Editor

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಹೋಮ್ ಸ್ಟೇವೊಂದಕ್ಕೆ ಬೆಂಗಳೂರಿನ ಪ್ರವಾಸಿಗರನ್ನು ಕರೆ ತಂದಿದ್ದ ಟಿಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅ.06 ರಂದು ವರದಿಯಾಗಿದೆ. ಬೆಂಗಳೂರಿನ ಸೋಮನಹಳ್ಳಿ ನಿವಾಸಿಯಾಗಿರುವ ಅವಿನಾಶ್(25) ರವರು ಅ.06 ರಂದು ಬೆಳಗ್ಗೆ ಬೆಂಗಳೂರಿನ ಪ್ರವಾಸಿಗರನ್ನು ಚಿಕ್ಕಮಗಳೂರಿಗೆ ಟಿಟಿ ವಾಹನದಲ್ಲಿ ಕರೆ ತಂದಿದ್ದಾನೆ.ಪ್ರವಾಸಿಗರನ್ನು ನಗರ ಸಮೀಪದ ಹೋಮ್ ಸ್ಟೇವೊಂದಕ್ಕೆ ಬಿಟ್ಟಿದ್ದು, ಕೆಲವೇ ಹೊತ್ತಿನಲ್ಲಿ ಚಾಲಕ ಹೃದಯಾಘಾತಕ್ಕೊಳಗಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಚಿಕ್ಕಮಗಳೂರು […]

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು Read More »

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಹಿಂಗಾರು ಮಳೆ ಸುರಿದಿದ್ದು, ಮಳೆ ಸಂಬಂಧಿ ಅವಘಡಗಳಿಗೆ ಮೂವರು ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಗ್ರಾಮದಲ್ಲಿ ಮಳೆ ಸಂದರ್ಭ ಮನೆಯಿಂದ ಹೊರಬಂದ ಚಂದ್ರು ಗೌಡ್ತಿ (90) ಎಂಬುವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಗ್ರಾಮದ ಬಣಕಾರ ನಾರಪ್ಪ (62) ಮತ್ತು ಬಣಕಾರ

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕ್ಕಿಂಗ್ ಮಾಡಬೇಕಾಗುತ್ತದೆ.ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ. ಈ ಸಲ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ.ಬುಕ್ಕಿಂಗ್ ರಹಿತರಾಗಿ

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ Read More »

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ Read More »

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ಸಮಗ್ರ ನ್ಯೂಸ್: ರೆಗ್ಯುಲ‌ರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ Read More »

Helth tips: ರಾಮಫಲ ಹಣ್ಣಿನ ಆರೋಗ್ಯ ಉಪಯೋಗಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಾಮಫಲ ರಕ್ತದಲ್ಲಿನ ಗ್ಲೋಕೋಸ್‌ನ್ನು ಕಡಿಮೆ ಮಾಡುವ ಗುಣವನ್ನು ಹೊಂದಿರುವುದರಿಂದ ಮಧುಮೇಹ ಪೀಡಿತರಿಗೆ ಇದು ಪ್ರಯೋಜನಕಾರಿ.ಇದು ಮಧುಮೇಹಕ್ಕೆ ಪರಿಪೂರ್ಣವಾದ ಖನಿಜಗಳನ್ನು ಹೊಂದಿರುತ್ತದೆ. ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಸಿಹಿಯ ವಿಷಯಕ್ಕೆ ಬಂದರೆ, ಸೀತಾಫಲಕ್ಕಿಂತ ರಾಮಹಣ್ಣು ಕಡಿಮೆ ಸಿಹಿಯಾಗಿರುತ್ತದೆ. ಅದಕ್ಕಾಗಿಯೇ ಮಧುಮೇಹಿಗಳು ಈ ಹಣ್ಣನ್ನು ತಿನ್ನಬಹುದು.ಇದರ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ರಾಮ ಫಲದಲ್ಲಿ ವಿಟಮಿನ್ ಬಿ ಮತ್ತು ವಿಟಮಿನ್ ಸಿ ಅಧಿಕವಾಗಿದೆ. ನಿಮ್ಮ ಚರ್ಮ ಮತ್ತು ಕೂದಲು

Helth tips: ರಾಮಫಲ ಹಣ್ಣಿನ ಆರೋಗ್ಯ ಉಪಯೋಗಗಳು Read More »

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಪ್ರಾರಂಭವಾಗಿ ಒಂದು ವಾರ ಕಳೆಯಿತು. ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದು ಅವರಿಗೆ ಮಾತ್ರವಲ್ಲದೆ ಎಲ್ಲರಿಗೂ ಶಾಕ್ ಎಂದೆ ಹೇಳಬಹುದು. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ Read More »

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ

ಸಮಗ್ರ ನ್ಯೂಸ್: ಮುಸ್ಲಿಂ ಮುಖಂಡ, ಇಲ್ಲಿನ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಬಿ.ಎಂ.ಮುಮ್ತಾಜ್ ಅಲಿ (52) ಅವರು ಭಾನುವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದಾರೆ. ಅವರ ಬಿಎಂಡಬ್ಲ್ಯು ಕಾರು ನಗರದ ಹೊರವಲಯದ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಶೋಧಕಾರ್ಯ ನಡೆದಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕರಾವಳಿ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಆರೇಳು ದೋಣಿಗಳಲ್ಲಿ

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ Read More »

ಪ್ರವಾಸಕ್ಕೆ ತೆರಳಿದ್ದಾಗ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಇನ್ನೋರ್ವ ವಿದ್ಯಾರ್ಥಿ ಧನುಶ್ .ಡಿ. ಯನ್ನು ರಕ್ಷಣೆ ಮಾಡಲಾಗಿದೆ. ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ವೇಗಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, 

ಪ್ರವಾಸಕ್ಕೆ ತೆರಳಿದ್ದಾಗ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು Read More »

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ

ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ Read More »