Editor

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರು ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ‌ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಸೋಮವಾರ ಸಂಜೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು […]

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ Read More »

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿ ಶಮಂತ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಖ್ಯಾತಿಯ ಶಮಂತ್ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರೋ ಗೌಡ ಅವರು ಈ ವರ್ಷ ಫೆಬ್ರವರಿ 14 ಪ್ರೇಮಿಗಳ ದಿನದಂದೇ ನಿಶ್ಚಿತಾರ್ಥ ಮಾಡಿಕೊಂಡು ಎಲ್ಲರಿಗೂ ಶಾಕ್ ಕೊಟ್ಟರು. ಮೇಘನಾ ಪ್ರೊಫೆಷನಲ್ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಮೊನ್ನೆಯಷ್ಟೆ ಶಮಂತ್​ ಬ್ರೋ ಗೌಡ ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ದ ಕಾರಣ ತಿಳಿದು ಬಂದಿದೆ. ಯುವತಿ ಆಕಾಂಕ್ಷಾ ಎಸ್ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಮೇ.17 ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್ Read More »

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು – ಬೆಂಗಳೂರು ರಾ.ಹೆದ್ದಾರಿಯ ಶಿರಾಡಿ ಘಾಟ್ ನ ಗುಂಡ್ಯದಲ್ಲಿ ನಡೆದಿದೆ. ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ Read More »

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾಚಾರ ನಡೆದಿಲ್ಲವೆಂಬುದು ಎಫ್​ಎಸ್​ಎಲ್ (FSL)​ ವರದಿಯಲ್ಲಿ ಧೃಡಪಟ್ಟಿದೆ. ರಾಮನಗರ ತಾಲೂಕಿನ ಭದ್ರಾಪುರ ‌ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊಲೆ ಅಲ್ಲ, ರೈಲು

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ‌ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್​​ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್​ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಬೀಸಲಿದ್ದು, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಮೇ 19ರಂದು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ

ಸಮಗ್ರ ನ್ಯೂಸ್: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್.ಆರ್ ನಾಯಕ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ. ಎಸ್.ಆರ್. ನಾಯಕ್ 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ Read More »

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಬೆಲೆ ಏರಿಕೆ ಬಿಸಿ ನಡುವೆಯೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಕಾದಿದೆ. ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ. ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ Read More »

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!!

ಸಮಗ್ರ ನ್ಯೂಸ್: ಅದು 13 ವರ್ಷದ ಹಿಂದಿನ ಕಥೆ ಒಡಿಶಾದ ಮಹಿಳೆಯೊಬ್ಬಳು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಚರಂಡಿಯಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡಿದ್ದಳು. ಹುಟ್ಟಿ ಬಹುಶಃ ಮೂರು ದಿನಗಳಾಗಿತ್ತು. ಆ ಮಗುವನ್ನು ತನ್ನ ಮಗುವಿನ ರೀತಿಯಲ್ಲೇ ಆಕೆ ಸಾಕಿದ್ದಳು. ಆದರೆ, 13 ವರ್ಷಗಳ ನಂತರ ಅದೇ ಹುಡುಗಿ ತನ್ನ ಇಬ್ಬರು ಬಾಯ್‌ಫ್ರೆಂಡ್‌ಗಳ ಸಹಾಯದಿಂದ ದತ್ತು ತಾಯಿಯನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿ ತನ್ನ ಇಬ್ಬರು

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!! Read More »