ಅವಕಾಶ Read More »

ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪ್ರಯತ್ನ – ಸಚಿವ ರಾಜೀವ್ ಚಂದ್ರಶೇಖರ್ ಆರೋಪ

ಮಂಗಳೂರು: ‘ದೇಶ ಮೊದಲು ಎನ್ನುವುದು ಬಿಜೆಪಿಯ ನಿಲುವು. ಕಾಂಗ್ರೆಸ್‌ನವರಿಗೆ ಇಂತಹ ಯಾವುದೇ ಬದ್ಧತೆ ಇಲ್ಲ. ಭಾರತವು ಪ್ರಬಲ ಆರ್ಥಿಕ ಶಕ್ತಿಯಾಗಿ ಬೆಳೆಯುವುದನ್ನು ತಡೆದು, ದೇಶದ ಹೆಸರನ್ನು ಕೆಡಿಸುವುದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಪ್ರಯತ್ನವಾಗಿದೆ’ ಎಂದು ಕೇಂದ್ರ ಕೌಶಲಾಭಿವೃದ್ಧಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. ಬಿಜೆಪಿ ಜನಾಶೀರ್ವಾದ ಯಾತ್ರೆ ಪ್ರಯುಕ್ತ ಬುಧವಾರ ಇಲ್ಲಿ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳ ಜತೆಗಿನ ಸಂವಾದದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಆಡಳಿತ ನಡೆಸಿದ 60

ದೇಶದ ಹೆಸರು ಕೆಡಿಸಲು ಕಾಂಗ್ರೆಸ್ ಪ್ರಯತ್ನ – ಸಚಿವ ರಾಜೀವ್ ಚಂದ್ರಶೇಖರ್ ಆರೋಪ Read More »

ಕೇಂದ್ರ ಸಚಿವರ ಸ್ವಾಗತಕ್ಕಾಗಿ ಬಂದೂಕಿನ ಮೊರೆತ – ಯಾದಗಿರಿಯಲ್ಲೊಂದು‌ ವಿಲಕ್ಷಣ ಬೆಳವಣಿಗೆ

ಯಾದಗಿರಿ: ಜನಾಶೀರ್ವಾದ ಕಾರ್ಯಕ್ರಮದ ಹಿನ್ನೆಲೆ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಖೂಬಾ ಆಗಮಿಸಿದ್ದಾರೆ. ಈ ವೇಳೆ, ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತವನ್ನು ಕೋರಲಾಗಿದೆ. ಜಿಲ್ಲೆಯ ಯರಗೋಳ ಗ್ರಾಮದಲ್ಲಿ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಜನ ಸ್ವಾಗತಿಸಿದ್ದಾರೆ. ಅಲ್ಲದೇ ಕೋವಿಡ್ ನಿಯಮವನ್ನೂ ಉಲ್ಲಂಘಿಸಿ ಜನ ಜಾತ್ರೆ ಸೇರಿದ್ದರು. ಕೇಂದ್ರ ಸಚಿವರು ಬಂದಾಗ, ಅಲ್ಲಿದ್ದ ಜನ ಹೂಗಳನ್ನ ಅರ್ಪಿಸಿ ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಸಚಿವರೊಂದಿಗೆ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿಕೊಂಡ ಮಾಜಿ ಸಚಿವ

ಕೇಂದ್ರ ಸಚಿವರ ಸ್ವಾಗತಕ್ಕಾಗಿ ಬಂದೂಕಿನ ಮೊರೆತ – ಯಾದಗಿರಿಯಲ್ಲೊಂದು‌ ವಿಲಕ್ಷಣ ಬೆಳವಣಿಗೆ Read More »

ರಥಯಾತ್ರೆಯಲ್ಲಿ ಸಾವರ್ಕರ್ ಫೋಟೋ ಹಾಕಲು ಅನುಮತಿ ನೀಡಿದ ಪಿಡಿಒರನ್ನು ಬಂಧಿಸಿ’- ಎಸ್ ಡಿಪಿಐ ಮುಖಂಡ ಶಾಫಿ ಬೆಳ್ಳಾರೆ

ಪುತ್ತೂರು: ಕಬಕ ಸ್ವಾತಂತ್ರ್ಯ ರಥ ತಡೆ ಪ್ರಕರಣದ ಬಳಿಕ ನಡೆಯತ್ತಿರುವ ಪ್ರತಿಭಟನಾ ಪರ್ವ ಇಂದೂ ಮುಂದುವರೆದಿದ್ದು, ನಿನ್ನೆ ಹಿಂದೂ ಸಂಘಟನೆಗಳು ತಮ್ಮ ಶಕ್ತಿ ಪ್ರದರ್ಶಿಸಿದರೆ ಇಂದು ಎಸ್ ಡಿಪಿಐ ಪಕ್ಷದಿಂದ ಪ್ರತಿಭಟನೆ ನಡೆದಿದ್ದು, ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಚಿತ್ರ ಹಾಕಲು ಆನುಮತಿ ನೀಡಿದ ಗ್ರಾಮಪಂಚಾಯತ್ ಪಿಡಿಒ ವಿರುದ್ಧ ಕೇಸು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್ ಡಿಪಿಐ ಕಾರ್ಯಕರ್ತರು ಸಾವರ್ಕರ್ ಒರ್ವ ಹೇಡಿ, ಬ್ರಿಟಿಷರಲ್ಲಿ ಕ್ಷಮೆ ಕೋರಿದ ವ್ಯಕ್ತಿ, ಅಲ್ಲದೆ ತನ್ನ

ರಥಯಾತ್ರೆಯಲ್ಲಿ ಸಾವರ್ಕರ್ ಫೋಟೋ ಹಾಕಲು ಅನುಮತಿ ನೀಡಿದ ಪಿಡಿಒರನ್ನು ಬಂಧಿಸಿ’- ಎಸ್ ಡಿಪಿಐ ಮುಖಂಡ ಶಾಫಿ ಬೆಳ್ಳಾರೆ Read More »

ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಉಮಾಶ್ರೀ – ಶುರುವಾಗ್ತಿದೆ ‘ಪುಟ್ಟಕ್ಕನ ಮಕ್ಕಳು’

ಕನ್ನಡ ಚಿತ್ರರಂಗ ಎಂದೂ ಮರೆಯಲಾಗದ ಹಲವು ಪಾತ್ರಗಳಲ್ಲಿ ನಟಿಸಿರುವ ಉಮಾಶ್ರಿ ಇದೀಗ ಮತ್ತೆ ಕಿರುತೆರೆಗೆ ಬಂದಿದ್ದಾರೆ. ಹಿರಿತೆರೆಯಲ್ಲಿ ಪುಟ್ಮಲ್ಲಿಯಾಗಿ ಈಗಾಗಲೇ ಮೋಡಿ ಮಾಡಿರುವ ಉಮಾಶ್ರೀ ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಧಾರಾವಾಹಿ ಪ್ರಸಾರ ಆರಂಭವಾಗಲಿದೆ.ಧಾರಾವಾಹಿಯ ಕೇಂದ್ರ ಪಾತ್ರ ಉಮಾಶ್ರೀ ಅವರದ್ದೇ ಆಗಿರುತ್ತದೆ. ಉಮಾಶ್ರೀಗೆ ಕಿರುತೆರೆ ಹೊಸದೇನೂ ಅಲ್ಲ ಈಗಾಗಲೇ ಹಲವು ಧಾರಾವಾಹಿಗಳಲ್ಲಿ ಉಮಾಶ್ರೀ ನಟಿಸಿದ್ದಾರೆ. ಆದರೆ ಬಹುದಿನಗಳಿಂದ ಕಿರುತುರೆಯಿಂದ ದೂರವೇ

ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಉಮಾಶ್ರೀ – ಶುರುವಾಗ್ತಿದೆ ‘ಪುಟ್ಟಕ್ಕನ ಮಕ್ಕಳು’ Read More »

ಭಾರೀ ಕುಸಿತ ಕಂಡ ಮೋದಿ ಜನಪ್ರಿಯತೆ – ಇಂಡಿಯಾ ಟುಡೇ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಆಗಸ್ಟ್ 16 ಬಿಡುಗಡೆಯಾದ ಇಂಡಿಯಾ ಟುಡೇ “ಮೂಡ್ ಆಫ್ ದಿ ನೇಷನ್” ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ರೇಟಿಂಗ್ ಒಂದು ವರ್ಷದಲ್ಲಿ 66% ರಿಂದ 24% ಕ್ಕೆ ಇಳಿದಿದೆ. ದೇಶದಲ್ಲಿ ಕೋವಿಡ್ ಬಿಕ್ಕಟ್ಟನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇರುವುದು ಪ್ರಧಾನಿ ಮೋದಿಯವರ ಜನಪ್ರಿಯತೆ ಕುಸಿತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗಿದೆ. “ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದಕ್ಕಾಗಿ ಮೋದಿಯವರನ್ನು ಜನವರಿ 2021 ರಲ್ಲಿ ಪ್ರಶಂಸಿಸಲಾಗಿತ್ತು. ಇದಕ್ಕಾಗಿ ಶೇಕಡಾ 73% ರಷ್ಟು ಜನಪ್ರಿಯತೆ ಗಳಿಸಿದ್ದರು.

ಭಾರೀ ಕುಸಿತ ಕಂಡ ಮೋದಿ ಜನಪ್ರಿಯತೆ – ಇಂಡಿಯಾ ಟುಡೇ ಸಮೀಕ್ಷೆಯಲ್ಲಿ ಬಹಿರಂಗ Read More »

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠವು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಮಹಿಳೆಯರಿಗೂ ಅನುಮತಿ ನೀಡಿದೆ. ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ಮಹಿಳೆಯರಿಗೆ ಅನುಮತಿ ನೀಡಿದೆ. ಪ್ರವೇಶಗಳು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತವೆ

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ Read More »

ಸೌದಿ ಬಂಧನದಿಂದ 2 ವರ್ಷದ ಬಳಿಕ ತಾಯ್ನಾಡಿಗೆ ಮರಳಿದ ಹರೀಶ್ ಬಂಗೇರ

ಉಡುಪಿ: ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಪಟ್ಟು ಜೈಲಿನಿಂದ ಬಿಡುಗಡೆಗೊಂಡ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಆ. 18ರಂದು ತಾಯ್ನಾಡಿಗೆ ಬಂದು ತಲುಪಿದ್ದಾರೆ. ಸೌದಿಯಿಂದ ಆ.17ರಂದು ಹೊರಟು ಆ. 18ರ ಬುಧವಾರ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಪತ್ನಿ ಪುತ್ರಿ ಹಾಗೂ ಅವರ ಕುಟುಂಬಸ್ಥರು ಅವರನ್ನು ಬರಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಕಿಡಿಗೇಡಿಗಳು ಹರೀಶ್‌ ಬಂಗೇರ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ

ಸೌದಿ ಬಂಧನದಿಂದ 2 ವರ್ಷದ ಬಳಿಕ ತಾಯ್ನಾಡಿಗೆ ಮರಳಿದ ಹರೀಶ್ ಬಂಗೇರ Read More »

ಮೂಡುಬಿದಿರೆ: ತಲೆಗೆ ಹೊಡೆದು ಪತ್ನಿಯ ಕೊಲೆಗೈದ ಪತಿ- ಆರೋಪಿ ಬಂಧನ

ಮೂಡುಬಿದಿರೆ: ಇಲ್ಲಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿಯು ಪತ್ನಿಯನ್ನು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ ಮಂಗಳವಾರ ಸಾಯಂಕಾಲ ಪತಿ ದಿನ್ ರಾಜ್ ಹಾಗೂ ಪತ್ನಿ ಸುನೀತಾ(30) ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ‘ಬಲಾಯಿ’ ದಿಂದ ಹೆಂಡತಿಯ ತಲೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಬಳಿಕ ಸುನೀತಾ ತಲೆಯಿಂದ ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ ಸಂಬಂಧಿಗೆ ಕರೆ ಮಾಡಿದ್ದಾನೆ. ಸುನೀತಾ ಸಹೋದರ ಆಸ್ಪತ್ರೆಗೆ

ಮೂಡುಬಿದಿರೆ: ತಲೆಗೆ ಹೊಡೆದು ಪತ್ನಿಯ ಕೊಲೆಗೈದ ಪತಿ- ಆರೋಪಿ ಬಂಧನ Read More »