Editor

ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಯುವತಿ

ಸಮಗ್ರ ನ್ಯೂಸ್: ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ವಿವಾಹ ನಿಶ್ಚಿತಾರ್ಥ ಆಗಿದ್ದ ಕೀರ್ತನಾ ಶೆಟ್ಟಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿದ್ದರು. ಆದರೆ, ನೇಣು ಬಿಗಿದುಕೊಂಡು ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.17ರಂದು ನಡೆದಿದೆ. ಇನ್ನು ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ […]

ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಯುವತಿ Read More »

ಮಲೆಯಾಳಂ ಚಿತ್ರರಂಗದ ಖ್ಯಾತನಟ ಮೇಘನಾಥನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖಳನಾಯಕನ ಪಾತ್ರಗಳಿಗೆ ಹೆಸರುವಾಸಿಯಾದ ಮಲಯಾಳಂ ಚಲನಚಿತ್ರ ಮತ್ತು ಸೀರಿಯಲ್ ನಟ ಮೇಘನಾಥನ್ ಗುರುವಾರ(ನ.21) ಮುಂಜಾನೆ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಮೇಘನಾಥನ್ ಅವರಿಗೆ 60 ವರ್ಷ ವಯಸ್ಸಾಗಿತ್ತು.ಉಸಿರಾಟ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 2 ಗಂಟೆಗೆ ನಿಧನರಾಗಿದ್ದಾರೆ. ಮೇಘನಾಥನ್ ಖ್ಯಾತ ನಟ ಬಾಲನ್ ಕೆ ನಾಯರ್ ಅವರ ಪುತ್ರರಾಗಿದ್ದಾರೆ. ಅವರು ಚಮಯಂ, ಚೆಂಕೋಲ್ ಮತ್ತು ಈ ಪುಜಯುಮ್ ಕಡನ್ನು ಮುಂತಾದ ಗಮನಾರ್ಹ ಕೃತಿಗಳನ್ನು ಒಳಗೊಂಡಂತೆ 50 ಕ್ಕೂ ಹೆಚ್ಚು ಚಿತ್ರಗಳಲ್ಲಿ

ಮಲೆಯಾಳಂ ಚಿತ್ರರಂಗದ ಖ್ಯಾತನಟ ಮೇಘನಾಥನ್ ಇನ್ನಿಲ್ಲ Read More »

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರೂ‌ ಚನ್ನಬಸಪ್ಪ ಆಯ್ಕೆ

ಸಮಗ್ರ ನ್ಯೂಸ್: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.‌20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ, ಜಾನಪದ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿರುವ ಗೊ.ರು.ಚನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯವರು. ಇವರು ಹಿರಿಯ ಜಾನಪದ ತಜ್ಞರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಕ್ರಿಯಾಶೀಲ ಅಧ್ಯಕ್ಷರಾಗಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರೂ‌ ಚನ್ನಬಸಪ್ಪ ಆಯ್ಕೆ Read More »

ಗೂಗಲ್ ಮ್ಯಾಪ್ ನಂಬಿ ಕೆಸರಲ್ಲಿ ಸಿಲುಕಿಕೊಂಡ ಅಯ್ಯಪ್ಪ‌ ಭಕ್ತ| ಮಂಗಳೂರು ಮೂಲದ‌ ಪರಶುರಾಮ್ ತಮಿಳುನಾಡು ಪೊಲೀಸರ ಸಹಾಯದಿಂದ ಬಚಾವ್

ಸಮಗ್ರ ನ್ಯೂಸ್: ಗೂಗಲ್‌ ಮ್ಯಾಪ್‌ ನೋಡಿ ಪ್ರಯಾಣ ಬೆಳೆಸುವಾಗ ಅವಘಡಗಳು ಸಂಭವಿಸಿದ ಘಟನೆಗಳು ಇತ್ತೀಚೆಗೆ ನಡೆಯುತ್ತಿವೆ. ಅಯ್ಯಪ್ಪ ಭಕ್ತರೊಬ್ಬರು ಗೂಗಲ್​ ಮ್ಯಾಪ್​ ಸಹಾಯದಿಂದ ಮಂಗಳೂರು ತಲುಪಲು ಮುಂದಾಗಿ ಬರೋಬ್ಬರಿ 7 ಗಂಟೆಗಳ ಕಾಲ ಕೆಸರಿನಲ್ಲಿ ಸಿಲುಕಿಕೊಂಡ ಪ್ರಸಂಗವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಬಂದ ಮಂಗಳೂರು ಮೂಲದ ಪರಶುರಾಮರನ್ನು ಭಾರೀ ಅಪಾಯದಿಂದ ಪಾರು ಮಾಡಿದ್ದಾರೆ. ವಿಕಲ ಚೇತನರಾಗಿರುವ ಪರಶುರಾಮ ಅವರು ಅಯ್ಯಪ್ಪನ ದರ್ಶನ ಪಡೆಯಲು ಶಬರಿ ಮಲೆಗೆ ತೆರಳಿದ್ದರು. ವಿಕಲಚೇತನರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ

ಗೂಗಲ್ ಮ್ಯಾಪ್ ನಂಬಿ ಕೆಸರಲ್ಲಿ ಸಿಲುಕಿಕೊಂಡ ಅಯ್ಯಪ್ಪ‌ ಭಕ್ತ| ಮಂಗಳೂರು ಮೂಲದ‌ ಪರಶುರಾಮ್ ತಮಿಳುನಾಡು ಪೊಲೀಸರ ಸಹಾಯದಿಂದ ಬಚಾವ್ Read More »

ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ‌ಸಂಘದ ಜಿಲ್ಲಾ ಸಮ್ಮೇಳನದ ಲಾಂಛನ ‌ಬಿಡುಗಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ (ನ.20) ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ

ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ‌ಸಂಘದ ಜಿಲ್ಲಾ ಸಮ್ಮೇಳನದ ಲಾಂಛನ ‌ಬಿಡುಗಡೆ Read More »

ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ

ಸಮಗ್ರ‌ ನ್ಯೂಸ್: ಹಿರಿಯ ಪತ್ರಕರ್ತ, ಚಿಂತಕ , ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ನ.20ರ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜುಲೈ 17, 1932 ರಂದು ಉಡುಪಿ ಜಿಲ್ಲೆಯ ಓಂತಿಬೆಟ್ಟುವಿನಲ್ಲಿ ಜನಿಸಿದ ವಿಟಿಆರ್ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ದೇಶಾದ್ಯಂತ

ಹಿರಿಯ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ಇನ್ನಿಲ್ಲ Read More »

ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರಾದ ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ಬುಧವಾರ ನೆರವೇರಿತು. ಹೆಬ್ರಿ ತಾಲ್ಲೂಕಿನ ಕಬ್ಬಿನಾಲೆಯ ಪೀತಬೈಲ್‌ನಲ್ಲಿ ಸೋಮವಾರ ರಾತ್ರಿ ನಕ್ಸಲರು ಮತ್ತು ನಕ್ಸಲ್‌ ನಿಗ್ರಹ ಪಡೆಯ (ಎಎನ್‌ಎಫ್‌) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಅಲಿಯಾಸ್‌ ಶ್ರೀಕಾಂತ್‌ (46) ಹತ್ಯೆಯಾಗಿದ್ದ. ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಹಲವು ವರ್ಷಗಳಿಂದ ನಕ್ಸಲ್‌ ಚಟುವಟಿಕೆಗಳಲ್ಲಿ

ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ Read More »

ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್:ಭಿಕ್ಷಾಟನೆಗೆ ಬಂದ ಫಕೀರನೊಬ್ಬ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.ಈ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಭಿಕ್ಷಾಟನೆ ಮಾಡಲು ಬಂದ ಫಕೀರ ಮನೆಯಲ್ಲಿ ಯಾರೂ ಇಲ್ಲದಾಗ ಅಜ್ಜಿ ಒಬ್ಬಂಟಿಯಾಗಿದ್ದ ಮನೆಯೊಳಗೆ ನುಗ್ಗಿ ಅಜ್ಜಿಯ ಮೇಲೆ ರೇಪ್ ಮಾಡಿ ಬಂದಿದ್ದಾನೆ. ಅತ್ಯಾಚಾರ ಮಾಡಿದವನನ್ನು ಇದೇ ಗ್ರಾಮದ ಪಕ್ಕದ ಐನೊಳ್ಳಿ ಗ್ರಾಮದ ಫಕೀರ ತಯ್ಯಬ್ ಎಂದು ಗುರುತಿಸಲಾಗಿದೆ. ಫಕೀರ ವೇಷಧಾರಿ ತಯ್ಯಬ್ ಬಿಕ್ಷಾಟನೆ ಮಾಡುತ್ತಾ ಊರೂರು

ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ Read More »

ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ..! ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅದರ ಸ್ಥಳದಲ್ಲಿ ಮಸೀದಿಯನ್ನು ಪುನರ್ನಿಮಿ್ರಸುವುದಾಗಿ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ ನಂತರ ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಅನ್ನು ಒಳಗೊಂಡ ಇತ್ತೀಚಿನ ವೈರಲ್ ವೀಡಿಯೊ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಚೋದನಕಾರಿ ಹೇಳಿಕೆಗಳು ಭಾರತದಲ್ಲಿ ಎಚ್ಚರಿಕೆಗಳನ್ನು ಹುಟ್ಟುಹಾಕಿವೆ, “ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಕಾಯಿರಿ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ದರಾಗಿರಿ, ಏಕೆಂದರೆ ಭಾರತದ ಮೇಲೆ

ರಾಮ ಮಂದಿರವನ್ನು ನೆಲಸಮ ಮಾಡಿ ಮತ್ತೆ ಮಸೀದಿ ಕಟ್ಟುತ್ತೇವೆ..! ಭಾರತದ ಮೇಲಿನ ದಾಳಿಗೆ ‘ಬಾಂಗ್ಲಾ’ ಇಸ್ಲಾಮಿಕ್ ಉಗ್ರರ ಕರೆ Read More »

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರದ ಎಲ್ಲಾ 288 ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯು ನ.20ರಂದು ಬೆಳಗ್ಗೆ 7 ಗಂಟೆಗೆ ಶುರುವಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ಜೊತೆಗೆ ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದರೊಂದಿಗೆ ಮಹಾರಾಷ್ಟ್ರದ

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ Read More »