Editor

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. […]

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ Read More »

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಕಾಡಿನಲ್ಲಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯ ತಲೆಬುರುಡೆ, ಎಲೆಬುಗಳು ಮಾತ್ರ ಇದ್ದು, ನೇಣಿನ ಕುಣಿಕೆಯಲ್ಲಿ ಶವ ನೇತಾಡುತ್ತಿತ್ತು.ಮೃತ ಮಹಿಳೆಯನ್ನು ನಳಿನಿ ಎಂದು ಗುರುತಿಸಲಾಗಿದೆ. ಊರ್ವ ನಿವಾಸಿಯಾಗಿದ್ದ ನಳಿನಿ ಸಂಜೀವ್ ಎಂಬುವವರನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದರು. ಆಗಾಗ ತಾಯಿ ಮನೆಗೆ ಹೋಗಿ ಬರುತ್ತಿದ್ದರು. ಇದ್ದಕ್ಕಿದ್ದಂತೆ ನಳಿನಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದರು. ಅ.8ರಂದು ಸಂಪ್ಯ

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ.ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್‌.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ Read More »

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.!

ಸಮಗ್ರ ನ್ಯೂಸ್: ಉತ್ತರಾಖಂಡದ ಅರಾ ಜಿಲ್ಲೆಯ ರಾಮ್ನಗ‌ರ್ ಬಳಿ ಸೋಮವಾರ ಬೆಳಿಗ್ಗೆ ಬಸ್‌ ಕಮರಿಗೆ ಬಿದ್ದ ಪರಿಣಾಮ ಮಕ್ಕಳು ಸೇರಿ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕ‌ರ್ ಸಿಂಗ್ ಧಾಮಿ ಹೇಳಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.! Read More »

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತಿಸಘಡದ ಮೂಲದ ಪ್ರವಾಸಿಗ ಜಲಪಾತದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಅಮೀತ್ ಕುಮಾರ್(30)ಮೃತ ದುರ್ದೈವಿ. ಈತ ಮೂಲತಃ ಛತ್ತಿಸಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಜಲಪಾತದ ಸಮೀಪ ಈಜಲು ಹೋಗಿ ಸಾವನ್ನಪ್ಪಿದ್ದಾನೆ.‌ ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು Read More »

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ‘ಡಾನಾ’ ಚಂಡಮಾರುತ ಅಬ್ಬರಿಸಿ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಚಂಡಮಾರುತ ಪರಿಚಲನೆ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿದೆ. ಇದು ಏನೇನು ಅವಾಂತರ ಸೃಷ್ಟಿ ಮಾಡಲಿದೆಯೋ ಎಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ.

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ Read More »

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ, ಜ್ಯೋತಿಷಿ ಮತ್ತು ಸಂಘಟಕ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ, ಸಂಘಟನೆ, ಕಿರುಚಿತ್ರ ಮತ್ತು ಸಮಾಜಸೇವೆಗಳ ಮೂಲಕ ಜನಮಾನಸ ಗೆದ್ದಿದ್ದಾರೆ. ರಾಷ್ಟ್ರಪ್ರಶಸ್ತಿಗಳ ಜೊತೆ 25ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿ

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ Read More »

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದ ಘಟನೆ ರವಿವಾರ (ನ.03) ನಡೆದಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಯ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ರವಿವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »