ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಎಂಎಲ್’ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಒತ್ತಾಯ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೆ ಇರುವುದರಿಂದ ಹೊರ ಭಾಗದಿಂದ ಜಿಲ್ಲೆಗೆ ಆಗಮಿಸುವ ಕಾರ್ಮಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಒತ್ತಾಯಿಸಿದ್ದಾರೆ. ಇಷ್ಟು ದಿನಗಳೇ ಕಳೆದರೂ ಕೊಡಗು ಕೋವಿಡ್ ಮುಕ್ತವಾಗುತ್ತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಪಾಸಿಟಿವಿಟಿ ಪ್ರಮಾಣ ಶೇ.೫ ಕ್ಕಿಂತ ಕೆಳಗಿಳಿಯುತ್ತಿಲ್ಲ. ಪರಿಸ್ಥಿತಿ ಹೀಗಿದ್ದರೂ ಹೊರ ಜಿಲ್ಲೆಗಳಿಂದ ಗುಂಪು ಗುಂಪಾಗಿ ಕಾರ್ಮಿಕರನ್ನು ಕರೆ ತರಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇರಲು ಇದೂ ಕೂಡ ಒಂದು ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ. […]










