Editor

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

ಸಮಗ್ರ ನ್ಯೂಸ್ : ಸುರತ್ಕಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22 ರಂದು ರಾತ್ರಿ ನಡೆದಿದೆ.ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾ‌ರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21). ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ […]

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು Read More »

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಣ್ಣೆ, ಬೇಳೆ, ಕಾಳು ಒಳಗೊಂಡಂತಹ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..! Read More »

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ Read More »

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರಿಗೊಂದು ಸಿಹಿ ಸುದ್ದಿಯೊಂದು ನೀಡಿದೆ. ಹೌದು.. ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ Read More »

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಿನ್ನೆ ದುರಂತ ಸಂಭವಿಸಿದ್ದು. ಇದರಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಇದರಿಂದ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು Read More »

ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವ‌ರ್ ನಡೆಗೆ ಮಿಶ್ರ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ರಾಜಕೀಯ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಡಿಯೂರಪ್ಪ ಮಾತನಾಡಿ, ಯೋಗೇಶ್ವ‌ರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದನ್ನು ನೋಡಿದ್ದೇನೆ. ತೀರ್ಮಾನ ಅವರಿಗೆ ಬಿಟ್ಟಿದ್ದು. ಇಲ್ಲೇ ಇರಿ ಸೀಟು ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ ಕಾಂಗ್ರೆಸ್ ಸೇರಿದ್ದಾರೆ. ಯೋಗೇಶ್ವರ್ಗೆ ಒಳ್ಳೆದಾಗಲಿ ಎಂದು ಹಾರೈಸಿದ್ದಾರೆ. ಇತ್ತ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿ, ಯೋಗೇಶ್ವರ್ಗೆ ನಾವು ಎಲ್ಲಾ ರೀತಿಯ

ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವ‌ರ್ ನಡೆಗೆ ಮಿಶ್ರ ಪ್ರತಿಕ್ರಿಯೆ Read More »

ಮುಸ್ಲಿಮರು 4 ಮದುವೆ ಮಾಡಿಕೊಳ್ಳಬಹುದು: ಹೈಕೋರ್ಟ್‌ ಆದೇಶ

ಸಮಗ್ರ ನ್ಯೂಸ್: ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.ಮುಸ್ಲಿಂ ವೈಯಕ್ತಿಕ ಕಾನೂನುಗಳು ಮದುವೆಗೆ ಅವಕಾಶ ಮಾಡಿಕೊಡುತ್ತವೆ ಎಂದು ಮೂರನೇ ವಿವಾಹ ನೋಂದಣಿ ಮಾಡಿಸಲು ಬಯಸಿದ್ದ ಪುರುಷನೊಬ್ಬನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಪಿ. ಕೊಲಾಬಾವಾಲಾ ಮತ್ತು ಸೋಮಶೇಖ‌ರ್ ಸುಂದರೇಶನ್ ಅವರಿದ್ದ ವಿಭಾಗೀಯ ಪೀಠ ಅ 15 ರಂದು ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾಗಿ ವಿವಾಹ ನೋಂದಣಿ ಮಾಡಿಸಿಕೊಳ್ಳಲು ವೈಯಕ್ತಿಕ ಕಾನೂನುಗಳು ಅವಕಾಶ ಮಾಡಿಕೊಡುತ್ತವೆ

ಮುಸ್ಲಿಮರು 4 ಮದುವೆ ಮಾಡಿಕೊಳ್ಳಬಹುದು: ಹೈಕೋರ್ಟ್‌ ಆದೇಶ Read More »

ಹಾಸನಾಂಬ ದೇಗುಲದ ಬಾಗಿಲು ನಾಳೆ ಓಪನ್‌/ ಒಂಬತ್ತು ದಿನಗಳ ಕಾಲ ದರ್ಶನಕ್ಕೆ ಅವಕಾಶ

ಸಮಗ್ರ ನ್ಯೂಸ್‌: ಹಾಸನಾಂಬ ದೇಗುಲದ ಬಾಗಿಲನ್ನು ಬಾಗಿಲು ಮದ್ಯಾಹ್ನ 12 ಗಂಟೆಗೆ ಗುರುವಾರರಂದು ತೆರೆಯಲಾಗುತ್ತಿದ್ದು, ನವೆಂಬರ್ 3ರವರೆಗು ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್‌ಗಳು,

ಹಾಸನಾಂಬ ದೇಗುಲದ ಬಾಗಿಲು ನಾಳೆ ಓಪನ್‌/ ಒಂಬತ್ತು ದಿನಗಳ ಕಾಲ ದರ್ಶನಕ್ಕೆ ಅವಕಾಶ Read More »

ಹೊಸ ಲೋಗೋ ಹೊಸ ಪ್ಲಾನ್‌ಗಳು/ ಖಾಸಗಿ ಸಂಸ್ಥೆಗಳಿಗೆ ನಡುಕ ಹುಟ್ಟಿಸುತ್ತಿರುವ ಬಿಎಸ್‌ಎನ್‌ಎಲ್‌

ಸಮಗ್ರ ನ್ಯೂಸ್‌: ಬಳಕೆದಾರ ಸ್ನೇಹಿ ಮೊಬೈಲ್ ರಿಚಾರ್ಜ್ ಪ್ಲಾನ್‌ಗಳನ್ನು ಘೋಷಿಸುತ್ತಿರುವ ಬಿಎಸ್‌ಎನ್‌ಎಲ್, ಇದೀಗ ಲೋಗೋ ಬದಲಿಸಿಕೊಳ್ಳುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಪ್ರಯತ್ನಿಸಿದೆ. ಖಾಸಗಿ ಸಂಸ್ಥೆಗಳಿಗೆ ಟಕ್ಕರ್ ಕೊಡುತ್ತಿರುವ ಭಾರತ್ ಸಂಚಾ‌ರ್ ನಿಗಮ್ ಲಿಮಿಟೆಡ್’ ತನ್ನ ಲೋಗೋ ಅನ್ನು ಬದಲಾಯಿಸಿಕೊಂಡು, ಹೊಸ ಚೈತನ್ಯದೊಂದಿಗೆ ಗ್ರಾಹಕರ ಮುಂದೆ ಬಂದಿದೆ. ಈ ಹೊಸ ಲೋಗೋದಲ್ಲಿ ದೇಶ ಐಕ್ಯತೆ ಸಾರುವ ಭಾರತದ ತ್ರಿವರ್ಣ ಧ್ವಜದ ಮೂರು ಬಣ್ಣಗಳಿವೆ. ಬಿಎಸ್‌ಎನ್‌ಎಲ್ ಕನೆಕ್ಕಿಂಗ್ ಪೀಪಲ್ ಹಾಗೇ ಉಳಿಸಿಕೊಳ್ಳಲಾಗಿದೆ. ಅದರೊಂದಿಗೆ ‘ಸುರಕ್ಷಿತ, ವಿಶ್ವಾಸಾರ್ಹ, ಕೈಗೆಟುಕುವ ಘೋಷವಾಕ್ಯದೊಂದಿಗೆ

ಹೊಸ ಲೋಗೋ ಹೊಸ ಪ್ಲಾನ್‌ಗಳು/ ಖಾಸಗಿ ಸಂಸ್ಥೆಗಳಿಗೆ ನಡುಕ ಹುಟ್ಟಿಸುತ್ತಿರುವ ಬಿಎಸ್‌ಎನ್‌ಎಲ್‌ Read More »

ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ

ಸಮಗ್ರ ನ್ಯೂಸ್: ಮದುವೆ ವಯಸ್ಸಿಗೆ ಬಂದ ಯುವತಿಯರಿಬ್ಬರು ಸನ್ಯಾಸತ್ವ ಸ್ವೀಕಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಮಾನಸಿ ಕುಮಾರಿ, ಭಕ್ತಿ ಕುಮಾರಿ ಈ ಇಬ್ಬರು ಜೈನ ದೀಕ್ಷೆ ಪಡೆಯಲು ನಿರ್ಧಾರ ಮಾಡಿದ್ದಾರೆ. ಮಾನಸಿ ಕುಮಾರಿ MA ಸೈಕಾಲಜಿ ಹಾಗೂ ಗೋಕಾಕ್‌ನ ಭಕ್ತಿ ಕುಮಾರಿ ಬಿಎ, ಎಲ್‌ಎಲ್‌ಬಿ ಮಾಡಿದ್ದಾರೆ. ಇವರೊಬ್ಬರು ಜೈನ ದೀಕ್ಷೆ ಪಡೆಯುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಂಭ್ರಮದಲ್ಲಿ ಭಾಗಿಯಾದ ಇಬ್ಬರ ಕುಟುಂಬಸ್ಥರು ಅಭಿನಂದನೆ ತಿಳಿಸಿದರು.ಇವರಿಬ್ಬರ ಸನ್ಯಾಸತ್ವ ಸ್ವೀಕಾರ ಕಾರ್ಯಕ್ರಮವು ನವೆಂಬರ್ 17ಕ್ಕೆ ಜಾರ್ಖಂಡ್‌ನಲ್ಲಿ ನಡೆಯಲಿದೆ.

ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ Read More »