Editor

ಹೆತ್ತವರಲ್ಲಿ ಅತ್ಯಾಚಾರ ಎಂದರೇನು? ಎಂದು ಕೇಳಿದ್ದ ಬಾಲಕಿ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: 14ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನ ನಾಗಾಂವ್ ನಲ್ಲಿ ನಡೆದಿದೆ. ಈ ಘಟನೆಯ ಎರಡು ದಿನದ ಮೊದಲು ತನ್ನ ಚಿಕ್ಕಮ್ಮನ ಬಳಿ ಅತ್ಯಾಚಾರವೆಂದರೇನು ಎಂದು ಆಕೆ ಕೇಳಿದ್ದಳಂತೆ. ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ತಿಳಿದ ಬಾಲಕಿ ಅತ್ಯಾಚಾರದ ಬಗ್ಗೆ ಪ್ರಶ್ನೆ ಮಾಡಿದ್ದಳು ಎಂದು ಬಾಲಕಿ ಸಂಬಂಧಿ ತಿಳಿಸಿದ್ದಾರೆ. ಈ ಘಟನೆ ಬಳಿಕ ಮನಸ್ಸು ಛಿದ್ರ ಛಿದ್ರವಾಗಿದೆ ಎಂದಿದ್ದಾರೆ. ಇಷ್ಟೊಂದು ಘೋರ ಘಟನೆ ನಡೆಯುತ್ತದೆ ಎಂದು ಎಂದೂ ಯೋಚಿಸಿರಲಿಲ್ಲ, […]

ಹೆತ್ತವರಲ್ಲಿ ಅತ್ಯಾಚಾರ ಎಂದರೇನು? ಎಂದು ಕೇಳಿದ್ದ ಬಾಲಕಿ ಮೇಲೆ ಅತ್ಯಾಚಾರ Read More »

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ನಾಳೆ ಅಧಿಕೃತ ಚಾಲನೆ

ಸಮಗ್ರ ನ್ಯೂಸ್‌: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ನಾಳೆ ಅಧಿಕೃತ ಚಾಲನೆ ಸಿಗಲಿದ್ದು, ಭಾರತದಿಂದ ದಾಖಲೆಯ 84 ಸ್ಪರ್ಧಿಗಳು ಈ ಬಾರಿ ಭಾಗವಹಿಸಲಿದ್ದಾರೆ. ಕಳೆದ ಟೋಕಿಯೊದಲ್ಲಿ 19 ಪದಕ ಗೆದ್ದಿದ್ದ ಭಾರತ ಈ ಬಾರಿ 25 ಪದಕ ಗುರಿಯನ್ನಿಟ್ಟುಕೊಂಡಿದೆ. ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬೈಂಡ್, ಟೇಬಲ್‌ ಟೆನಿಸ್‌ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ/ ನಾಳೆ ಅಧಿಕೃತ ಚಾಲನೆ Read More »

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೈದಾನದ ಸಮೀಪ ಪತ್ತೆಯಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ Read More »

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಮದ್ಯದ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರೀಮಿಯಂ ಮದ್ಯದ ದರ ಇಳಿಸಿ, ಬಿಯರ್ ದರ ಹೆಚ್ಚಿಸಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮಂಗಳವಾರದಿಂದ ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ಮದ್ಯಗಳು ಲಭ್ಯವಾಗಲಿವೆ. ಪ್ರೀಮಿಯಂ ಮದ್ಯದ ಮೇಲೆ ಗರಿಷ್ಠ 600 ರೂ.ವರೆಗೆ ದರ ಇಳಿಯಲಿದೆ. ಜತೆಗೆ, ಬಿಯರ್ ಬಾಟಲ್ ಮೇಲೆ 20 ರೂ. ಹೆಚ್ಚಿಸಲಾಗಿದೆ. ರಾಜ್ಯದಲ್ಲಿ 32ಕ್ಕಿಂತ ಅಧಿಕ ಮದ್ಯ ತಯಾರಿಕಾ ಕಂಪನಿಗಳು ಬ್ಯಾಂಡ್‌ನಡಿ ಮದ್ಯ ತಯಾರಿಸಿ ಸರ್ಕಾರಕ್ಕೆ ಮಾರಾಟ ಮಾಡುತ್ತಿವೆ. ಬ್ರಾಂಡ್ ಗಳ ಬೆಲೆಯ ಅನುಸಾರ 18 ಸ್ಟ್ರಾಬ್‌ಗಳಾಗಿ

ಮದ್ಯಪ್ರಿಯರಿಗೆ ಗುಡ್ ನ್ಯೂಸ್| ಮದ್ಯದ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ| ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಸಮಗ್ರ ನ್ಯೂಸ್: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದರು. ಇಂದು (ಆ.27) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ (ಆ. 31 ರವರೆಗೆ) ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ

ಬೆಳ್ತಂಗಡಿ: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ| ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್ Read More »

ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುವುದು ಎಂದು ಸಿಎಂ ಗೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯಾಲಯದ ಅದೇಶ ಪಡೆದು ಪರಪ್ಪನ ಅಗ್ರಹಾರದ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತೇವೆ ಎಂದು ಸಿಎಂಗೆ ಮಾಹಿತಿ ನೀಡಿದ್ದಾರೆ. ದರ್ಶನರಿಗೆ ಜೈಲಿನಲ್ಲಿ ರಾಜ್ಯಾತಿಥ್ಯದ ಫೋಟೋ ವೈರಲ್ ಬೆನ್ನಲ್ಲೇ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ವರ್ಗಾವಣೆ ಮಾಡಿ ಎಂದು ಸಿಎಂ ಖಡಕ್ ಸೂಚನೆ ನೀಡಿದ್ದರು. ಸಿಎಂ ತಾಕೀತು ಬೆನ್ನಲ್ಲೇ ದರ್ಶನರನ್ನು ಬಳ್ಳಾರಿ ಜೈಲಿಗೆ

ದರ್ಶನರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ತೀರ್ಮಾನ Read More »

ಕಾರ್ಕಳ ಅತ್ಯಾಚಾರ ಪ್ರಕರಣ| ಮತ್ತೊರ್ವ ಆರೋಪಿ ಅಭಯ್ ಅರೆಸ್ಟ್| ಈತ ಬಿಜೆಪಿ ಕಾರ್ಯಕರ್ತನಂತೆ!!

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಎಂದು ಗುರುತಿಸಲಾಗಿದೆ. ಅತ್ಯಾಚಾರಿ ಅಲ್ತಾಫ್ ಗೆ ಡ್ರಗ್ಸ್ ಪೂರೈಕೆ ಮಾಡಿದ ಹಿನ್ನಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ, ಕಾರ್ಕಳ ತೆಲ್ಲಾರು ನಿವಾಸಿ ಅಭಯ್ ಶಾಸಕ ಸುನೀಲ್ ಕುಮಾರ್‌ ಅವರ ಭಕ್ತ, ಬಿಜೆಪಿ ಕಾರ್ಯಕರ್ತ, ಭಜರಂಗದಳ ಕಾರ್ಯಕರ್ತನೂ ಆಗಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ| ಮತ್ತೊರ್ವ ಆರೋಪಿ ಅಭಯ್ ಅರೆಸ್ಟ್| ಈತ ಬಿಜೆಪಿ ಕಾರ್ಯಕರ್ತನಂತೆ!! Read More »

ಮತ್ತೆ ಕನ್ನಡ ಸಿನಿಮಾ ಮಾಡೋದಾಗಿ ಸುಳಿವು ಕೊಟ್ಟ ಕರಾವಳಿ ಬೆಡಗಿ

ಸಮಗ್ರ ನ್ಯೂಸ್: ಕರಾವಳಿ ಬೆಡಗಿ ನೇಹಾ ಶೆಟ್ಟಿ ಕನ್ನಡ ಸಿನಿಮಾದಲ್ಲಿ ನಟಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಅವರು ಮಾತನಾಡಿ, ಕನ್ನಡದಲ್ಲಿ ಎಷ್ಟು ಒಳ್ಳೆಯ ಸಿನಿಮಾ ಬರುತ್ತಿದೆ. ‘ಕಾಂತಾರ’ ಚಿತ್ರಕ್ಕೆ ನ್ಯಾಷನಲ್ ಅವಾರ್ಡ್ ಬಂದಿದೆ ಇದರ ಬಗ್ಗೆ ಖುಷಿ ಇದೆ ಎಂದಿದ್ದಾರೆ. ಬಳಿಕ ನೇಹಾ ಶೆಟ್ಟಿ ಕನ್ನಡಕ್ಕೆ ಬರುವ ಬಗ್ಗೆ ಪ್ಲ್ಯಾನ್ ಮಾಡಿದ್ದಾರೆ. ಕನ್ನಡದ ಸ್ಕ್ರಿಪ್ಟ್‌ಗಳನ್ನು ಕೇಳುತ್ತಿರುವ ನೇಹಾ ಶೆಟ್ಟಿ, ಒಂದು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದಾರೆ. ಅದು ಕಂಪ್ಲೀಟ್ ಹೊಸ ರೀತಿಯ ಪಾತ್ರವೇ ಆಗಿರಬೇಕು ಎಂಬುದು ಆಸೆ ಎಂದು

ಮತ್ತೆ ಕನ್ನಡ ಸಿನಿಮಾ ಮಾಡೋದಾಗಿ ಸುಳಿವು ಕೊಟ್ಟ ಕರಾವಳಿ ಬೆಡಗಿ Read More »

ಬಂಡಾಜೆ ಫಾಲ್ಸ್, ರಾಣಿಝರಿಗೆ ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ| ಅರಣ್ಯಾಧಿಕಾರಿಯ ಅಮಾನತುಗೊಳಿಸಿ ಆದೇಶ

ಸಮಗ್ರ ನ್ಯೂಸ್: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ.ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದೆ. ಆನ್ಲೈನ್ ಟಿಕೆಟ್

ಬಂಡಾಜೆ ಫಾಲ್ಸ್, ರಾಣಿಝರಿಗೆ ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ| ಅರಣ್ಯಾಧಿಕಾರಿಯ ಅಮಾನತುಗೊಳಿಸಿ ಆದೇಶ Read More »

ಚೆಕ್ ಬೌನ್ಸ್ ಪ್ರಕರಣ| ನಟಿ ಪದ್ಮಜಾ ರಾವ್ ಗೆ ಜೈಲುಶಿಕ್ಷೆ ಹಾಗೂ ದಂಡ

ಸಮಗ್ರ ನ್ಯೂಸ್: ಚೆಕ್ ಬೌನ್ಸ್‌ ಪ್ರಕರಣದಲ್ಲಿ ಸಿನಿಮಾ ಹಾಗೂ ಧಾರಾವಾಹಿ ನಟಿ ಪದ್ಮಜಾ ರಾವ್‌ ಅವರಿಗೆ ಇಲ್ಲಿನ 8ನೇ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 40.20 ಲಕ್ಷ ದಂಡ ವಿಧಿಸಿದೆ. ‘ಪದ್ಮಜಾ ರಾವ್ 40 ಲಕ್ಷ ಕೈಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್‌ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ ಖಾತೆಗೆ ಸಂಬಂಧಿಸಿದ ಚೆಕ್‌ ನೀಡಿದ್ದರು. ಈ ಚೆಕ್‌ ಅನ್ನು ನಗದೀಕರಿಸಲು ಹಾಕಿದಾಗ, ಪದ್ಮಜಾ ರಾವ್

ಚೆಕ್ ಬೌನ್ಸ್ ಪ್ರಕರಣ| ನಟಿ ಪದ್ಮಜಾ ರಾವ್ ಗೆ ಜೈಲುಶಿಕ್ಷೆ ಹಾಗೂ ದಂಡ Read More »