Editor

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು

ಸಮಗ್ರ ನ್ಯೂಸ್ : ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್ ಬೆಂಗಳೂರಿನಲ್ಲಿ ಸಾಫ್ಟ್‌ವೇ‌ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.ಕೆಲ ತಿಂಗಳುಗಳಿಂದ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್ […]

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು Read More »

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ Read More »

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ Read More »

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ

ಸಮಗ್ರ ನ್ಯೂಸ್ : ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್ ಆಗುತ್ತಿದ್ದರು. ಈ ಹಿಂದೆ ಕೆಲಸ ಅವಧಿ, ನಟಿ ಕರೀನಾ ಕಪೂರ್ ಕುರಿತ ಹೇಳಿಕೆಯಿಂದಾಗಿ ನಾರಾಯಣಮೂರ್ತಿ ವ್ಯಾಪಕ ಚರ್ಚೆಯಲ್ಲಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ 50 ಕೋಟಿ ರೂಪಾಯಿ ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಇದೀಗ ಈ ವಿಷಯವಾಗಿ ನೆಟ್ಟಿಗರು ನಾರಾಯಣಮೂರ್ತಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ನಾರಾಯಣಮೂರ್ತಿ

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ Read More »

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್

ಸಮಗ್ರ ನ್ಯೂಸ್: ಅದಾನಿ ವಿರುದ್ಧ ಯುಎಸ್ ನಲ್ಲಿ ದೋಷಾರೋಪಣೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸಂಸದರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ’ ಅವರ ಚಿತ್ರವಿರುವ ಆಕರ್ಷಕ ಬ್ಯಾಗ್ ನ್ನು ಧರಿಸಿಕೊಂಡು ಸಂಸತ್ತಿಗೆ ಬಂದಿದ್ದು, ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.ಪ್ರಿಯಾಂಕ ಧರಿಸಿರುವ ಆಕರ್ಷಕ ಬ್ಯಾಗ್ ನೋಡಿದ ರಾಹುಲ್ ಗಾಂಧಿ, “ಇದು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದಾರೆ. ಆರಂಭದಲ್ಲಿ, ಮೋದಿ-ಅದಾನಿ ಚಿತ್ರವನ್ನು

ಸಂಸತ್ತಿಗೆ ಮೋದಿ, ಅದಾನಿ ಚಿತ್ರವಿರುವ ಆಕರ್ಷಕ ಬ್ಯಾಗ್ ಧರಿಸಿಕೊಂಡು ಬಂದ ಪ್ರಿಯಾಂಕ: ‘ತುಂಬಾ ಚೆನ್ನಾಗಿದೆ’ ಎಂದ ರಾಹುಲ್ Read More »

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್ :ಮುಂಬೈನಲ್ಲಿ ಡಿ. 09 ರಂದು ರಾತ್ರಿ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 49 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮುಂಬೈನ ನಾಗರಿಕ ಸಾರಿಗೆ ಸಂಸ್ಥೆ ಬೆಸ್ಟ್ ಬಸ್ ಪಾದಚಾರಿಗಳಿಗೆ ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದು ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಕುರ್ಲಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ನಂತರ ಬಸ್ ಚಾಲಕನನ್ನು ಬಂಧಿಸಲಾಗಿದೆ. ಬಸ್,

ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ Read More »

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ. ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ| ಡಿ.11ರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ(ಡಿ. ೧೧) ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ| ಡಿ.11ರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ Read More »

ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು

ಸಮಗ್ರ ನ್ಯೂಸ್ :ಬೈಕ್‌ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಡಿ. 09 ರಂದು ಸಂಜೆ 4.30ರ ಸುಮಾರಿಗೆ ಸಂಭವಿಸಿದೆ. ರಂಜಿತ್ ಬಲ್ಲಾಳ್ ಮಂಗಳೂರು ಮೂಲದ ಕೆ.ಬಿ. ಯುವರಾಜ ಬಲ್ಲಾಳ್ ಅವರ ಪುತ್ರ. ಇವರು ಕುಟುಂಬಸ್ಥರೊಂದಿಗೆ 3 ದಿನಗಳ ಹಿಂದೆ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ರಂಜಿತ್

ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು Read More »

ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಏಕನಾಥ್

ಸಮಗ್ರ ನ್ಯೂಸ್ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮರಾಠಿ ಭಾಷಿಗರು ಸಮಾವೇಶ ಏರ್ಪಡಿಸಿದ್ದರು. ಈ ದೇಶದಲ್ಲಿ ಎಲ್ಲಿ ಬೇಕಾದರೂ ವಾಸ ಮಾಡಬಹುದು, ಎಲ್ಲಿ ಬೇಕಾದರೂ ಹೋಗಬಹುದು, ಸಮ್ಮೇಳನ ಆಯೋಜಿಸಬಹುದು.ಆದರೆ ಕರ್ನಾಟಕ ಸರ್ಕಾರ ದಬ್ಬಾಳಿಕೆಯ ಚಕ್ರವನ್ನು ಬೀಸಿ ಸಮ್ಮೇಳನವನ್ನು ಆಯೋಜಿಸಿದ್ದ ಮೇಯ‌ರ್, ಶಾಸಕರು ಸೇರಿದಂತೆ ಮರಾಠಿ ಏಕೀಕರಣ ಸಮಿತಿಯ 100ಕ್ಕೂ ಹೆಚ್ಚು ಮರಾಠಿ ಭಾಷಿಕ ಸಹೋದರ-ಸಹೋದರಿಯರನ್ನು ಬಂಧಿಸಿದೆ ಎಂದು ವಾಗ್ದಾಳಿ ನಡೆಸಿದರು. ದೇಶಕ್ಕಾಗಿ ಹೋರಾಡಿದ ವೀರ

ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಏಕನಾಥ್ Read More »