Editor

ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು, 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ 8 ಮಕ್ಕಳು ಹಾಗೂ ಚಾಲಕ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ನಡೆದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಮಂಗಳೂರು ಮತ್ತು ಬಂಟ್ವಾಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತೀವ್ರ […]

ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಕಾರು, 8 ವಿದ್ಯಾರ್ಥಿಗಳಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ Read More »

ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾವು

ಸಮಗ್ರ ನ್ಯೂಸ್:ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಕಳೆದ ಶುಕ್ರವಾರ ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ನ.13 ರಂದು ಮೃತಪಟ್ಟಿದ್ದಾರೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು.ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ (ಅನಾಫಿಲ್ಯಾಕ್ಟಿಕ್ ರಿಯಾಕ್ಷನ್)

ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾವು Read More »

ಹವಾಮಾನ ಸಮಾಚಾರ| ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ಹವಾಮಾನ ಸಮಾಚಾರ| ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಮುನ್ಸೂಚನೆ Read More »

ಕಡಬ: ಜೋಪಡಿ ಮೇಲೆ ಘರ್ಜಿಸಿದ ಬುಲ್ಡೋಜರ್| ಬೀದಿಗೆ ಬಿದ್ದ ವೃದ್ಧ ದಂಪತಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಕಡಬದಲ್ಲಿ ಸರ್ಕಾರಿ ಜಾಗದ ಮೇಲೆ ಕಟ್ಟಿದ್ದ ಜೋಪಡಿ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆದಿದ್ದು ಇದರಿಂದ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ನೆಲಸಮ ಮಾಡಿದ ಅಮಾನವೀಯ ಘಟನೆ ನಡೆದಿದೆ. ಕಡಬದ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ

ಕಡಬ: ಜೋಪಡಿ ಮೇಲೆ ಘರ್ಜಿಸಿದ ಬುಲ್ಡೋಜರ್| ಬೀದಿಗೆ ಬಿದ್ದ ವೃದ್ಧ ದಂಪತಿ Read More »

ಸಚಿವ ಜಮೀರ್ ಗೆ ಧರ್ಮ, ಜಾತಿನಿಂದನೆ, ಅವಹೇಳನಕಾರಿ ಹೇಳಿಕೆ| ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆ ಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಚಿವ ಜಮೀರ್ ಆಪ್ತಸಹಾಯಕ‌ ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್ ಐ ಆರ್ ದಾಖಲಾಗಿದೆ. ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲ

ಸಚಿವ ಜಮೀರ್ ಗೆ ಧರ್ಮ, ಜಾತಿನಿಂದನೆ, ಅವಹೇಳನಕಾರಿ ಹೇಳಿಕೆ| ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ Read More »

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆ

ಸಮಗ್ರ ನ್ಯೂಸ್‌: ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಲಾಕಿಂಗ್ ವ್ಯವಸ್ಥೆಯನ್ನು ಮೆಜೆಸ್ಟಿಕ್ ಸೇರಿದಂತೆ ಹಲವಾರು ಇತರ ನಿಲ್ದಾಣಗಳಲ್ಲಿ ಪರಿಚಯಿಸಲಾಗಿದೆ. ಇವು ಪ್ರಯಾಣಿಕರು ತಮ್ಮ ಲಗೇಜ್ ಮತ್ತು ವಸ್ತುಗಳನ್ನು ತಾತ್ಕಾಲಿಕವಾಗಿ ಸಂಗ್ರಹಿಸಬಹುದಾದ ಲಾಕರ್‌ಳಾಗಿವೆ. ಪ್ರಯಾಣಿಕರ ಬ್ಯಾಗ್‌ಗಳನ್ನು 6 ಗಂಟೆಗಳ ಕಾಲ ಕಾಯ್ದಿರಿಸಲು 70 ರೂ. ದರವನ್ನು ನಿಗದಿ ಮಾಡಿದರೆ ದೊಡ್ಡ ಗಾತ್ರದ ಬ್ಯಾಗ್‌ಗಳನ್ನು 6 ಗಂಟೆ ಕಾಯ್ದಿರಿಸಲು 100 ರೂ. ದರವನ್ನು ನಿಗದಿ ಮಾಡಲಾಗಿದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆ Read More »

ಹಸೀನಾ ಬಂಧನಕ್ಕೆ ರೆಡ್ ನೊಟೀಸ್/ ಇಂಟರ್‌ಪೋಲ್‌ಗೆ ಸೂಚಿಸಿದ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ

ಸಮಗ್ರ ನ್ಯೂಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಬಂಧನಕ್ಕೆ ರೆಡ್ ನೊಟೀಸ್ ಜಾರಿ ಮಾಡುವಂತೆ ಅಂತಾರಾಷ್ಟ್ರೀಯ ಪೊಲೀಸ್ ಸಂಸ್ಥೆ ಇಂಟರ್‌ಪೋಲ್‌ಗೆ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ ಸೂಚಿಸಿದೆ. ಶೇಖ್ ಹಸೀನಾ ತನ್ನ ಆಪ್ತ ಸಹಾಯಕರು ಮತ್ತು ಮಾಜಿ ಸಚಿವರೊಂದಿಗೆ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡುವ ಮೂಲಕ ಅವರ 15 ವರ್ಷಗಳ ಆಡಳಿತ ಅಂತ್ಯಗೊಂಡಿತ್ತು. ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರು ಆಗಸ್ಟ್ 3 ರಂದು ದಕ್ಷಿಣ ಏಷ್ಯಾ ರಾಷ್ಟ್ರದ ಹಂಗಾಮಿ ನಾಯಕರಾಗಿ

ಹಸೀನಾ ಬಂಧನಕ್ಕೆ ರೆಡ್ ನೊಟೀಸ್/ ಇಂಟರ್‌ಪೋಲ್‌ಗೆ ಸೂಚಿಸಿದ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ Read More »

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು Read More »

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್

ಸಮಗ್ರ ನ್ಯೂಸ್:14 ವರ್ಷಗಳ ಹಿಂದೆ ತಾನು ವಿದ್ಯಾರ್ಥಿಯಾಗಿದ್ದಾಗ ತನ್ನ ಕಷ್ಟಕ್ಕೆ ನೆರವಾಗಿದ್ದ ತರಕಾರಿ ವ್ಯಾಪಾರಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಡಿಎಸ್‌ಪಿ ಸಂತೋಷ್ ಪಟೇಲ್ ಯಶಸ್ವಿಯಾಗಿದ್ದಾರೆ. ಶನಿವಾರ ಭೋಪಾಲದ ತರಕಾರಿ ವ್ಯಾಪಾರಿ ಸಲ್ಮಾನ್ ಖಾನ್ ಅಂಗಡಿಯೆದುರು ಪೋಲೀಸ್ ವಾಹನವೊಂದು ಬಂದು ನಿಂತಿತ್ತು. ಅದರಿಂದ ಇಳಿದ ಡಿಎಸ್‌ಪಿ ಪಟೇಲ್ ತನ್ನನ್ನು ಹೆಸರಿಡಿದು ಕರೆದಾಗ ಖಾನ್ ಆತಂಕಗೊಂಡಿದ್ದರು.ಖಾನ್ ಪಟೇಲ್‌ಗೆ ಸೆಲ್ಯೂಟ್ ಹೊಡೆದಾಗ ಅವರ ಮುಖದಲ್ಲಿ ನಗು ಅರಳಿತ್ತು. ‘ನನ್ನ ನೆನಪಿದೆಯೇ?’ ಎಂದು ಪಟೇಲ್ ಪ್ರಶ್ನಿಸಿದಾಗ, ಚೆನ್ನಾಗಿ ನೆನಪಿದೆ, ನೀವು ತರಕಾರಿ ಒಯ್ಯಲು

14 ವರ್ಷಗಳ ಹಿಂದೆ ಕಷ್ಟದಲ್ಲಿದ್ದಾಗ ನೆರವಾಗಿದ್ದ ತರಕಾರಿ ವ್ಯಾಪಾರಿ ಸಲ್ಮಾನ್ ರನ್ನು ಪತ್ತೆ ಹಚ್ಚಿದ ಡಿಎಸ್‌ಪಿ ಸಂತೋಷ್‌ ಪಾಟೀಲ್ Read More »

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ

ಸಮಗ್ರ ನ್ಯೂಸ್:ದಕ್ಷಿಣ ಕೊರಿಯಾದ ಜನಪ್ರಿಯ ನಟ ಸಾಂಗ್ ಜೇ-ರಿಮ್ ನ.12 ರಂದು ನಿಧನರಾದರು. ಅವರಿಗೆ 39 ವರ್ಷ ವಯಸ್ಸಾಗಿತ್ತು. ಸಿಯೋಲ್‌ನಲ್ಲಿರುವ ಇವರ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ‘ಎರಡು ಪುಟಗಳ ಪತ್ರ’ ಪತ್ತೆಯಾಗಿದೆ ಎನ್ನಲಾಗಿದೆ., ನಟನ ಅಂತ್ಯಕ್ರಿಯೆ ನವೆಂಬರ್ 14 ರಂದು ನಡೆಯಲಿದೆ ಎಂದು ವರದಿಯಾಗಿದೆ. ಯೌಯಿಡೋ ಸೇಂಟ್ ಮೇರಿಸ್ ಆಸ್ಪತ್ರೆಯ ಪ್ಯೂನರಲ್ ಹಾಲ್‌ನಲ್ಲಿ ಸ್ಮಾರಕ ಸ್ಥಳವನ್ನು ಏರ್ಪಡಿಸಲಾಗಿದೆ ಎಂದು ಎಕ್ಸ್‌ಪೋರ್ಟ್ಸ್ನ್ಯೂಸ್ ವರದಿ ಮಾಡಿದೆ.ಸಾಂಗ್ ಜೆ

ದಕ್ಷಿಣ ಕೊರಿಯಾದ ಜನಪ್ರಿಯ ಯುವ ನಟ ಸಾಂಗ್ ಜೇ-ರಿಮ್ ನಿಧನ, ಕೊರಿಯನ್ ಸಿನಿ ಪ್ರೇಮಿಗಳಿಗೆ ಆಘಾತ Read More »